Home
ಸುದ್ದಿಜಾಲ

ಐಫೋನ್‌ 14 ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ: ಸಿಗುತ್ತೆ ಧಮಾಕಾ ಡಿಸ್ಕೌಂಟ್‌!

ಆಪಲ್‌ ಸಂಸ್ಥೆಯು ಇತ್ತೀಚಿಗೆ ಹೊಸದಾಗಿ ಲಾಂಚ್ ಮಾಡಿರುವ ಆಪಲ್‌ ಐಫೋನ್ 14 (Apple iPhone 14) ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಫೋನ್‌ ಇದೀಗ ಇ-ಕಾಮರ್ಸ್ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ತಾಣಗಳಲ್ಲಿ ಭರ್ಜರಿ ರಿಯಾಯಿತಿಯಲ್ಲಿ ದೊರೆಯಲಿದೆ.

ಬಿಲಿಯನ್

ಹೌದು, ಅಮೆಜಾನ್‌ ತಾಣವು ಗ್ರೇಟ್ ಇಂಡಿಯನ್ ಫೆಸ್ಟಿವ್ ಸೇಲ್ ಆಯೋಜಿಸಿದ್ದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ ಬಿಗ್ ಬಿಲಿಯನ್ ಡೇಸ್ ಸೇಲ್ ಪ್ರಾರಂಭಿಸಿದೆ. ಈ ಎರಡು ಸೇಲ್‌ಗಳಲ್ಲಿ ಐಫೋನ್‌ 14 ಫೋನ್‌ ಬೊಂಬಾಟ್‌ ಡಿಸ್ಕೌಂಟ್‌ನಲ್ಲಿ ಸಿಗಲಿದೆ. ಐಫೋನ್‌ 14 ಫೋನ್‌ ಅನ್ನು ಕೊಡುಗೆಯಲ್ಲಿ 55,000ರೂ. ಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಐಫೋನ್‌ 14 ಫೋನ್ 128GB ವೇರಿಯಂಟ್‌ 79,900ರೂ. ಬೆಲೆಯಲ್ಲಿ ಬಿಡುಗಡೆ ಆಗಿದೆ.

ಆಫರ್‌ ಏನಿದೆ?

ಆಫರ್‌ ಏನಿದೆ?

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಐಫೋನ್‌ 14 ಗೆ 19,900 ರೂ.ಗಳ ವಿನಿಮಯ ಕೊಡುಗೆಯನ್ನು ನೀಡುತ್ತಿದೆ. ಹಾಗೆಯೇ ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್ ಕಾರ್ಡ್‌ ಮೂಲಕ ಖರೀದಿಸಿದರೆ, 5,000 ರೂಪಾಯಿ ಮೌಲ್ಯದ ಹೆಚ್ಚುವರಿ ರಿಯಾಯಿತಿ ಸಿಗಲಿದೆ. ಹಾಗೆಯೇ ಅಮೆಜಾನ್‌ ತಾಣವು ಐಫೋನ್‌ 14 ಬೇಸ್‌ ವೇರಿಯಂಟ್‌ ಖರೀದಿಯಲ್ಲಿ 17,250 ರೂ.ಗಳ ವರೆಗೆ ಎಕ್ಸ್‌ಚೇಂಜ್ ಕೊಡುಗೆ ನೀಡುತ್ತದೆ. ಜೊತೆಗೆ ಎಸ್‌ಬಿಐ ಡೆಬಿಟ್ ಕಾರ್ಡ್ ವಹಿವಾಟಿನ ಮೇಲೆ 1,000 ರೂ. ವರೆಗೆ ರಿಯಾಯಿತಿ ಸಹ ಸಿಗಲಿದೆ. ಹಾಗಾದರೇ ಐಫೋನ್‌ 14 ಸರಣಿಯ ಫೋನ್‌ಗಳ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 14 ಫೀಚರ್ಸ್‌

ಐಫೋನ್ 14 ಫೀಚರ್ಸ್‌

ಐಫೋನ್ 14 ಫೋನ್ 6.1 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 1200 nits ಬ್ರೈಟ್ನಸ್‌ ಸಪೋರ್ಟ್‌ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 128 GB, 256 GB ಮತ್ತು 512 GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್‌ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಆಯ್ಕೆ ಒಳಗೊಂಡಿದೆ.

ಐಫೋನ್ 14 ಪ್ಲಸ್‌ ಫೀಚರ್ಸ್‌

ಐಫೋನ್ 14 ಪ್ಲಸ್‌ ಫೀಚರ್ಸ್‌

ಐಫೋನ್ 14 ಪ್ಲಸ್‌ ಫೋನ್ 6.7 ಇಂಚಿನ ಡಿಸ್‌ಪ್ಲೇ ಸಾಮರ್ಥ್ಯ ಪಡೆದಿದ್ದು, OLED ಡಿಸ್‌ಪ್ಲೇ ಹೊಂದಿದ್ದು, 1200 nits ಬ್ರೈಟ್ನಸ್‌ ಸಪೋರ್ಟ್‌ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 128GB, 256 GB ಮತ್ತು 512 GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್‌ 14 ಗೆ ಹೋಲಿಸಿದರೆ, ಈ ಫೋನ್ ದೀರ್ಘ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ. ಇದು ಐಫೋನ್‌ 14 ಪ್ಲಸ್ ಫೋನ್ ಸಹ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಸಪೋರ್ಟ್‌ ಪಡೆದಿದೆ.

ಐಫೋನ್ 14 ಪ್ರೊ ಫೀಚರ್ಸ್

ಐಫೋನ್ 14 ಪ್ರೊ ಫೀಚರ್ಸ್

ಐಫೋನ್ 14 ಪ್ರೊ ಫೋನ್ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದ್ದು, ಮೊದಲ ಬಾರಿಗೆ ಆಲ್ವೇಸ್‌ ಆನ್ ಡಿಸ್‌ಪ್ಲೇ ನೀಡುತ್ತದೆ. ಅದೇ ರೀತಿ ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಹೊಂದಿದ್ದು, ಇದು ಸಹ ಆಲ್ವೇಸ್‌ ಆನ್ ಕಾರ್ಯವನ್ನು ಹೊಂದಿದೆ. ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. 48 ಮೆಗಾ ಪಿಕ್ಸೆಲ್ ಅಗಲದ ಕ್ಯಾಮೆರಾ 2x ಟೆಲಿಫೋಟೋ ವೀಕ್ಷಣೆಯನ್ನು ಸಹ ನೀಡುತ್ತದೆ. ಐಫೋನ್ 14 ಪ್ರೊ ಆಕ್ಷನ್ ಮೋಡ್ ಅನ್ನು ನೀಡುತ್ತದೆ, ಇದು ಆಟೋಫೋಕಸ್, ಕ್ರ್ಯಾಶ್ ಡಿಟೆಕ್ಷನ್ ಮತ್ತು Emergency SOS via satellite ಸಂಪರ್ಕವನ್ನು ಬಳಸಿಕೊಂಡು ಸುಧಾರಿತ ಮುಂಭಾಗದ ಕ್ಯಾಮೆರಾ ಒಳಗೊಂಡಿದೆ.

Best Mobiles in India

English summary
iPhone 14 Available Under Rs 55,000 On Flipkart, Amazon? Here's How To Buy.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+