Just In
Don't Miss
- Sports
ಐಪಿಎಲ್ 2021: ಔಟಾದ ಸಿಟ್ಟಿಗೆ ವಿರಾಟ್ ಕೊಹ್ಲಿ ಮಾಡಿದ್ದೇನು ನೋಡಿ! ವಿಡಿಯೋ
- News
ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡಿದ್ರೆ ಕಠಿಣ ಕ್ರಮ
- Automobiles
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- Finance
ಇನ್ಫೋಸಿಸ್ 4ನೇ ತ್ರೈಮಾಸಿಕ ವರದಿಯಂತೆ ನಿವ್ವಳ ಲಾಭ ಕುಸಿತ
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಇನ್‌ಫಿನಿಕ್ಸ್ ಜೀರೊ 8i ಸ್ಮಾರ್ಟ್‌ಫೋನ್ ಬಿಡುಗಡೆ!
ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿರುವ ಇನ್‌ಫಿನಿಕ್ಸ್ ಕಂಪನಿಯು ಇತ್ತೀಚಿಗಷ್ಟೆ ಇನ್‌ಫಿನಿಕ್ಸ್ ಜೀರೊ 8i ಫೋನ್ ಲಾಂಚ್ ಮಾಡಿತ್ತು. ಇದೀಗ ಈ ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಗೆ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್‌ನ ಆಯ್ಕೆಯನ್ನು ಒಳಗೊಂಡಿದೆ ಹಾಗೂ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದೆ.

ಹೌದು, ಇನ್‌ಫಿನಿಕ್ಸ್ ಕಂಪನಿಯು ಇನ್‌ಫಿನಿಕ್ಸ್ ಜೀರೊ 8i ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇನ್ನುಳಿದಂತೆ ಇನ್‌ಫಿನಿಕ್ಸ್ ಜೀರೊ 8i ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಇನ್‌ಫಿನಿಕ್ಸ್ ಜೀರೊ 8i ಸ್ಮಾರ್ಟ್‌ಫೋನ್ 1,080x2,460 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.85 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 20.5:9 ಡಿಸ್‌ಪ್ಲೇ ಅನುಪಾತ ಪಡೆದಿದ್ದು, 180Hz ಸಾಮರ್ಥ್ಯದ ಟಚ್ ಸಾಂಪ್ಲಿಂಗ್ ರೇಟ್ ಒಳಗೊಂಡಿದೆ.

ಪ್ರೊಸೆಸರ್ ಬಲ
ಇನ್‌ಫಿನಿಕ್ಸ್ ಜೀರೊ 8i ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G90T SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದ್ದು, ಜೊತೆಗೆ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಫೋರ್ಟ್ ಸಹ ಒಳಗೊಂಡಿದೆ.

ಕ್ವಾಡ್ ಕ್ಯಾಮೆರಾ
ಇನ್‌ಫಿನಿಕ್ಸ್ ಜೀರೊ 8i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸಲ್ ಸೆನ್ಸಾರ್ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಒಳಗೊಂಡಿದೆ. ಹಾಗೆಯೇ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ನಲ್ಲಿವೆ. ಸೆಲ್ಫಿಗಾಗಿ ಮುಂಭಾಗದಲ್ಲಿ ಎರಡು ಕ್ಯಾಮೆರಾ ನೀಡಲಾಗಿದೆ. ಮುಖ್ಯ ಕ್ಯಾಮೆರಾವು 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದ್ದು, ಸೆಕೆಂಡರಿ ಕ್ಯಾಮೆರಾ 8ಎಂಪಿ ಸೆನ್ಸಾರ್ ನೀಡಲಾಗಿದೆ.

ಬ್ಯಾಟರಿ ಬಾಳಿಕೆ
ಇನ್‌ಫಿನಿಕ್ಸ್ ಜೀರೊ 8i ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದರೊಂದಿಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ರಿಯರ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, ಆಂಬಿಯಂಟ್ ಲೈಟ್ ಸೆನ್ಸಾರ್, ಇ-ಕಾಂಪಾಸ್ ನಂತಹ ಸೌಲಭ್ಯಗಳನ್ನು ಸಹ ಪಡೆದಿದೆ.

ಬೆಲೆ ಮತ್ತು ಲಭ್ಯತೆ
ಇನ್‌ಫಿನಿಕ್ಸ್ ಜೀರೊ 8i ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್ ಬೆಲೆಯು 18,999ರೂ. ಆಗಿದೆ. ಲಾಂಚ್ ಕೊಡುಗೆಯಾಗಿ ಸಿಮೀತ ಅವಧಿಗೆ ಈ ಫೋನ್ 14,999ರೂ.ಗಳಿಗೆ ಲಭ್ಯ. ಸಿಲ್ವರ್ ಡೈಮಂಡ್ ಹಾಗೂ ಬ್ಲ್ಯಾಕ್ ಡೈಮಂಡ್ ಬಣ್ಣಗಳ ಆಯ್ಕೆ ಪಡೆದಿದೆ. ಇದೇ ಡಿಸೆಂಬರ್ 9ರಂದು ಫ್ಲಿಪ್‌ಕಾರ್ಟ್ ತಾಣದಲ್ಲಿ ಸೇಲ್ ಆರಂಭಿಸಲಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999