Just In
- 1 min ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 1 hr ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 17 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 17 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
Don't Miss
- News
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಜನ್ಮದಿನ: ತಂದೆ ತಾಯಿಯ ಸಮಾಧಿಗೆ ಪೂಜೆ ಸಲ್ಲಿಸಿದ ಸಿಎಂ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Movies
ಮಂಗ್ಲಿ ಹಾಡೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಹೇಗಿದೆ?
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Sports
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್ಗೆ ಅವಕಾಶ ಇಲ್ಲ: ಬಿಸಿಸಿಐ ನೀಡಿದ ಭರವಸೆ ಏನು?
- Finance
ಹಿಂಡನ್ಬರ್ಗ್ vs ಅದಾನಿ ನಡುವೆ ಎಲ್ಐಸಿ, ಎಸ್ಬಿಐ ಉಳಿತಾಯ ರಿಸ್ಕ್ನಲ್ಲಿದೆಯೇ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಐಫೋನ್ 14 ಲಾಂಚ್ ಬೆನ್ನಲ್ಲೇ, ಈ ಐಫೋನ್‌ಗಳ ಬೆಲೆಯಲ್ಲಿ ಭಾರೀ ಇಳಿಕೆ!
ಆಪಲ್ ಕೊನೆಗೂ ತನ್ನ ಬಹುನಿರೀಕ್ಷಿತ ಐಫೋನ್ 14 ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯು ಐಫೋನ್ 14, ಐಫೋನ್ 14 ಪ್ಲಸ್ ಐಫೋನ್ 14 ಪ್ರೊ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್ ಮಾದರಿಗಳನ್ನು ಒಳಗೊಂಡಿದೆ. ಐಫೋನ್ 14 ಸರಣಿಯ ಬಿಡುಗಡೆ ಬೆನ್ನಲ್ಲೇ ಸಂಸ್ಥೆಯ ಐಫೋನ್ 13 ಮತ್ತು ಐಫೋನ್ 12 ಫೋನ್‌ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ.

ಹೌದು, ಜನಪ್ರಿಯ ಆಪಲ್ ಸಂಸ್ಥೆಯು ಐಫೋನ್ 14 ಸರಣಿ ಲಾಂಚ್ ಮಾಡಿ ವಿಶ್ವದ ಗಮನ ಸೆಳೆದಿದ್ದು, ಐಫೋನ್ 14 ಸರಣಿಯ ಆರಂಭಿಕ ಬೆಲೆಯು 79,990ರೂ. ಆಗಿದೆ. ಹಾಗೆಯೇ ಸಂಸ್ಥೆಯ ಐಫೋನ್ 13 ಮತ್ತು ಐಫೋನ್ 12 ಫೋನ್‌ಗಳ ಬೆಲೆಗಳಲ್ಲಿ ಈಗ ಭಾರೀ ಕಡಿತವಾಗಿದ್ದು, ನೂತನ ಐಫೋನ್ ಖರೀದಿಸುವ ಗ್ರಾಹಕರಿಗೆ ಭರ್ಜರಿ ಖುಷಿ ಎನಿಸಿದೆ. ಬೆಲೆ ಇಳಿಕೆ ಬಗ್ಗೆ ಅಚ್ಚರಿ ಪಡುವ ಅಗತ್ಯವಿಲ್ಲ. ಏಕೆಂದರೇ ಪ್ರತಿ ವರ್ಷ ಆಪಲ್ ಹೊಸ ಸರಣಿ ಪರಿಚಯಿಸಿದ ಬಳಿಕ ಹಿಂದಿನ ಕೆಲವು ಮಾದರಿಗಳ ಬೆಲೆಯಲ್ಲಿ ಇಳಿಕೆ ಆಗುತ್ತದೆ.

ಇನ್ನು ಐಫೋನ್ 13 ಫೋನ್ 128GB ಸ್ಟೋರೇಜ್‌ನ ವೇರಿಯಂಟ್ ಇದೀಗ 69,990 ರೂ.ಗಳಿಗೆ ಖರೀಗೆ ಲಭ್ಯ. ಹಾಗೆಯೇ ಇದರೊಂದಿಗೆ ಎಕ್ಸ್‌ಚೇಂಜ್ ಕೊಡುಗೆಯು ಗ್ರಾಹಕರಿಗೆ ದೊರೆಯಲಿದೆ. ಅದೇ ರೀತಿ ಐಫೋನ್ 12 ಫೋನ್ 59,990 ರೂ.ಗಳಿಗೆ ಸಿಗುತ್ತದೆ. ಇನ್ನು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಐಫೋನ್ 12 ಫೋನ್ 64GB ವೇರಿಯಂಟ್ ಫೋನ್ 52,999 ರೂ.ಗಳಿಗೆ ಲಭ್ಯವಿದೆ. ಇನ್ನು ಐಫೋನ್ 12 ಮಿನಿ 55,999 ರೂ.ಗಳ ಪ್ರೈಸ್ ಟ್ಯಾಗ್‌ನಲ್ಲಿ ದೊರೆಯಲಿದೆ. ಹಾಗಾದರೇ ಐಫೋನ್ 13, ಐಫೋನ್ 12 ಫೋನ್ ಮತ್ತು ಐಫೋನ್ 12 ಮಿನಿ ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 13 ಫೋನ್ ಫೀಚರ್ಸ್
ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ. ಹಾಗೆಯೇ ಈ ಫೋನ್ ಬ್ಯಾಟರಿ ಹಿಂದಿನ ಐಫೋನ್ 12 ಗಿಂತ ಉತ್ತಮವಾಗಿದೆ.

ಐಫೋನ್ 12 ಫೀಚರ್ಸ್
ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್ ಮೋಡ್ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಐಫೋನ್ 12 ಮಿನಿ ಫೀಚರ್ಸ್
ಐಫೋನ್ 12 ಮಿನಿ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಇದು ಸಹ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ಬಹುತೇಕ ಐಫೋನ್ 12 ಫೀಚರ್ಸ್‌ಗಳನ್ನು ಹೊಂದಿದ್ದು, ಗಾತ್ರದಲ್ಲಿ ಮಾತ್ರ ವ್ಯತ್ಯಾಸವಿದೆ.

ಐಫೋನ್ 14 ಸರಣಿಯ ಬೆಲೆಗಳು
ಐಫೋನ್ 14 (128 GB) 79,900ರೂ. ಆಗಿದೆ
ಐಫೋನ್ 14 (256GB) 89,900ರೂ. ಆಗಿದೆ
ಐಫೋನ್ 14 (512GB) 1,09,900ರೂ. ಆಗಿದೆ

ಐಫೋನ್ 14 ಪ್ಲಸ್ (128 GB) 89,900ರೂ. ಆಗಿದೆ
ಐಫೋನ್ 14 ಪ್ಲಸ್ (256GB) 99,900ರೂ. ಆಗಿದೆ
ಐಫೋನ್ 14 ಪ್ಲಸ್ (512GB) 1,19,900ರೂ. ಆಗಿದೆ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470