ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ಕೊಡಲಿದೆ 'ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G ಫೋನ್‌'!

|

ಮೊಬೈಲ್‌ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಇನ್ಫಿನಿಕ್ಸ್‌ ಕಂಪೆನಿ ಇತ್ತೀಚಿಗೆ ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಹೊಸ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G ಫೋನ್‌ ಅನಾವರಣ ಮಾಡಿದೆ. ಇದೀಗ ಅತೀ ಶೀಘ್ರದಲ್ಲೇ ಈ ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡುವ ಬಗ್ಗೆ ಸೂಚನೆ ಹೊರಹಾಕಿದೆ. ಅಂದಹಾಗೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

 ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G

ಹೌದು, ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ದೇಶಿಯ ಮೊಬೈಲ್‌ ಮಾರುಕಟ್ಟೆಗೆ ಲಾಂಚ್ ಆಗಲಿದೆ ಎಂದು ವರದಿವೊಂದರಿಂದ ತಿಳಿದು ಬಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 180W ಥಂಡರ್ ಚಾರ್ಜ್ ಅನ್ನು ಬೆಂಬಲಿಸಲಿದೆ. 120Hz ರಿಫ್ರೆಶ್‌ ರೇಟ್‌ ಬೆಂಬಲಿಸುವ 3D ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G ಸ್ಮಾರ್ಟ್‌ಫೋನ್‌ 6.8 ಇಂಚಿನ 3D ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 90.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ XOS 12 ಓಎಸ್‌ ನಲ್ಲಿ ರನ್‌ ಆಗಲಿದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದರಲ್ಲಿ 5GB ವರೆಗೆ RAM ಅನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 180W ಥಂಡರ್ ಚಾರ್ಜ್‌ ಬೆಂಬಲಿಸಲಿದ್ದು, 12 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಲಿದೆ ಎಂದು ಹೇಳಲಾಗಿದೆ. ಫ್ಯ್ಲಾಶ್‌ ಚಾರ್ಜ್‌ಗಾಗಿ ಡ್ಯುಯಲ್ ಮೋಡ್, ಸ್ಟ್ಯಾಂಡರ್ಡ್ ಮೋಡ್ ಮತ್ತು ಫ್ಯೂರಿಯಸ್ ಮೋಡ್‌ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಜಿಪಿಎಸ್, ಬ್ಲೂಟೂತ್, ಯುಎಸ್‌ಬಿ ಸಿ-ಟೈಪ್ ಪೋರ್ಟ್, 5ಜಿ ಮತ್ತು ವೈಫೈ 6 ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G ಸ್ಮಾರ್ಟ್‌ಫೋನ್‌ 8GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ $ 520 (ಭಾರತದಲ್ಲಿ ಅಂದಾಜು 42,400ರೂ ) ಬೆಲೆಯನ್ನು ಹೊಂದಿದೆ. ಇದು ಕಾಸ್ಲೈಟ್ ಸಿಲ್ವರ್ ಮತ್ತು ಜೆನೆಸಿಸ್ ನಾಯರ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡುವ ಸುಳಿವು ನೀಡಿದ್ದು, ಆದರೆ ಅಧಿಕೃತ ದಿನಾಂಕವನ್ನು ಬಹಿರಂಗಪಡಿಸಿಲ್ಲ.

Best Mobiles in India

English summary
Infinix ZERO ULTRA 5G to be launched in India soon, listed on BIS.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X