Infinix: 50 ಸಾವಿರದ ದೈತ್ಯ ಫೋನ್! ಇಂದು ಫಸ್ಟ್ ಸೇಲ್.. 6,500 ಡಿಸ್ಕೌಂಟ್.. ಹೀಗಿವೆ ಫೀಚರ್ಸ್
ಇನ್ಫಿನಿಕ್ಸ್ (Infinix) ಭಾರತದಲ್ಲಿ ಇತ್ತೀಚೆಗೆ ಇನ್ಫಿನಿಕ್ಸ್ ಝೀರೋ ಫ್ಲಿಪ್ 5G (Infinix Zero Flip 5G) ಫೋನನ್ನು ಬಿಡುಗಡೆ ಮಾಡಿದೆ. ಇದು ಕಂಪನಿಯ ಮೊಟ್ಟ ಮೊದಲ ಫ್ಲಿಪ್ ಮೊಬೈಲ್ ಆಗಿದೆ. ಅಂದಹಾಗೆ, ಈ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್ ಇಂದಿನಿಂದ (ಅಕ್ಟೋಬರ್ 24) ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ವಿಶೇಷವೆಂದರೆ, ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಫೋನನ್ನು 50 ಸಾವಿರ ರೂ.ಗಳ ಬಜೆಟ್‌ನಲ್ಲಿ ಪರಿಚಯಿಸಲಾಗಿದೆ. ಇದು ಕೇವಲ ಒಂದೇ ಸ್ಟೋರೇಜ್ ಆಯ್ಕೆ ಹೊಂದಿದೆ. ನೀವು, ರಾಕ್ ಬ್ಲಾಕ್ ಮತ್ತು ಬ್ಲಾಸಮ್ ಗ್ಲೋ ಬಣ್ಣಗಳಲ್ಲಿ ಖರೀದಿಸಬಹುದು. ಇದು ಆಕ್ಟಾಕೋರ್ ಡೈಮೆನ್ಸಿಟಿ 8020 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಫೋನ್ 6.9 ಇಂಚಿನ ಪ್ರಾಥಮಿಕ ಡಿಸ್ಪ್ಲೇ ಮತ್ತು 3.64 ಇಂಚಿನ ಕವರ್ ಡಿಸ್ಪ್ಲೇ ಹೊಂದಿದೆ. ಜೊತೆಗೆ, 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ, 4720mAh ಬ್ಯಾಟರಿ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ಮಾರಾಟವಾಗಲಿದೆ.

ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಬೆಲೆ ಮತ್ತು ಆಫರ್‌ಗಳು
ಕಂಪನಿಯು ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನಿನ 8GB RAM + 512GB ಸ್ಟೋರೇಜ್ ರೂಪಾಂತರವನ್ನು 49,999 ರೂ.ಗೆ ಮಾರಾಟ ಮಾಡಲಿದೆ. ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಇಂದು (ಅಕ್ಟೋಬರ್ 24) ಮಧ್ಯಾಹ್ನ 12 ರಿಂದ ಈ ಫೋನನ್ನು ಖರೀದಿಸಬಹುದು. ನೀವು, ಎಸ್‌ಬಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 6,500 ರೂ. ವರೆಗೆ ರಿಯಾಯಿತಿ ಪಡೆಯಬಹುದು. ಡಿಸ್ಕೌಂಟ್‌ನೊಂದಿಗೆ ಈ ಫೋನ್ 43,499 ರೂ.ಗೆ ಮಾರಾಟವಾಗಲಿದೆ.
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಇನ್ಫಿನಿಕ್ಸ್ ಝೀರೋ ಫ್ಲಿಪ್ ಮೊಬೈಲ್ 120Hz ರಿಫ್ರೆಶ್ ದರದೊಂದಿಗೆ 6.9 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ LTPO ಅಮೋಲೆಡ್ ಮುಖ್ಯ ಡಿಸ್ಪ್ಲೇ ಹೊಂದಿದೆ. ಇದು 1,080 x 2,640 ಪಿಕ್ಸೆಲ್ ರೆಸಲ್ಯೂಶನ್ ಮತ್ತು 1400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಇನ್ನೂ, 120Hz ರಿಫ್ರೆಶ್ ದರದೊಂದಿಗೆ 3.64 ಇಂಚಿನ ಅಮೋಲೆಡ್ ಕವರ್ ಡಿಸ್ಪ್ಲೇ ಇದೆ. ಇದು 1,056 x 1,066 ಪಿಕ್ಸೆಲ್ ರೆಸಲ್ಯೂಶನ್ ಮತ್ತು 1,100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಜೊತೆಗೆ, ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಈ ಫೋನನ್ನು ಆಕ್ಟಾ ಕೋರ್ ಡೈಮೆನ್ಸಿಟಿ 8020 6nm ಪ್ರೊಸೆಸರ್‌ನೊಂದಿಗೆ ಪರಿಚಯಿಸಿದೆ. ಜೊತೆಗೆ, ಮಾಲಿ G77 MC9 ಜಿಪಿಯು ಹೊಂದಿದೆ. ಇದು 8GB RAM ಮತ್ತು 512GB ವರೆಗೆ ಇಂಟರ್ನಲ್ ಸ್ಟೋರೇಜ್ ಹೊಂದಿದೆ. ನೀವು, ವಿಸ್ತೃತ ಬೆಂಬಲದೊಂದಿಗೆ 16GB RAM ವರೆಗೆ ಶಕ್ತಿಯನ್ನು ಬಳಸಬಹುದು. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ XOS 14.5 ನಲ್ಲಿ ಕೆಲಸ ನಿರ್ವಹಿಸುತ್ತದೆ.

ಕ್ಯಾಮೆರಾ ಸೆಟಪ್
ಈ ಸ್ಮಾರ್ಟ್‌ಫೋನ್ OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಜೊತೆಗೆ, ಡ್ಯುಯಲ್ ಎಲ್‌ಇಡಿ ಫ್ಲ್ಯಾಷ್ ಮತ್ತು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಕ್ಯಾಮೆರಾ ಹೊಂದಿದೆ. ಇದು ಎಲ್ಇಡಿ ಮತ್ತು ಸ್ಕ್ರೀನ್ ಫ್ಲ್ಯಾಷ್‌ನೊಂದಿಗೆ ಬರುತ್ತದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ಈ ಫ್ಲಿಪ್ ಫೋನನ್ನು 4720mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಇದನ್ನು ಚಾರ್ಜ್ ಮಾಡಲು, 70W ವೇಗದ ಚಾರ್ಜಿಂಗ್ ಸೌಲಭ್ಯ ಮತ್ತು 10W ವೈರ್ಡ್ ರಿವರ್ಸ್ ಚಾರ್ಜಿಂಗ್ ವೈಶಿಷ್ಟ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಈ ಫ್ಲಿಪ್ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸ್ಪೀಕರ್, ವೈ ಫೈ 6, ಬ್ಲೂಟೂತ್ 5.4, ಎನ್‌ಎಫ್‌ಸಿ, ಯುಎಸ್‌ಬಿ ಪೋರ್ಟ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








