ಐಫೋನ್ 13 ಫೋನಿಗೆ ಲಭ್ಯವಿರುವ ಡಿಸ್ಕೌಂಟ್ ತಿಳಿದ್ರೆ, ನೀವು ಹುಬ್ಬೇರಿಸುತ್ತೀರಾ!
ಆಪಲ್ ಐಫೋನ್ ಖರೀದಿಸುವ ಗ್ರಾಹಕರಿಗೆ ಈಗ ಅತ್ಯುತ್ತಮ ಅವಕಾಶ ಇದೆ. ಇ ಕಾಮರ್ಸ್ ದಿಗ್ಗಜ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಐಫೋನ್ 13 ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಐಫೋನ್ 13 ಫೋನ್ ಬಿಡುಗಡೆ ಆದಾಗ 79,900 ರೂ. ಗಳಲ್ಲಿ ಕಾಣಿಸಿಕೊಂಡಿತ್ತು. ಆದ್ರೀಗ ಅಮೆಜಾನ್ ತಾಣದಲ್ಲಿ 65,900 ರೂ.ಗಳ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ನೀಡಿದೆ.

ಹೌದು, ಐಫೋನ್ 13 ಫೋನ್ ಅನ್ನು ರಿಯಾಯಿತಿ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಸಬಹುದಾಗಿದೆ. ಇನ್ವೆಂಟ್ ಸ್ಟೋರ್ 10,000 ರೂ. ಫ್ಲಾಟ್ ಆಫರ್ ನೀಡಿದ್ದು, ಹೊಸ ಬೆಲೆ 69,900 ರೂ. ಆಗಿದೆ. ಇದರ ಮೇಲೆ, ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿರುವವರು ಹೆಚ್ಚುವರಿ 4,000ರೂ. ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದ್ದು, ಒಟ್ಟಾರೇ 65,900 ರೂ. ಗಳಿಗೆ ಐಫೋನ್ 13 ಖರೀದಿಸಬಹುದಾಗಿದೆ.

ಹಾಗೆಯೇ ಹೆಚ್‌ಡಿಎಫ್‌ಸಿ ಬ್ಯಾಂಕ್ ಡೆಬಿಟ್ ಕಾರ್ಡ್ ಹೊಂದಿರುವವರು 4000 ರೂ. ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದ್ದು, ಜೊತೆಗೆ ನೋ ಕಾಸ್ಟ್ ಇಎಂಐ ಲಭ್ಯ. ಆದ್ರೆ ಇದು ತ್ವರಿತ ಕ್ಯಾಶ್‌ಬ್ಯಾಕ್ ಅಲ್ಲ ಮತ್ತು ಉತ್ಪನ್ನವನ್ನು ಖರೀದಿಸಿದ 120 ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಕ್ರೆಡಿಟ್ ಆಗುತ್ತದೆ. ಇನ್ನು ಐಫೋನ್ 13 ಫೋನ್ ಕೆಂಪು, ಹಸಿರು, ನೀಲಿ, ಕಪ್ಪು, ಬಿಳಿ ಮತ್ತು ಗುಲಾಬಿ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಇನ್ನುಳಿದಂತೆ ಐಫೋನ್ 13 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 13 ಫೋನ್ ಫೀಚರ್ಸ್
ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ. ಆಪಲ್ ಐಫೋನ್ 13 ಫೋನ್ 128GB, 245GB ಮತ್ತು 512GB ಆಯ್ಕೆಗಳ ಬೆಲೆ ಕ್ರಮವಾಗಿ 79,900 ರೂ, 89,900 ರೂ ಮತ್ತು 99,900 ರೂ ಗಳಾಗಿತ್ತು. ಆದ್ರೆ ಈಗ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಇದು XDR OLED ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್ಫೋನ್ iOS 15 ನಲ್ಲಿ ಬೂಟ್ ಆಗುತ್ತದೆ ಮತ್ತು ನೂತನ iOS 16 ಗೆ ಅಪ್‌ಗ್ರೇಡ್ ಮಾಡಬಹುದಾಗಿದೆ.

ಐಫೋನ್ 13 ಮಿನಿ ಫೋನ್ ಫೀಚರ್ಸ್
ಐಫೋನ್ 13 ಮಿನಿ ಫೋನ್ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. . 800nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

ಐಫೋನ್ 13 ಪ್ರೊ ಫೋನ್ ಫೀಚರ್ಸ್
ಐಫೋನ್ 13 ಪ್ರೊ ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ.

ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್ ಮಾಡಬಹುದಾಗಿದೆ. ಇನ್ನು ಈ ನಾಲ್ಕು ಬಣ್ಣಗಳ ಆಯ್ಕೆ ಪಡೆದಿದೆ.

ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಫೀಚರ್ಸ್
ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ.

ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್ ಮೋಡ್ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್ ಬೆಂಬಲಿಸಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ನಾಲ್ಕು ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








