Just In
- 1 hr ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 17 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 17 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 18 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
Don't Miss
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Movies
ಮಂಗ್ಲಿ ಹಾಡೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಹೇಗಿದೆ?
- News
ಜಾರ್ಖಂಡ್: ಆಸ್ಪತ್ರೆಯಲ್ಲಿ ಅಗ್ನಿ ದುರಂತ- ವೈದ್ಯ ದಂಪತಿ ಸೇರಿ 6 ಮಂದಿ ಸಾವು!
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Sports
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್ಗೆ ಅವಕಾಶ ಇಲ್ಲ: ಬಿಸಿಸಿಐ ನೀಡಿದ ಭರವಸೆ ಏನು?
- Finance
ಹಿಂಡನ್ಬರ್ಗ್ vs ಅದಾನಿ ನಡುವೆ ಎಲ್ಐಸಿ, ಎಸ್ಬಿಐ ಉಳಿತಾಯ ರಿಸ್ಕ್ನಲ್ಲಿದೆಯೇ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಐಫೋನ್ SE 2022 ಖರೀದಿಸುವ ಮುನ್ನ ಎರಡು ಬಾರಿ ಯೋಚಿಸಿ!?
ಅನೇಕ ಸ್ಮಾರ್ಟ್‌ಫೋನ್ ಪ್ರಿಯರಿಗೆ ಆಪಲ್ ಸಂಸ್ಥೆಯ ಐಫೋನ್ ಅಂದ್ರೆ ಫೇವರೇಟ್. ಅದರಲ್ಲಿಯೂ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಐಫೋನ್ 14 ಸರಣಿಯು ಮಾರುಕಟ್ಟೆಯಲ್ಲಿ ಮತ್ತಷ್ಟು ಸದ್ದು ಮಾಡಿದೆ. ಆದರೆ ಆಪಲ್ ಐಫೋನ್ SE 2022 ಖರೀದಿ ಮಾಡಬೇಕೆಂದರೆ ಗ್ರಾಹಕರು ಎರಡೆರಡು ಬಾರಿ ಯೋಚಿಸುವಂತಾಗಿದೆ. ಅರೇರೇ ಯಾಕೆ ಅಂತೀರಾ?

ಹೌದು, ಆಪಲ್ ಸಂಸ್ಥೆಯ ಐಫೋನ್ 14 ಸರಣಿಯ ಲಾಂಚ್ ಮಾಡಿದ ಬೆನ್ನಲ್ಲೇ ಐಫೋನ್ 12 ಹಾಗೂ ಐಫೋನ್ 13 ಬೆಲೆಯಲ್ಲಿ ಇಳಿಕೆ ಮಾಡಿ ಗಮನ ಸೆಳೆದಿದೆ. ಇದ್ರೊಂದಿಗೆ ಐಫೋನ್ 11 ಅನ್ನು ಸ್ಥಗಿತ ಮಾಡಿ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಇದೀಗ ಐಫೋನ್ SE 2022 (iPhone SE 2022) ಬೆಲೆಯಲ್ಲಿ ದರ ಏರಿಕೆ ಮಾಡಿ ಮತ್ತೆ ಗ್ರಾಹಕರಿಗೆ ಶಾಕ್ ನೀಡಿದೆ.

ಆಪಲ್ ಐಫೋನ್ SE 2022 (iPhone SE 2022) ಬೆಲೆ ಏರಿಕೆ ಆಗಿದ್ದು, (64GB ವೇರಿಯಂಟ್) 49,900 ರೂ.ಗಳ ಪ್ರೈಸ್ ಟ್ಯಾಗ್‌ನಲ್ಲಿ ಲಭ್ಯವಾಗಲಿದೆ. ಇನ್ನು ಈ ಫೋನ್ 43,900ರೂ. ಗಳ ಬೆಲೆಗೆ ಬಿಡುಗಡೆ ಆಗಿತ್ತು. 128GB ವೇರಿಯಂಟ್ 48,900ರೂ. ಪ್ರೈಸ್ ಟ್ಯಾಗ್‌ನಲ್ಲಿ ಬಿಡುಗಡೆ ಆಗಿತ್ತು. ಇದೀಗ ಬೆಲೆ ಹೆಚ್ಚಳದಿಂದ 54,900ರೂ. ದರದಲ್ಲಿ ದೊರೆಯಲಿದೆ. ಹಾಗೆಯೇ 256GB ಸ್ಟೋರೇಜ್‌ನ ವೇರಿಯಂಟ್ 64,900ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಹಾಗಾದರೇ ಆಪಲ್ ಐಫೋನ್ SE 2022 ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಪಲ್ ಐಫೋನ್ SE (2022) 4.7 ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 750 x 1334 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರೆತೆಯು 326 ppi ಆಗಿದ್ದು, 625 nits ವರೆಗೆ ಗರಿಷ್ಠ ಹೊಳಪನ್ನು ಹೊಂದಿದೆ. ಹಾಗೆಯೇ ಈ ಫೋನ್ A 15 ಬಯೋನಿಕ್ SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಪ್ರೊಸೆಸರ್‌ಗೆ ಪೂರಕವಾಗಿ ಐಒಎಸ್ 15 ಬೆಂಬಲ ನೀಡಲಿದೆ. ಇದರೊಂದಿಗೆ ಈ ಐಫೋನ್ 64 GB, 128 GB ಮತ್ತು 256 GB ಸ್ಟೋರೇಜ್ ವೇರಿಯಂಟ್ ಮಾದರಿಗಳನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಲು ಯಾವುದೇ ಅವಕಾಶವನ್ನ ನೀಡಿಲ್ಲ.

ಇನ್ನು ಐಫೋನ್ SE (2022) ರಿಯರ್ ಸೆಟ್‌ಅಪ್‌ನಲ್ಲಿ ಸಿಂಗಲ್ ಕ್ಯಾಮೆರಾ ಹೊಂದಿದೆ. ಪ್ರಾಥಮಿಕ ಕ್ಯಾಮರಾವು 12 ಮೆಗಾ ಪಿಕ್ಸೆಲ್ ಸೆನ್ಸಾರ್ ಇದ್ದು, f/ 1.8 ಲೆನ್ಸ್ + ಒಐಎಸ್ ಹೊಂದಿದೆ. ಇದು ಡೀಪ್ ಫ್ಯೂಷನ್, ಸ್ಮಾರ್ಟ್ HDR 4 ಮತ್ತು ಫೋಟೋಗ್ರಾಫಿಕ್ ಸ್ಟೈಲ್ಸ್ ಸೇರಿದಂತೆ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ. ಇದು 60 fps ವರೆಗೆ 4K ವೀಡಿಯೊ ರೆಕಾರ್ಡಿಂಗ್ ಅನ್ನು ಸಹ ಬೆಂಬಲಿಸುತ್ತದೆ.

ಇನ್ನು ಸೆಲ್ಫಿಗಾಗಿ ಮುಂಭಾಗದಲ್ಲಿ 7 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಸೆಲ್ಫಿ ಕ್ಯಾಮೆರಾವು ನ್ಯಾಚುರಲ್, ಸ್ಟುಡಿಯೋ, ಬಾಹ್ಯರೇಖೆ, ಹಂತ, ಸ್ಟೇಜ್ ಮೊನೊ ಮತ್ತು ಹೈ-ಕೀ ಮೊನೊ ಎಂಬ ಆರು ಪರಿಣಾಮಗಳೊಂದಿಗೆ ಪೋರ್ಟ್ರೇಟ್ ಲೈಟಿಂಗ್ ಅನ್ನು ಬೆಂಬಲಿಸುತ್ತದೆ. ಇದು ಡೀಪ್ ಫ್ಯೂಷನ್, ಫೋಟೋಗಳಿಗಾಗಿ ಸ್ಮಾರ್ಟ್ HDR 4 ಮತ್ತು ಫೋಟೋಗ್ರಾಫಿಕ್ ಶೈಲಿಗಳನ್ನು ಸಹ ಒಳಗೊಂಡಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾದಿಂದ 1080 p ವೀಡಿಯೊ ರೆಕಾರ್ಡಿಂಗ್ ಅನ್ನು ಸಕ್ರಿಯಗೊಳಿಸಿದೆ. ಟೈಮ್ ಲ್ಯಾಪ್ಸ್ ವೀಡಿಯೊ ಮತ್ತು ನೈಟ್ ಮೋಡ್ ಟೈಮ್ ಲ್ಯಾಪ್ಸ್‌ಗೆ ಸಹ ಬೆಂಬಲವಿದೆ.

ಆಪಲ್ ಐಫೋನ್ SE (2022) ಬ್ಯಾಟರಿ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿಯನ್ನ ಹಂಚಿಕೊಂಡಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋಈನ್ 5G, 4G VoLTE, Wi-Fi 5, ಬ್ಲೂಟೂತ್ v5, GPS/ A-GPS, NFC ಮತ್ತು ಲೈಟ್ನಿಂಗ್ ಪೋರ್ಟ್ ಸೇರಿದಂತೆ ಸಂಪರ್ಕ ಆಯ್ಕೆಗಳೊಂದಿಗೆ ಬರುತ್ತದೆ. ಹಾಗೆಯೇ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬ್ಯಾರೋಮೀಟರ್, ಮೂರು-ಆಕ್ಸಿಸ್ ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ. ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470