Home
ಸುದ್ದಿಜಾಲ

ಐಫೋನ್‌ 12 ಬೆಲೆಯಲ್ಲಿ ಭಾರೀ ಇಳಿಕೆ!..ಇಲ್ಲಿದೆ ಮಾಹಿತಿ!

ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಒಂದಿಲ್ಲೊಂದು ಆಫರ್‌ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತ ಸಾಗಿದೆ. ಇನ್ನು ಗ್ರಾಹಕರು ಸಹ ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವಾಗ ಸೇಲ್‌ ಮೇಳ, ಡಿಸ್ಕೌಂಟ್‌ ಅಥವಾ ಇತರೆ ಕೊಡುಗೆಗಳ ನೋಡುತ್ತಾರೆ. ನೀವೇನಾದರೂ ಹೀಗೆ ಆಫರ್‌ನಲ್ಲಿ ಐಫೋನ್‌ 12 ಖರೀದಿಸುವ ಯೋಜನೆ ಹೊಂದಿದ್ದರೆ, ಅದಕ್ಕೆ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗಳು ಅತ್ಯುತ್ತಮ ವೇದಿಗೆ ಎನಿಸಿವೆ.

ಐಫೋನ್‌ 12 ಬೆಲೆಯಲ್ಲಿ ಭಾರೀ ಇಳಿಕೆ!..ಇಲ್ಲಿದೆ ಮಾಹಿತಿ!

ಹೌದು, ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ವೆಬ್‌ಸೈಟ್ ಗಳು ಐಫೋನ್ 12 ಮತ್ತು ಐಫೋನ್ 12 ಮಿನಿ ಬೆಲೆಯನ್ನು ಕಡಿತಗೊಳಿಸಿವೆ. ಈ ಎರಡೂ ಇ ಕಾಮರ್ಸ್ ಸೈಟ್‌ಗಳಲ್ಲಿ ಐಫೋನ್ 12 ಮತ್ತು ಐಫೋನ್ 12 ಮಿನಿ ಫೋನ್‌ಗಳು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಚಿಲ್ಲರೇ ರೀಟೇಲ್ ಸ್ಟೋರ್‌ಗಳಿಗಿಂತ ಈ ತಾಣಗಳಲ್ಲಿ ರಿಯಾಯಿತಿ ದರದಲ್ಲಿ ಸಿಗುತ್ತವೆ. ಫ್ಲಿಪ್‌ಕಾರ್ಟ್ ವೆಬ್‌ಸೈಟ್ ನಲ್ಲಿ ಐಫೋನ್ 12 ಫೋನ್‌ 64 ಜಿಬಿ ಸ್ಟೋರೇಜ್ ವೇರಿಯಂಟ್ ಬೆಲೆಯು 53,999ರೂ. ಆಗಿದೆ. ಹಾಗೆಯೇ ಅಮೆಜಾನ್‌ ನಲ್ಲಿ ವೆಬ್‌ಸೈಟ್ ನಲ್ಲಿ ಐಫೋನ್ 12 ಫೋನ್‌ 64 ಜಿಬಿ ಸ್ಟೋರೇಜ್ ವೇರಿಯಂಟ್ ಬೆಲೆಯು 63,900ರೂ. ಆಗಿದೆ.

ಐಫೋನ್‌ 12 ಬೆಲೆಯಲ್ಲಿ ಭಾರೀ ಇಳಿಕೆ!..ಇಲ್ಲಿದೆ ಮಾಹಿತಿ!

ಇನ್ನು ಐಫೋನ್ 12 ಮಿನಿ ಫೋನಿನ 64 ಜಿಬಿ ಸ್ಟೋರೇಜ್ ವೇರಿಯಂಟ್ ಬೆಲೆಯು ಫ್ಲಿಪ್‌ಕಾರ್ಟ್ ವೆಬ್‌ಸೈಟ್ ನಲ್ಲಿ 40,999ರೂ. ಆಗಿದೆ. ಹಾಗೆಯೇ ಅಮೆಜಾನ್‌ ನಲ್ಲಿ ವೆಬ್‌ಸೈಟ್ ನಲ್ಲಿ ಐಫೋನ್ 12 ಮಿನಿ ಫೋನಿನ 64 ಜಿಬಿ ಸ್ಟೋರೇಜ್ ವೇರಿಯಂಟ್ ಬೆಲೆಯು 59,900ರೂ. ಆಗಿದೆ. ಹಾಗಾದರೇ ಐಫೋನ್ 12 ಮತ್ತು ಐಫೋನ್ 12 ಮಿನಿ ಫೋನಿನ ಫೀಚರ್ಸ್‌ ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 12 ಫೋನ್ ಫೀಚರ್ಸ್‌
ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇನ್ನು ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಗಳಲ್ಲಿ ಸಿಗಲಿದೆ.

ಐಫೋನ್‌ 12 ಬೆಲೆಯಲ್ಲಿ ಭಾರೀ ಇಳಿಕೆ!..ಇಲ್ಲಿದೆ ಮಾಹಿತಿ!

ಐಫೋನ್ 12 ಮಿನಿ ಫೋನ್ ಫೀಚರ್ಸ್‌
ಐಫೋನ್ 12 ಮಿನಿ 5.4-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಇದು ಸಹ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ಬಹುತೇಕ ಐಫೋನ್ 12 ಫೀಚರ್ಸ್‌ಗಳನ್ನು ಹೊಂದಿದ್ದು, ಗಾತ್ರದಲ್ಲಿ ಮಾತ್ರ ವ್ಯತ್ಯಾಸವಿದೆ. ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಐಫೋನ್ 13 ಫೋನ್‌ ಫೀಚರ್ಸ್‌
ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

Best Mobiles in India

English summary
iPhone 12 Price Cut: Avail at Discount Price on Flipkart and Amazon: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+