ಇದೀಗ ಐಫೋನ್ 13 ಸರಣಿ ಗ್ರೀನ್ ಕಲರ್ ಆಯ್ಕೆಯಲ್ಲಿ ಲಭ್ಯ!
ಆಪಲ್ ಕಂಪೆನಿ ತನ್ನ ಬಹು ನಿರೀಕ್ಷಿತ ಐಫೋನ್ 13 ಸರಣಿಯನ್ನು ಹೊಸ ಕಲರ್ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ. ತನ್ನ ಐಫೋನ್ 13 ಪ್ರೊ ಮ್ಯಾಕ್ಸ್, ಐಫೋನ್ 13 ಪ್ರೊ, ಐಫೋನ್ 13 ಮತ್ತು ಐಫೋನ್ 13 ಮಿನಿ ಫೋನ್‌ಗಳನ್ನು ಹೊಸ ಕಲರ್‌ನಲ್ಲಿ ಪರಿಚಯಿಸಿದೆ. ಇದರಲ್ಲಿ ಐಫೋನ್ 13 ಪ್ರೊ ಮ್ಯಾಕ್ಸ್ ಮತ್ತು ಐಫೋನ್ 13 ಪ್ರೊ ಹೊಸ ಆಲ್ಪೈನ್ ಗ್ರೀನ್ ಕಲರ್ ಆಯ್ಕೆಯಲ್ಲಿ ಬರಲಿದೆ. ಆದರೆ ಐಫೋನ್ 13 ಮತ್ತು ಐಫೋನ್ 13 ಮಿನಿ ಗ್ರೀನ್ ಕಲರ್ ಅನ್ನು ಪಡೆದುಕೊಂಡಿದೆ.

ಹೌದು, ಆಪಲ್ ಕಂಪೆನಿ ತನ್ನ ಐಫೋನ್ 13 ಸರಣಿಯನ್ನು ಹೊಸ ಗ್ರೀನ್ ಕಲರ್ ಆಯ್ಕೆಯನ್ನು ಬಿಡುಗಡೆ ಮಾಡಿದೆ. ಆಪಲ್‌ನ ಪೀಕ್ ಪರ್ಫಾರ್ಮೆನ್ಸ್ ವರ್ಚುವಲ್ ಈವೆಂಟ್‌ನಲ್ಲಿ ಈ ಹೊಸ ಬಣ್ಣದ ಆಯ್ಕೆಗಳನ್ನು ಘೋಷಿಸಲಾಗಿದೆ. ಇನ್ನು ಈ ಫೋನ್‌ಗಳಲ್ಲಿ ಬಣ್ಣ ಬದಲಾವಣೆಯ ಹೊರತಾಗಿ ಫೀಚರ್ಸ್‌ಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಹಾಗಾದ್ರೆ ಹೊಸ ಕಲರ್ ಆಯ್ಕೆಯ ಐಫೋನ್ 13 ಸರಣಿ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಫೋನ್ 13
ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ಐಫೋನ್ 13 ಪ್ರೊ
ಐಫೋನ್ 13 ಪ್ರೊ ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್ ಮಾಡಬಹುದಾಗಿದೆ.

ಐಫೋನ್ 13 ಪ್ರೊ ಮ್ಯಾಕ್ಸ್
ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್ ಮೋಡ್ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ.

ಐಫೋನ್ 13 ಮಿನಿ
ಐಫೋನ್ 13 ಮಿನಿ ಫೋನ್ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಬೆಲೆ ಮತ್ತು ಲಭ್ಯತೆ
ಐಫೋನ್ 13 ಪ್ರೊ ಮ್ಯಾಕ್ಸ್ ಮತ್ತು ಐಫೋನ್ 13 ಪ್ರೊ ಗಳ ಆಲ್ಪೈನ್ ಗ್ರೀನ್ ಕಲರ್‌ವೇ ಬೆಲೆ ಕ್ರಮವಾಗಿ 1,29,900ರೂ. ಮತ್ತು 1,19,900ರೂ.ಬೆಲೆ ಹೊಂದಿದೆ. ಇದಲ್ಲದೆ ಐಫೋನ್ 13 ಮತ್ತು ಐಫೋನ್ 13 ಮಿನಿ ಫೋನ್‌ನ ಗ್ರೀನ್ ಕಲರ್ ಆಯ್ಕೆಯ ಬೆಲೆ ಕ್ರಮವಾಗಿ 79,990ರೂ. ಮತ್ತು 69,990ರೂ.ಬೆಲೆ ಪಡೆದುಕೊಂಡಿವೆ. ಇನ್ನು ಈ ಐಫೋನ್‌ಗಳ ಮಾಡೆಲ್‌ಗಳ ಹೊಸ ಬಣ್ಣದ ಆಯ್ಕೆಯು ಅಧಿಕೃತ ವೆಬ್‌ಸೈಟ್‌ನಲ್ಲಿ ಮತ್ತು ಅಧಿಕೃತ ಆಪಲ್ ಸ್ಟೋರ್‌ಗಳ ಮೂಲಕ ಮಾರ್ಚ್ 11 ರಿಂದ ಲಭ್ಯವಿರುತ್ತವೆ. ಇವುಗಳು ಮಾರ್ಚ್ 18 ರಂದು ಮಾರಾಟವಾಗಲಿದೆ.


Click it and Unblock the Notifications








