Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ 200MP ಸೆನ್ಸಾರ್‌ ಸಾಮರ್ಥ್ಯದ ಈ ಫೋನ್‌ಗೆ 40% ಡಿಸ್ಕೌಂಟ್‌!

ಟೆಕ್‌ ವಲಯದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಫೋನ್‌ ಇದೀಗ ಡಿಸ್ಕೌಂಟ್‌ ಪಡೆದುಕೊಂಡಿದೆ. ಇ-ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ನಲ್ಲಿ ಮಾರಾಟವಾಗುತ್ತಿದೆ. ಈ ಮೂಲಕ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸುವುದಕ್ಕೆ ಅವಕಾಶ ದೊರೆತಿದೆ.

ಹೌದು, ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 40% ಡಿಸ್ಕೌಂಟ್‌ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಬದಲಾವಣೆ ಆಗಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ ಅನ್ವಯವಾಗಲಿದೆ. ಹಾಗಾದ್ರೆ ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ನಂತರದ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌ನಲ್ಲಿ 200MP ಸೆನ್ಸಾರ್‌ ಸಾಮರ್ಥ್ಯದ ಈ ಫೋನ್‌ಗೆ 40% ಡಿಸ್ಕೌಂಟ್‌

ಡಿಸ್ಕೌಂಟ್‌ ನಂತರದ ಬೆಲೆ ಎಷ್ಟು?
ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಸ್ಮಾರ್ಟ್‌ಫೋನಿನ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯು ಫ್ಲಿಪ್‌ಕಾರ್ಟ್‌ನಲ್ಲಿ 49,999ರೂ ಬೆಲೆಗೆ ಪಟ್ಟಿಮಾಡಲಾಗಿದೆ. ಆದರೆ ಸ್ಮಾರ್ಟ್‌ಫೋನ್‌ ಮೇಲೆ 40% ಡಿಸ್ಕೌಂಟ್‌ ನೀಡಲಾಗ್ತಿರುವುದರಿಂದ ಇದನ್ನು ಕೇವಲ 29,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದರೊಂದಿಗೆ ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 10% ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಫೀಚರ್ಸ್‌ ಹೇಗಿದೆ?
ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹಾಗೂ 1000 ಪೀಕ್ ಬ್ರೈಟ್‌ನೆಸ್ ಲೆವೆಲ್‌ ಪಡೆದಿದೆ.

ಫ್ಲಿಪ್‌ಕಾರ್ಟ್‌ನಲ್ಲಿ 200MP ಸೆನ್ಸಾರ್‌ ಸಾಮರ್ಥ್ಯದ ಈ ಫೋನ್‌ಗೆ 40% ಡಿಸ್ಕೌಂಟ್‌

ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಪ್ರೊಸೆಸರ್‌ ಯಾವುದು?
ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 6nm ಪ್ರೊಸೆಸರ್‌ನೊಂದಿಗೆ ಬರಲಿದೆ. ಇದಕ್ಕೆ ಪೂರಕವಾಗಿ ಮಾಲಿ- G68 MC4 GPU ಸಪೊರ್ಟ್‌ ಪಡೆದಿದೆ. ಇನ್ನು ಆಂಡ್ರಾಯ್ಡ್‌ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೆ 8GB RAM + 256GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ.

ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಕ್ಯಾಮೆರಾ ಸೆಟಪ್‌ ಏನಿದೆ?
ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾ ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾ ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಫ್ಲಿಪ್‌ಕಾರ್ಟ್‌ನಲ್ಲಿ 200MP ಸೆನ್ಸಾರ್‌ ಸಾಮರ್ಥ್ಯದ ಈ ಫೋನ್‌ಗೆ 40% ಡಿಸ್ಕೌಂಟ್‌

ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಒಂದಿದ್ದು, 180W ಥಂಡರ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ಆವೃತ್ತಿ 5.2, 5G NSA, ಜಿಪಿಎಸ್‌ ಮತ್ತು ವೈ-ಫೈ 802 ಸೌಲಭ್ಯ ಪಡೆದಿದೆ. ಇದರೊಂದಿಗೆ ಸ್ಟಿರಿಯೊ ಸ್ಪೀಕರ್‌ ಆಯ್ಕೆ, ಇನ್ ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಕಲರ್‌ ಮತ್ತು ಲಭ್ಯತೆ
ಇನ್ಫಿನಿಕ್ಸ್ ಜೀರೋ ಅಲ್ಟ್ರಾ ಸ್ಮಾರ್ಟ್‌ಫೋನ್‌ ಜೆನೆಸಿಸ್ ನಾಯರ್ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಫ್ಲಿಪ್‌ಕಾರ್ಟ್‌ನಲ್ಲಿ 40% ಡಿಸ್ಕೌಂಟ್‌ ಪಡೆದಿರುವುದರಿಂದ 29,999ರೂ ಬೆಲೆಯಲ್ಲಿ ದೊರೆಯಲಿದೆ. ಇದಲ್ಲದೆ ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 10% ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
Infinix Zero Ultra Smartphone Gets 40% Discount in Flipkart: Offer Details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+