ಕ್ರಿಕೆಟ್‌ ಪ್ರಿಯರಿಗಾಗಿ ಹೊಸ ಪ್ರಿಪೇಯ್ಡ್‌ ಪ್ಲಾನ್‌ ಪರಿಚಯಿಸಿದ ಜಿಯೋ!

|

ಕ್ರಿಕೆಟ್‌ ಪ್ರಿಯರ ಕ್ರೇಜ್‌ ಹೆಚ್ಚಿಸುವ ಐಪಿಎಲ್‌ 2022 ಇಂದಿನಿಂದ ಪ್ರಾರಂಬವಾಗಲಿದೆ. ಐಪಿಎಲ್‌ 2022 ಕ್ರಿಕೆಟ್‌ ಪಂದ್ಯಾವಳಿಗಳನ್ನ ಸ್ಟಾರ್‌ಸ್ಪೋರ್ಟ್ಸ್‌ ಮತ್ತು ಡಿಸ್ನಿ ಪ್ಲಸ್‌ ಹಾಟ್‌ಸ್ ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ. ಇನ್ನು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬೇಕಾದರೆ ನೀವು ಚಂದಾದಾರಿಕೆಯನ್ನು ಹೊಂದಿರಬೇಕಾಗುತ್ತದೆ. ಇದೇ ಕಾರಣಕ್ಕೆ ಇದೀಗ ರಿಲಯನ್ಸ್‌ ಜಿಯೋ ತನ್ನ ಗ್ರಾಹಕರಿಗೆ ಹೊಸ 279ರೂ. ಕ್ರಿಕೆಟ್ ಆಡ್-ಆನ್ ಪ್ರಿಪೇಯ್ಡ್ ಪ್ಲಾನ್‌ ಬಿಡುಗಡೆ ಮಾಡಿದೆ. ಇದು ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಗೆ ಪ್ರವೇಶವನ್ನು ನೀಡಲಿದ್ದು, ಐಪಿಎಲ್‌ ಕ್ರಿಕೆಟ್‌ ಪಂದ್ಯಗಳನ್ನು ನೋಡುವುದಕ್ಕೆ ಅವಕಾಶ ನೀಡಲಿದೆ.

ಐಪಿಎಲ್‌

ಹೌದು, ಐಪಿಎಲ್‌ 2022 ಸಮಯದಲ್ಲಿ ಕ್ರಿಕೆಟ್‌ ಪ್ರೇಮಿಗಳಿಗಾಗಿ ಜಿಯೋ ಹೊಸ ಪ್ರಿಪೇಯ್ಡ್‌ ಪ್ಲಾನ್‌ ಪರಿಚಯಿಸಿದೆ. 279ರೂ.ಗಳ ಹೊಸ ಕ್ರಿಕೆಟ್ ಆಡ್-ಆನ್ ಪ್ರಿಪೇಯ್ಡ್ ಪ್ಲಾನ್ ನಿಮಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ಗೆ ಪ್ರವೇಶ ನೀಡಲಿದೆ. ಆದರೆ ಈ ಹೊಸ ರೀಚಾರ್ಜ್ ಪ್ಯಾಕ್‌ನಲ್ಲಿ ನಿಮಗೆ ಯಾವುದೇ ಧ್ವನಿ ಕರೆ ಪ್ರಯೋಜನ ಲಭ್ಯವಿರುವುದಿಲ್ಲ. ಬದಲಿಗೆ ಬಳಕೆದಾರರು ಡೇಟಾ ಮತ್ತು OTT ಚಂದಾದಾರಿಕೆಯನ್ನು ಮಾತ್ರ ಪಡೆಯುತ್ತಾರೆ. ಹಾಗಾದ್ರೆ ಜಿಯೋ 279ರೂ. ಕ್ರಿಕೆಟ್ ಆಡ್-ಆನ್ ಪ್ರಿಪೇಯ್ಡ್ ಪ್ಲಾನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 279ರೂ. ಕ್ರಿಕೆಟ್ ಆಡ್-ಆನ್ ಪ್ರಿಪೇಯ್ಡ್ ಪ್ಲಾನ್‌

ಜಿಯೋ 279ರೂ. ಕ್ರಿಕೆಟ್ ಆಡ್-ಆನ್ ಪ್ರಿಪೇಯ್ಡ್ ಪ್ಲಾನ್‌

ಜಿಯೋ 279ರೂ. ಕ್ರಿಕೆಟ್ ಆಡ್-ಆನ್ ಪ್ರಿಪೇಯ್ಡ್ ಪ್ಲಾನ್‌ ಒಂದು ವರ್ಷದ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ನೀಡಲಿದೆ. ಇದು ಒಟ್ಟು 15GB ಹೈ-ಸ್ಪೀಡ್ ಡೇಟಾವನ್ನು ನೀಡುತ್ತದೆ. ಅಲ್ಲದೆ ನೀವು ಈ ಯೋಜನೆಯನ್ನು ಖರೀದಿಸಿದರೆ, ಈಗಾಗಲೇ ನಿಮ್ಮ ಅಸ್ತಿತ್ವದಲ್ಲಿರುವ ಪ್ರಿಪೇಯ್ಡ್ ಯೋಜನೆ ಅವಧಿ ಮುಗಿಯುವವರೆಗೆ ಮಾತ್ರ ಮಾನ್ಯವಾಗಿರುತ್ತದೆ. ಇನ್ನು ಈ ಈ ಕ್ರಿಕೆಟ್ ಪ್ರಿಪೇಯ್ಡ್ ಪ್ಲಾನ್‌ ಎಲ್ಲರಿಗೂ ಲಭ್ಯವಿಲ್ಲ, ಬದಲಿಗೆ ಕೆಲವೇ ಕೆಲ ಆಯ್ದ ಬಳಕೆದಾರರಿಗೆ ಇದು ಲಭ್ಯವಿದೆ. ಕೆಲವು ಆಯ್ದ ಮಂದಿಗಳ ಲಿಸ್ಟ್‌ನಲ್ಲಿ ನೀವು ಕೂಡ ಸೇರಿದ್ದರೆ MyJio ಅಪ್ಲಿಕೇಶನ್‌ನಲ್ಲಿ ಈ ಪ್ಲಾನ್‌ ನಿಮಗೆ ಲಭ್ಯವಾಗಲಿದೆ.

ಇತರೆ ಪ್ರಿಪೇಯ್ಡ್‌ ಪ್ಲಾನ್‌ಗಳು

ಇತರೆ ಪ್ರಿಪೇಯ್ಡ್‌ ಪ್ಲಾನ್‌ಗಳು

ಒಂದು ವೇಳೆ ನಿಮಗೆ ಜಿಯೋದ ಹೊಸ ಕ್ರಿಕೆಟ್ ಪ್ರಿಪೇಯ್ಡ್‌ ಪ್ಲಾನ್‌ ಲಭ್ಯವಾಗಿಲ್ಲದಿದ್ದರೆ ಇತರೆ ಪ್ಲಾನ್‌ಗಳ ಮೂಲಕ ಕ್ರಿಕೆಟ್‌ ಪಂದ್ಯಗಳನ್ನು ನೋಡಬಹುದಾಗಿದೆ. ಇದರಲ್ಲಿ ಜಿಯೋದ 499ರೂ. ಬೆಲೆಯ ಪ್ರಿಪೇಯ್ಡ್ ಕೂಡ ಸೇರಿದೆ. ಈ ಪ್ಲಾನ್‌ನಲ್ಲಿ ಅನಿಯಮಿತ ಧ್ವನಿ ಕರೆಗಳು, ದಿನಕ್ಕೆ 100 SMS ಮತ್ತು ದೈನಂದಿನ 2GBಡೇಟಾ ಪ್ರಯೋಜನ ದೊರೆಯಲಿದ್ದು, 28 ದಿನಗಳ ಮಾನ್ಯತೆಯ ಹೊಂದಿದೆ. ಇದಲ್ಲದೆ ಈ ಪ್ಲಾನ್‌ನಲ್ಲಿ ಒಂದು ವರ್ಷದ Disney+ Hotstar ಮೊಬೈಲ್ ಚಂದಾದಾರಿಕೆಯನ್ನು ಒಳಗೊಂಡಿದೆ.

ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್

ರಿಲಾಯನ್ಸ್‌ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಜಿಯೋ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಜಿಯೋ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್

ರಿಲಾಯನ್ಸ್‌ ಜಿಯೋ ಟೆಲಿಕಾಂನ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ (ಹೆಚ್ಚುವರಿ 10GB ಸಿಗಲಿದೆ) ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 740 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

Best Mobiles in India

English summary
The new Rs 279 cricket add-on prepaid Jio plan offers one year of Disney+ Hotstar Mobile subscription as well as 15GB of total high-speed data.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X