Home
ಸುದ್ದಿಜಾಲ

ಕಡಿಮೆ ಬೆಲೆಗೆ ಐಫೋನ್‌ ಖರೀದಿಸಬೇಕೆ?...ಹಾಗಿದ್ರೆ ಇಲ್ಲಿ ಗಮನಿಸಿ!

ಬಹುನಿರೀಕ್ಷಿತ ಆಪಲ್‌ ಐಫೋನ್‌ 14 ಬಿಡುಗಡೆ ದಿನಾಂಕ ನಿಗದಿ ಆಗಿದೆ. ಇದೇ ಸೆಪ್ಟೆಂಬರ್ 7, ರಂದು ಅಧಿಕೃತವಾಗಿ ಐಫೋನ್ 14 ಸರಣಿ ಬಿಡುಗಡೆ ಆಗಲಿದೆ. ಒಂದು ಕಡೆ ನೂತನ ಐಫೋನ್‌ 14 ಬಗ್ಗೆ ಕುತೂಹಲ ಇದ್ರೆ, ಹಳೆಯ ಐಫೋನ್‌ಗಳ ಬೆಲೆಯಲ್ಲಿ ಇಳಿಕೆ ಆಗುವ ನಿರೀಕ್ಷೆ ಇನ್ನೊಂದೆಡೆ. ಇದಕ್ಕೆ ಪೂರಕವೆಂಬಂತೆ ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಆಪಲ್‌ ಸಂಸ್ಥೆಯ ಕೆಲವು ಐಫೋನ್‌ ಮಾದರಿಗಳಿಗೆ ಭರ್ಜರಿ ರಿಯಾಯಿತಿ ತಿಳಿಸಿದೆ.

ಐಫೋನ್‌

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್ ತಾಣವು ಐಫೋನ್‌ 13, ಐಫೋನ್‌ 12 ಮತ್ತು ಐಫೋನ್ 11 ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಐಫೋನ್‌ 13 ಬೆಲೆಯು 79,900ರೂ. ಆಗಿದ್ದು, ಕೊಡುಗೆಯಲ್ಲಿ 65,999 ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಹೆಚ್‌ಡಿಎಫ್‌ಸಿ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ, 1,000ರೂ. ರಿಯಾಯಿತಿ ಲಭ್ಯವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಕ್ರೆಡಿಟ್‌ ಕಾರ್ಡ್‌ನಲ್ಲಿಯೂ 5% ಕ್ಯಾಶ್‌ಬ್ಯಾಕ್‌ ದೊರೆಯಲಿದೆ.

ರಿಯಾಯಿತಿ

ಅದೇ ರೀತಿ ಐಫೋನ್ 12 ಫೋನ್‌ ಬೆಲೆಯು 65,900ರೂ. ಗಳು ಆಗಿದ್ದು, 53,999 ರೂ. ಗಳ ವರೆಗೂ ರಿಯಾಯಿತಿ ಬೆಲೆಗೆ ಲಭ್ಯ ಮಾಡಿದೆ. ಇದರೊಂದಿಗೆ ಹೆಚ್‌ಡಿಎಫ್‌ಸಿ ಕ್ರೆಡಿಟ್‌ ಕಾರ್ಡ್‌ ಹಾಗೂ ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಕ್ರೆಡಿಟ್‌ ಕಾರ್ಡ್‌ನಲ್ಲಿ ಮೂಲಕ ಆಫರ್ ದೊರೆಯಲಿದೆ. ಹಾಗೆಯೇ ಐಫೋನ್ 11 ಫೋನ್‌ ಬೆಲೆಯು 49,900ರೂ. ಆಗಿದ್ದು, ಕೊಡುಗೆಯಲ್ಲಿ 39,999 ರೂ, ಗಳಿಗೆ ಲಭ್ಯವಾಗಲಿದೆ. ಜೊತೆಗೆ ಹೆಚ್‌ಡಿಎಫ್‌ಸಿ ಕ್ರೆಡಿಟ್‌ ಕಾರ್ಡ್‌ ಹಾಗೂ ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಕ್ರೆಡಿಟ್‌ ಕಾರ್ಡ್‌ನಲ್ಲಿ ಮೂಲಕ ಆಫರ್ ದೊರೆಯಲಿದೆ. ಹಾಗಾದರೇ ಈ ಮೂರು ಐಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ.

ಅತ್ಯುತ್ತಮ

ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ. ಹಾಗೆಯೇ ಈ ಫೋನ್ ಬ್ಯಾಟರಿ ಹಿಂದಿನ ಐಫೋನ್ 12 ಗಿಂತ ಉತ್ತಮವಾಗಿದೆ.

ಐಫೋನ್ 12 ಫೋನ್‌ ಫೀಚರ್ಸ್‌

ಐಫೋನ್ 12 ಫೋನ್‌ ಫೀಚರ್ಸ್‌

ಐಫೋನ್ 12 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, OLED ಡಿಸ್‌ಪ್ಲೇ ಹೊಂದಿದೆ. ಈ ಫೋನ್ A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು ಸಹ 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇದು 64GB + 4GB RAM, 128GB + 4GB RAM ಮತ್ತು 256GB + 4GB RAM ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್‌ IP68 ಧೂಳು ಹಾಗೂ ನೀರಿನ ರೆಸಿಸ್ಟೆನ್ಸ್‌ ಪಡೆದಿದೆ.

ಐಫೋನ್ 11 ಫೀಚರ್ಸ್‌

ಐಫೋನ್ 11 ಫೀಚರ್ಸ್‌

ಆಪಲ್ ಸಂಸ್ಥೆಯು ಐಫೋನ್ 11 ಫೋನ್ 6.1 ಇಂಚಿನ ಡಿಸ್‌ಪ್ಲೇ ಮತ್ತು ಡ್ಯುಯಲ್ ಕ್ಯಾಮೆರಾ ಆಯ್ಕೆಯನ್ನು ಒಳಗೊಂಡಿದೆ. ವೇಗದ ಚಿಪ್‌ಸೆಟ್‌ ಬೆಂಬಲದೊಂದಿಗೆ A13 ಬಯೋನಿಕ್ ಪ್ರೊಸೆಸರ್‌ ಪಡೆದುಕೊಂಡಿದೆ. ಆಪಲ್‌ ಎಕ್ಸ್‌ಆರ್‌ಗಿಂತ ಇದರ ಬ್ಯಾಟರಿ ಲೈಫ್ ಅಧಿಕವಾಗಿದೆ. ಹಿಂಬದಿಯ ಎರಡು ಕ್ಯಾಮೆರಾಗಳು 12ಎಂಪಿ ಸೆನ್ಸಾರ್‌ ಬೆಂಬಲವನ್ನು ಪಡೆದಿದ್ದು, ಇದರೊಂದಿಗೆ ನೈಟ್‌ಮೋಡ್‌, 4K ವಿಡಿಯೊ, ಸ್ಲೋ ಮೋಶನ್ ಫೀಚರ್ಸ್‌ಗಳನ್ನು ಪಡೆದಿದೆ.

Best Mobiles in India

English summary
iPhone 13, iPhone 12, and iPhone 11 price cut on Flipkart ahead of iPhone 14 launch.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+