ಲಾಂಚ್ ಆಯ್ತು ಐಫೋನ್ 15.. ಫೀಚರ್ಸ್ ಹೇಗಿವೆ? ಬೆಲೆ ಎಷ್ಟು? ಇಲ್ಲಿದೆ ಮಾಹಿತಿ
ಜನಪ್ರಿಯ ಟೆಕ್ ದಿಗ್ಗಜ ಆಪಲ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಐಫೋನ್ 15 ಸರಣಿಯನ್ನು ಇಂದು (ಸೆ. 12 ರಂದು) ಅಧಿಕೃತವಾಗಿ ಲಾಂಚ್ ಮಾಡಿದೆ. 'ವಂಡರ್‌ಲಸ್ಟ್' (Wonderlust) ಹೆಸರಿನ ಕಾರ್ಯಕ್ರಮದ ಮೂಲಕ ಐಫೋನ್ 15 ಫೋನ್‌ಗಳ ಸರಣಿಯನ್ನು ಅಧಿಕೃತವಾಗಿ ಲಾಂಚ್ ಮಾಡಿದೆ. ಇದರೊಂದಿಗೆ ಆಪಲ್ ಸಂಸ್ಥೆಯು ಆಪಲ್ ವಾಚ್ ಸೀರಿಸ್ 9 ಕೂಡಾ ಲಾಂಚ್ ಮಾಡಿದೆ.
ಹೌದು, ಟೆಕ್ ದೈತ್ಯ ಆಪಲ್ ಸಂಸ್ಥೆಯು ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೊದಲ್ಲಿರುವ ಕಂಪನಿಯ ಪ್ರಧಾನ ಕಛೇರಿಯಿಂದ ಆಯೋಜಿಸಿದ್ದ ವಂಡರ್‌ಲಸ್ಟ್ ಕಾರ್ಯಕ್ರಮದಲ್ಲಿ ಐಫೋನ್ 15 ಸರಣಿ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಈ ಸರಣಿಯು ಐಫೋನ್ 15 ಹಾಗೂ ಐಫೋನ್ 15 ಪ್ಲಸ್ ಮಾಡೆಲ್‌ಗಳನ್ನು ಘೋಷಣೆ ಮಾಡಿದೆ.

ಇವುಗಳಲ್ಲಿ ಐಫೋನ್ 15 ಆರಂಭಿಕ ಮಾಡೆಲ್ ಆಗಿದ್ದು, ಇದು A16 ಬಯೋನಿಕ್ ಚಿಪ್ ಪ್ರೊಸೆಸರ್, ಅಪ್‌ಗ್ರೇಡ್ ಬ್ಯಾಟರಿ, ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಅಪ್‌ಗ್ರೇಡ್ ಮಾದರಿಯ ಕ್ಯಾಮೆರಾ ತಂತ್ರಜ್ಞಾನ, ಟೈಟಾನಿಯಂ ಎಡ್ಜ್ಸ್ ಹಾಗೂ ಸಾಫ್ಟ್‌ವೇರ್ ಅಪ್‌ಗ್ರೇಡ್ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಹಾಗಾದರೆ ಐಫೋನ್ 15 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮತ್ತು ಬೆಲೆ ಎಷ್ಟು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.
ಐಫೋನ್ 15 ಡಿಸ್‌ಪ್ಲೇ ಮತ್ತು ಡಿಸೈನ್ :
ಐಫೋನ್ 15 ಫೋನ್ 6.1 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದ್ದು, 1600 nits ಬ್ರೈಟ್ನಸ್ ಸಪೋರ್ಟ್ ಸಹ ಪಡೆದುಕೊಂಡಿದೆ. ಹಾಗೆಯೇ ಇದು ಮಾತ್ರೆ ಮಾದರಿಯ ( ಪಿಲ್ ಶೇಪ್ ಮಾದರಿ) ಪಂಚ್ ಹೋಲ್ ರಚನೆ ಹೊಂದಿದ್ದು, ಫೇಸ್‌ಟೈಮ್ ಕ್ಯಾಮೆರಾ ಮತ್ತು ಫೇಸ್‌ಐಡಿ ಹೊಂದಿದೆ.
ಐಫೋನ್ 15 ಪ್ರೊಸೆಸರ್ ಮಾಹಿತಿ :
ಐಫೋನ್ 15 ಫೋನ್ A16 ಬಯೋನಿಕ್ ಚಿಪ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಈ ಐಫೋನ್ ios 16 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಅಲ್ಲದೇ ಇದು 128GB, 256GB, 512GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಐಫೋನ್ 15 ಕ್ಯಾಮೆರಾ ಸೆನ್ಸಾರ್ ವಿಶೇಷ :
ಐಫೋನ್ 15 ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಅವುಗಳಲ್ಲಿ ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದು ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೋ ಸೆರೆಹಿಡಿಯಲು ಪೂರಕವಾಗಿ ಕೆಲಸ ನಿರ್ವಹಿಸಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ನ ಅಲ್ಟ್ರಾ ವೈಲ್ಡ್ ಆಂಗಲ್ ಲೆನ್ಸ್ ಅನ್ನು ಪಡೆದಿದೆ. ಇನ್ನು 12 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಐಫೋನ್ 15 ಬ್ಯಾಟರಿ ಬ್ಯಾಕ್‌ಅಪ್ ಹಾಗೂ ಇತರೆ :
ಐಫೋನ್ 15 ಫೋನ್ ತನ್ನ ಈ ಹಿಂದಿನ ಸರಣಿಗಿಂತ ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಐಫೋನ್ ಪ್ರಿಯರ ಗಮನ ಸೆಳೆದಿದೆ. ಹಾಗೆಯೇ ಇದು ಡೈನಾಮಿಕ್ ಐಲ್ಯಾಂಡ್ (Dynamic Island) ಆಯ್ಕೆಯನ್ನು ಪಡೆದಿದೆ. ಇದು 5G ಸಪೋರ್ಟ್ ಪಡೆದಿದೆ ಹಾಗೆಯೇ ವಾಯರ್‌ಲೆಸ್ ಕನೆಕ್ಟಿವಿಟಿ ಸೌಲಭ್ಯ ಕೂಡಾ ಪಡೆದಿದೆ. ರೋಡ್ ಸೈಡ್ ಅಸಿಸ್ಟಂಟ್ ವೈಯಾ ಸೆಟಲೈಟ್ ಆಯ್ಕೆ ಇದೆ.
ಬೆಲೆ ಎಷ್ಟು ಮತ್ತು ಲಭ್ಯತೆ :
ನೂತನ ಆಪಲ್ ಐಫೋನ್ 15 ಆರಂಭಿಕ ಬೆಲೆಯು $799 (ಭಾರತದಲ್ಲಿ ಭಾರತದಲ್ಲಿ ಆರಂಭಿಕ ಬೆಲೆ 79,900 ರೂ) ಎಂದು ಅಂದಾಜಿಸಲಾಗಿದೆ. ಇದು ಐದು ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








