ಇಂದು Infinix Zero Flip 5G ಬಿಡುಗಡೆ: ಮೊಟೊ ಮತ್ತು ಟೆಕ್ನೋಗೆ ಸವಾಲ್! ಹೀಗಿವೆ ಫೀಚರ್ಸ್
ಇನ್ಫಿನಿಕ್ಸ್ (Infinix) ತನ್ನ ಬಹುನಿರೀಕ್ಷಿತ ಇನ್ಫಿನಿಕ್ಸ್ ಝೀರೋ ಫ್ಲಿಪ್ 5G (Infinix Zero Flip 5G) ಮೊಬೈಲ್ ಅನ್ನು ಇಂದು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದು ಕಂಪನಿಯ ಮೊಟ್ಟ ಮೊದಲ ಫ್ಲಿಪ್ ಫೋನ್ ಆಗಿದೆ. ಇದು ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ವಿಶೇಷವೆಂದರೆ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್‌ನ ಮೂರು ಕ್ಯಾಮೆರಾಗಳು ಲಭ್ಯವಿದೆ. ಜೊತೆಗೆ, 70W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಈ ಫೋನಿನ ಬೆಲೆ ಮತ್ತು ಇನ್ನುಳಿದ ವೈಶಿಷ್ಟ್ಯಗಳನ್ನು ತಿಳಿಯೋಣ ಬನ್ನಿ.
ಕಂಪನಿಯು ಈಗಾಗಲೇ, ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು, ಮೊಟೊರೊಲಾ ಮತ್ತು ಟೆಕ್ನೋ ಕಂಪನಿಗೆ ಕಠಿಣ ಸ್ಪರ್ಧೆ ನೀಡುವುದು ಖಚಿತವಾಗಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು 120Hz ರಿಫ್ರೆಶ್ ದರದೊಂದಿಗೆ 6.9 ಇಂಚಿನ ಹೆಚ್‌ಡಿ ಡಿಸ್ಪ್ಲೇ ಮತ್ತು 3.6 ಇಂಚಿನ ಕವರ್ ಡಿಸ್ಪ್ಲೇಯನ್ನು ಹೊಂದಿರಲಿದೆ. ಜೊತೆಗೆ, 4720mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಫೋನಿನಲ್ಲಿವೆ ಹಲವು ಎಐ ವೈಶಿಷ್ಟ್ಯಗಳು
ಭಾರತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಮೊಬೈಲ್ ಬಿಡುಗಡೆಯಾಗಲಿದೆ. ಇದನ್ನು ಹಲವು ಎಐ (AI) ವೈಶಿಷ್ಟ್ಯಗಳೊಂದಿಗೆ ಪರಿಚಯಿಸಲಾಗುತ್ತಿದೆ. ಇದರಲ್ಲಿ ಎಐ ಎರೇಸರ್ (AI Eraser), ಸ್ಮಾರ್ಟ್ ಕಟೌಟ್ (Smart Cutout), ಎಐ ಸ್ಕೆಚ್ (AI Sketch) ಫೀಚರ್ಸ್ ಇರಲಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ನಂತರ, ಬ್ಲಾಸಮ್ ಗ್ಲೋ ಮತ್ತು ರಾಕ್ ಬ್ಲಾಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಬೆಲೆ (ನಿರೀಕ್ಷಿತ)
ಇನ್ಫಿನಿಕ್ಸ್ ಪತ್ರಿಕಾ ಪ್ರಕಟಣೆಯ ಪ್ರಕಾರ, ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನಿನ ಬೆಲೆ 50,000 ರೂ.ಗಿಂತ ಕಡಿಮೆಯಿರುವ ನಿರೀಕ್ಷೆಯಿದೆ. ಇದು ಮಾರುಕಟ್ಟೆಯಲ್ಲಿರು ಉತ್ತಮ ಫ್ಲಿಪ್ ಫೋನ್‌ಗಳಲ್ಲಿ ಒಂದಾಗಿರಲಿದೆ. ಇದರ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚು ಆಕರ್ಷಣೆಯಾಗಿರಲಿದೆ. ನೀವು, ಈ ಫೋನನ್ನು ನೋ ಕಾಸ್ಟ್ ಇಎಂಐ ಆಯ್ಕೆಯೊಂದಿಗೆ ಖರೀದಿಸಬಹುದು.
ಈ ಸುದ್ದಿ ಓದಿದ್ದೀರಾ?: Realme: ಈ 5G ಫೋನಿನ ಬೆಲೆ ದಿಢೀರ್ ಕುಸಿತ! 2,499 ರೂ.ನ ಇಯರ್‌ಬಡ್ ಉಚಿತ.. 2,500 ಡಿಸ್ಕೌಂಟ್!
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೀಚರ್ಸ್ (ನಿರೀಕ್ಷಿತ)
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಮೊಬೈಲ್ 120Hz ರಿಫ್ರೆಶ್ ದರದೊಂದಿಗೆ 6.9 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ LTPO ಅಮೋಲೆಡ್ ಪ್ರಾಥಮಿಕ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು 1,080 x 2,640 ಪಿಕ್ಸೆಲ್‌ಗಳ ರೆಸಲ್ಯೂಶನ್, 1,400 ನಿಟ್ಸ್ ಪೀಕ್ ಬ್ರೈಟ್‌ನೆಸ್ ಮತ್ತು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿರಲಿದೆ. ಇದು 120Hz ರಿಫ್ರೆಶ್ ದರದೊಂದಿಗೆ 3.64 ಇಂಚಿನ ಕವರ್ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು 1056 x 1066 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ.
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನ್ ಮೀಡಿಯಾ ಟೆಕ್ ಡೈಮೆನ್ಶನ್ 8020 ಆಕ್ಟಾಕೋರ್ ಪ್ರೊಸೆಸರ್ ಹೊಂದಿರಲಿದೆ. ಈ ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇರಲಿದೆ.
ಕಂಪನಿಯು ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನನ್ನು 4,720mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಪರಿಚಯಿಸಲಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, 70W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಮತ್ತು 10W ವೈರ್ಡ್ ರಿವರ್ಸ್ ಚಾರ್ಜಿಂಗ್ ವೈಶಿಷ್ಟ್ಯ ಸಹ ಲಭ್ಯವಿರಲಿದೆ. ಈ ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, ವೈ ಫೈ, ಬ್ಲೂಟೂತ್ 5.4, ಜಿಪಿಎಸ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








