ಭಾರತದಲ್ಲಿ ಬಹುನಿರೀಕ್ಷಿತ ಐಫೋನ್‌ 14 ಪ್ರೊ ಬೆಲೆ ಎಷ್ಟಿರಬಹುದು?..ಫೀಚರ್ಸ್‌ ಏನು?

|

ಟೆಕ್‌ ದಿಗ್ಗಜ ಆಪಲ್‌ ಐಫೋನ್‌ 13 ಸರಣಿಯ ಸದ್ಯ ಮಾರುಕಟ್ಟೆಯಲ್ಲಿ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿವೆ. ಅದರೊಂದಿಗೆ ಇದೀಗ ಸಂಸ್ಥೆಯ ಮುಂಬರುವ ನೂತನ ಐಫೋನ್‌ 14 ಸರಣಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕೆಲವು ಮಾಹಿತಿಗಳ ಪ್ರಕಾರ ಐಫೋನ್‌ 14 ಸರಣಿಯು ನಾಲ್ಕು ಮಾಡೆಲ್‌ಗಳನ್ನು ಒಳಗೊಂಡಿದೆ ಎಂದು ಹೇಳಲಾಗುತ್ತಿದೆ. ಅದೇ ರೀತಿ ಇನ್ನು ಕೆಲವು ವರದಿಗಳಲ್ಲಿ ಐಫೋನ್‌ 14 ಸರಣಿಯು ಮೂರು ಮಾಡೆಲ್‌ಗಳನ್ನು ಹೊಂದಿರಲಿದೆ ಎನ್ನುತ್ತಿವೆ. ಮುಖ್ಯವಾಗಿ ಐಫೋನ್‌ 14 ಪ್ರೊ ಸರಣಿಯ ಬೆಲೆ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿವೆ.

ಸರಣಿಯು

ಆಪಲ್ ಐಫೋನ್‌ 14 ಸರಣಿಯು ಐಫೋನ್‌ 14, ಐಫೋನ್‌ 14 ಪ್ರೊ ಹಾಗೂ ಐಫೋನ್‌ 14 ಪ್ರೊ ಮ್ಯಾಕ್ಸ್‌ ಹೊಂದಿರುವುದು ಬಹುತೇಕ ಖಚಿತವಾಗಿದೆ. ಈ ವರ್ಷ ಐಫೋನ್‌ 14 ಪ್ರೊ ಹಾಗೂ ಐಫೋನ್‌ 14 ಪ್ರೊ ಮ್ಯಾಕ್ಸ್‌ ಮಾಡೆಲ್‌ಗಳು ದೊಡ್ಡ ಅಪ್‌ಡೇಟ್‌ ಫೀಚರ್ಸ್‌ಗಳೊಂದಿಗೆ ಎಂಟ್ರಿ ಕೊಡಲಿವೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ ಐಫೋನ್‌ 14 ಪ್ರೊ ಮಾಡೆಲ್‌ಗಳ ಬೆಲೆ ಎಷ್ಟಿರಲಿದೆ ಎನ್ನುವ ಬಗ್ಗೆ ಚರ್ಚೆಗಳು ಇವೆ. ಈ ಎರಡು ಫೋನ್‌ಗಳ ಬೆಲೆಗಳು ಕ್ರಮವಾಗಿ $1,099 ಮತ್ತು $1,199 ಆಗಿರಲಿದೆ ಎಂದು ಲೀಕ್‌ಸ್ಟರ್ ಆಂಥೋನಿ (Twitter ನಲ್ಲಿ TheGalox) ಹೇಳಿದ್ದಾರೆ.

ಇದರರ್ಥ

ಲೀಕ್ ಮಾಹಿತಿಯ ಪ್ರಕಾರ, ಹೊಸ ಐಫೋನ್‌ 14 ಪ್ರೊ ಹಾಗೂ ಐಫೋನ್‌ 14 ಪ್ರೊ ಮ್ಯಾಕ್ಸ್‌ ಮಾಡೆಲ್‌ಗಳು ಕಳೆದ ವರ್ಷದ ಐಫೋನ್‌ 13 ಪ್ರೊ ಮಾಡೆಲ್‌ಗಳ ಬೆಲೆಗಿಂತ $100 (ಭಾರತದಲ್ಲಿ ಸುಮಾರು 8,000ರೂ.) ದುಬಾರಿಯಾಗಿರುತ್ತದೆ ಎಂದರ್ಥ. ಇದರರ್ಥ ಭಾರತದಲ್ಲಿ ಎರಡು ಮಾದರಿಗಳು ಹೆಚ್ಚು ದುಬಾರಿಯಾಗಬಹುದು ಎಂದು ಹೇಳಲಾಗುತ್ತಿದೆ. ಇನ್ನು ಆಪಲ್‌ ಐಫೋನ್‌ 13 ಪ್ರೊ ಆರಂಭಿಕ ಬೆಲೆ 1,19,900 ರೂ. ಮತ್ತು ಐಫೋನ್ 13 ಪ್ರೊ ಮ್ಯಾಕ್ಸ್‌ 1,29,900 ರೂ. ಗಳಲ್ಲಿ ಬಿಡುಗಡೆ ಆಗಿವೆ.

ಐಫೋನ್‌ 14 ಪ್ರೊ ಫೀಚರ್ಸ್‌

ಐಫೋನ್‌ 14 ಪ್ರೊ ಫೀಚರ್ಸ್‌

ಲೀಕ್ ಮಾಹಿತಿ ಪ್ರಕಾರ ಐಫೋನ್‌ 14 ಪ್ರೊ ಫೋನ್ A16 ಬಯೋನಿಕ್ ಚಿಪ್‌ಸೆಟ್, 120Hz ರಿಫ್ರೇಶ್ ರೇಟ್ ಜೊತೆಗೆ AMOLED ಡಿಸ್‌ಪ್ಲೇ ಹೊಂದಿರಲಿದೆ. ಇದು 12 ಮೆಗಾ ಪಿಕ್ಸೆಲ್‌ನ ಎರಡು ಸೆನ್ಸಾರ್‌ ಹೊಂದಿರಲಿದೆ. 48 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು ಫೇಸ್ ಐಡಿಯನ್ನು ಒಳಗೊಂಡಿರುವ ಸಾಧ್ಯತೆಗಳಿವೆ. ಈ ಫೋನ್ ಆಲ್ವೇಸ್-ಆನ್-ಡಿಸ್ಪ್ಲೇ (AOD) ಫೀಚರ್ಸ್‌ ಅನ್ನು ಪಡೆಯುತ್ತದೆ ಎಂದು ಹೇಳಲಾಗುತ್ತದೆ. ಇದನ್ನು ಬ್ಲೂಮ್‌ಬರ್ಗ್ ವರದಿಯು ಇತ್ತೀಚೆಗೆ ದೃಢೀಕರಿಸಿದೆ.

ಅಪ್‌ಡೇಟ್‌

ಹಾಗೆಯೇ ಐಫೋನ್‌ 14 ಪ್ರೊ ಮತ್ತು ಪ್ರೊ ಮ್ಯಾಕ್ಸ್‌ ಮಾಡೆಲ್‌ ಗಳು ಬ್ಯಾಟರಿ ವಿಭಾಗದಲ್ಲಿ ಅಪ್‌ಡೇಟ್‌ ಆಗಿರಲಿವೆ. ಎರಡು ಮಾದರಿಗಳು ಕ್ರಮವಾಗಿ 3,200mAh ಯುನಿಟ್ ಮತ್ತು 4,323mAh ಯುನಿಟ್ ಸಾಮರ್ಥ್ಯದ ಬ್ಯಾಟರಿ ಅನ್ನು ಪ್ಯಾಕ್ ಮಾಡುತ್ತವೆ ಎನ್ನಲಾಗಿದೆ. ಈ ಬಾರಿ ಐಫೋನ್ 14 ಮಿನಿ ಮಾಡೆಲ್‌ ಕೈ ಬಿಡುವ ಸಾಧ್ಯತೆಗಳು ಇದ್ದು, ಅದರ ಬದಲಾಗಿ ಐಫೋನ್‌ 14 ಪ್ಲಸ್‌ ಮಾಡೆಲ್‌ ಲಗ್ಗೆ ಇಡಬಹುದು. ಆದ್ರೆ, ಆಪಲ್ ಇನ್ನೂ ಈ ಎಲ್ಲಾ ವಿವರಗಳನ್ನು ದೃಢೀಕರಿಸಿಲ್ಲ. ಈ ಹಿಂದಿನ ಐಫೋನ್ 13 ಸರಣಿಯ

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ. ಹಾಗೆಯೇ ಈ ಫೋನ್ ಬ್ಯಾಟರಿ ಹಿಂದಿನ ಐಫೋನ್ 12 ಗಿಂತ ಉತ್ತಮವಾಗಿದೆ.

ಐಫೋನ್ 13 ಪ್ರೊ ಫೋನ್‌ ಫೀಚರ್ಸ್‌

ಐಫೋನ್ 13 ಪ್ರೊ ಫೋನ್‌ ಫೀಚರ್ಸ್‌

ಐಫೋನ್ 13 ಪ್ರೊ ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್‌ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ ಫೀಚರ್ಸ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ ಫೀಚರ್ಸ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್‌ ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್‌ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ.

ಐಫೋನ್ 13 ಮಿನಿ ಫೋನ್‌ ಫೀಚರ್ಸ್‌

ಐಫೋನ್ 13 ಮಿನಿ ಫೋನ್‌ ಫೀಚರ್ಸ್‌

ಐಫೋನ್ 13 ಮಿನಿ ಫೋನ್‌ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 800nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್‌ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

Most Read Articles
Best Mobiles in India

English summary
iPhone 14 Pro series price tipped, likely to cost around Rs 8,000 more than iPhone 13 Pro models.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X