ಭಾರತದಲ್ಲಿ ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಭಾರತದ ಮಾರುಕಟ್ಟೆಯಲ್ಲಿ ಅಗ್ಗದ ಸ್ಮಾರ್ಟ್‌ಫೋನ್‌ಗಳಿಗೆ ಇನ್ಫಿನಿಕ್ಸ್ ಕಂಪೆನಿ ಜನಪ್ರಿಯತೆ ಪಡೆದಿದೆ. ಗ್ರಾಹಕರಿಗೆ ಕೈ ಗೆಟಕುವ ಬೆಲೆಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಮೊದಲ 5G ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಜಿರೋ 5G ಯನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕಾಸ್ಮಿಕ್ ಬ್ಲಾಕ್ ಮತ್ತು ಸ್ಕೈಲೈಟ್ ಆರೆಂಜ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ. ಇದು ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಹೊಸ ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಪಡೆದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಹಾಗಾದ್ರೆ ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಪಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS LTPS ಡಿಸ್‌ಪ್ಲೇ ಹೊಂದಿದೆ. ಇದು 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬೆಂಬಲಿಸಲಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಜೊತೆಗೆ 240Hz ಟಚ್ ಸ್ಯಾಂಪಲ್ ರೇಟ್ ಮತ್ತು 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಇನ್ಫನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ XOS 10 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 5GB ವರ್ಚುವಲ್ RAM ಅನ್ನು ಸೇರಿಸುವ ಆಯ್ಕೆಯನ್ನು ನೀಡುತ್ತದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 256GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಪಡೆದಿದೆ.

ಕ್ಯಾಮೆರಾ ಹೇಗಿದೆ?
ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ f/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಪೋರ್ಟ್ರೇಟ್ ಲೆನ್ಸ್ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಜೊತೆಗೆ 2x ಆಪ್ಟಿಕಲ್ ಜೂಮ್ ಮತ್ತು 30x ಡಿಜಿಟಲ್ ಜೂಮ್ ಅನ್ನು ಹೊಂದಿದೆ. ಇನ್ನು ಹಿಂಬದಿಯ ಕ್ಯಾಮೆರಾ ಸೆಟಪ್ ಕ್ವಾಡ್-ಎಲ್ಇಡಿ ಫ್ಲ್ಯಾಷ್ ಅನ್ನು ಕೂಡ ಹೊಂದಿದೆ. ಹಾಗೆಯೇ ಸ್ಲೋ ಮೋಷನ್, ಸೂಪರ್ ನೈಟ್ ಮೋಡ್ ಮತ್ತು 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಫೀಚರ್ಸ್ ಬೆಂಬಲಿಸುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ ಬರುತ್ತದೆ ಎಂದು ಕಂಪನಿ ಹೇಳುತ್ತದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6, ಬ್ಲೂಟೂತ್ v5, GPS, OTG, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-ಸಿ ಪೋರ್ಟ್ ಸೇರಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಲೈಟ್ ಸೆನ್ಸಾರ್, ಗೈರೊಸ್ಕೋಪ್, ಜಿ-ಸೆನ್ಸರ್, ಇ-ದಿಕ್ಸೂಚಿ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ DTS ಸರೌಂಡ್ ಸೌಂಡ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಜಿರೋ 5G ಸ್ಮಾರ್ಟ್‌ಫೋನ್ ಬೆಲೆ 8GB + 128GB ಸ್ಟೋರೇಜ್ ಮಾದರಿಗೆ 19,999ರೂ.ಆಗಿದೆ. ಈ ಫೋನ್ ಇದೇ ಫೆಬ್ರವರಿ 18 ರಿಂದ ಕಾಸ್ಮಿಕ್ ಬ್ಲಾಕ್ ಮತ್ತು ಸ್ಕೈಲೈಟ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








