Home
ಸುದ್ದಿಜಾಲ

ಐಫೋನ್‌ ಪ್ರಿಯರಿಗೆ ಮತ್ತೆ ಸಿಹಿಸುದ್ದಿ: ಐಫೋನ್‌ 12 ಮಿನಿ ಬೆಲೆಯಲ್ಲಿ ಭಾರೀ ಡಿಸ್ಕೌಂಟ್‌!

ಪ್ರಸಕ್ತ 2022 ರ ವರ್ಷವು ಮುಕ್ತಾಯದ ಹಂತಕ್ಕೆ ಬಂದಿದ್ದು, ಹೊಸ ವರ್ಷ 2023 ರ ಸ್ವಾಗತಕ್ಕೆ ಈಗಾಗಲೇ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಜನಪ್ರಿಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್ ಇಯರ್ ಎಂಡ್ ಸೇಲ್ (Flipkart Year End Sale) ಅನ್ನು ಆಯೋಜಿಸಿದೆ. ವರ್ಷದ ಈ ಕೊನೆಯ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್‌ ತಾಣವು ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ನೀಡುತ್ತಿದೆ. ಮುಖ್ಯವಾಗಿ ಆಪಲ್‌ ಐಫೋನ್‌ 12 ಮಿನಿ (iPhone 12 Mini) ಭಾರೀ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿದೆ.

ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಇಯರ್ ಎಂಡ್ ಸೇಲ್ ಆಯೋಜಿಸಿದ್ದು, ಈ ಮಾರಾಟ ಮೇಳದಲ್ಲಿ ಆಪಲ್‌ ಐಫೋನ್‌ 12 ಮಿನಿ ಫೋನ್‌ 36,999ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಗ್ರಾಹಕರು ಹೆಚ್ಚುವರಿಯಾಗಿ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನಲ್ಲಿ 5% ಕ್ಯಾಶ್‌ಬ್ಯಾಕ್ ಪಡೆಯಬಹುದು. ಹಾಗೆಯೇ ಸುಮಾರು 21,900ರೂ. ವರೆಗೆ ಎಕ್ಸ್‌ಚೇಂಜ್ ಕೊಡುಗೆಯನ್ನು (ಹಳೆಯ ಫೋನ್‌ ಕಾರ್ಯ ವೈಖರಿ) ಪಡಯಲು ಅವಕಾಶವಿದೆ. ಹಾಗಾದರೆ ಐಫೋನ್‌ 12 ಮಿನಿ ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 12 ಮಿನಿ ಫೀಚರ್ಸ್‌

ಐಫೋನ್ 12 ಮಿನಿ ಫೀಚರ್ಸ್‌

ಐಫೋನ್ 12 ಮಿನಿ ಫೋನ್ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಹಾಗೆಯೇ ಐಫೋನ್ 12 ಮಿನಿ ಸಹ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇದರೊಂದಿಗೆ ಐಫೋನ್ 12 ಮಿನಿ ಫೋನ್ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಐಫೋನ್ 13 ಮಿನಿ ಫೋನ್‌ ಫೀಚರ್ಸ್‌

ಐಫೋನ್ 13 ಮಿನಿ ಫೋನ್‌ ಫೀಚರ್ಸ್‌

ಐಫೋನ್ 13 ಮಿನಿ ಫೋನ್‌ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 800nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್‌ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ.

ಅತ್ಯುತ್ತಮ

ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
iPhone 12 mini available at Huge discount on Flipkart Year End Sale.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+