ಐಫೋನ್ ಖರೀದಿಸುವ ಪ್ಲ್ಯಾನ್ ಇದ್ರೆ, ಈ ಆಫರ್ ಮಿಸ್ ಮಾಡ್ಕೋಬೇಡಿ!
ಡಿಜಿಟಲ್/ಟೆಕ್ ಉತ್ಪನ್ನಗಳ ಮಾರಾಟದ ಪ್ರಮುಖ ಸ್ಟೋರ್‌ಗಳಲ್ಲಿ ಒಂದಾದ ಕ್ರೋಮಾ (Croma) ದಲ್ಲಿ ಈಗ 'ಎವೆರಿಥಿಂಗ್ ಆಪಲ್' ಸೇಲ್ ಪ್ರಾರಂಭವಾಗಿದೆ. ಈ ಮಾರಾಟ ಮೇಳದಲ್ಲಿ ಆಪಲ್ ಸಂಸ್ಥೆಯು ಆಯ್ದ ಉತ್ಪನ್ನಗಳು ಆಕರ್ಷಕ ಡಿಸ್ಕೌಂಟ್ ಪಡೆದಿದ್ದು, ಭಾರೀ ರಿಯಾಯಿತಿ ದರದಲ್ಲಿ ಐಫೋನ್, ಮ್ಯಾಕ್‌ಬುಕ್ ಆಪಲ್ ವಾಚ್ ಖರೀದಿಸಬಹುದಾಗಿದೆ.
ಹೌದು, ಕ್ರೋಮಾ ಇ-ಕಾಮರ್ಸ್ ಪೋರ್ಟಲ್ ಪ್ಲಾಟ್‌ಫಾರ್ಮ್ ನಲ್ಲಿ ಎವರಿಥಿಂಗ್ ಆಪಲ್ (Everything Apple) ಮಾರಾಟ ಮೇಳ ಆಯೋಜಿಸಲಾಗಿದೆ. ಇದ್ರಲ್ಲಿ ಮುಖ್ಯವಾಗಿ ಆಪಲ್ ಐಫೋನ್ 13 ಅತ್ಯುತ್ತಮ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಆಪಲ್ ಐಫೋನ್ 14 ಸಹ ಬೆಸ್ಟ್ ದರದಲ್ಲಿ ಲಭ್ಯ.

ಕ್ರೋಮಾದ ಈ ಸೇಲ್‌ನಲ್ಲಿ ಐಫೋನ್ 13 ಮತ್ತು ಐಫೋನ್ 14 ಭಾರೀ ಆಫರ್ ಪಡೆದಿವೆ. ಐಫೋನ್ 13 ಫೋನ್ 61,900ರೂ. ಮತ್ತು ಐಫೋನ್ 14 ಫೋನ್ 71,990 ರೂ. ಗಳಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ಯಾಶ್‌ಬ್ಯಾಕ್ ಆಫರ್‌ನೊಂದಿಗೆ ಆಕರ್ಷಕ ಇಎಮ್‌ಐ ಆಯ್ಕೆಗಳು ಲಭ್ಯ. ಅಂದಹಾಗೆ ಈ ಸೇಲ್ ಮೇ 2 ರ ವರೆಗೂ ಚಾಲ್ತಿ ಇರಲಿದೆ. ಹಾಗಾದರೆ ಐಫೋನ್ 13 ಮತ್ತು ಐಫೋನ್ 14 ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.

ಐಫೋನ್ 13 ಫೋನ್ ಫೀಚರ್ಸ್ : ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಜೊತೆಗೆ 1200 nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ.
ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ಐಫೋನ್ 14 ಫೋನ್ ಫೀಚರ್ಸ್ : ಈ ಐಫೋನ್ 6.1 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 1200 nits ಬ್ರೈಟ್ನಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 128GB, 256GB ಮತ್ತು 512 GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಆಯ್ಕೆ ಒಳಗೊಂಡಿದೆ.
ಐಫೋನ್ 14 ಪ್ಲಸ್ ಫೀಚರ್ಸ್ : ಐಫೋನ್ 14 ಪ್ಲಸ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಸಾಮರ್ಥ್ಯ ಪಡೆದಿದ್ದು, OLED ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್ ಸಪೋರ್ಟ್ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್ 14 ಗೆ ಹೋಲಿಸಿದರೆ, ಈ ಫೋನ್ ದೀರ್ಘ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ.


Click it and Unblock the Notifications








