16GB RAM ಸೌಲಭ್ಯದ ಈ ದೈತ್ಯ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ಶಾಕ್!
ಐಕ್ಯೂ ಸಂಸ್ಥೆಯು ಕೆಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಐಕ್ಯೂ 11 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅಧಿಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ.
ಹೌದು, ಅಮೆಜಾನ್ ವೆಬ್‌ಸೈಟ್ ನಲ್ಲಿ ಐಕ್ಯೂ 11 5G ಮೊಬೈಲ್ ಶೇ. 22% ರಿಯಾಯಿತಿ ಬೆಲೆಗೆ ಕಾಣಿಸಿಕೊಂಡಿದೆ. ಅಂದಹಾಗೆ 16GB RAM + 256 GB ವೇರಿಯಂಟ್ ಫೋನಿನ ಬೆಲೆ 66,999 ರೂ. ಆಗಿದ್ದು, ಇದೀಗ 51,999ರೂ. ಗಳ ಆಫರ್ ದರದಲ್ಲಿ ಗ್ರಾಹಕರ ಖರೀದಿಗೆ ಮಾಡಲು ಅವಕಾಶ ಇದೆ. ಇದರೊಂದಿಗೆ ಹೆಚ್ಚುವರಿಯಾಗಿ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹಾಗೂ ಎಕ್ಸ್‌ಚೇಂಜ್ ಡಿಸ್ಕೌಂಟ್ ಕೂಡಾ ದೊರೆಯುತ್ತದೆ.

ಐಕ್ಯೂ 11 5G ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದುಕೊಂಡಿದೆ. ಹಾಗಾದರೇ ಐಕ್ಯೂ 11 5G ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ರಚನೆಯ ಮಾಹಿತಿ
ಐಕ್ಯೂ 11 5G ಫೋನ್ 6.78 ಇಂಚಿನ ಪಂಚ್ ಹೋಲ್ ಸ್ಯಾಮ್‌ಸಂಗ್ E6 ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 3200 x 1440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಹೊಂದಿದೆ. ಇದು 144Hz ರಿಫ್ರೆಶ್ ರೇಟ್, 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒದಗಿಸಲಿದೆ. ಇನ್ನು ಡಿಸ್‌ಪ್ಲೇ 517 PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಅಲ್ಲದೇ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ ಯಾವುದು
ಐಕ್ಯೂ 11 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಅನ್ನು ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 13 ಆಧಾರಿತ Funtouch OS 13 ಬಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಈ ಫೋನ್ 8 RAM ಮತ್ತು 256GB ಹಾಗೂ 16GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಆಯ್ಕೆ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ಮಾಹಿತಿ
ಐಕ್ಯೂ ಸಂಸ್ಥೆಯ ಈ ಫೋನ್ ಮೂರು ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ GN5 ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ 2x ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಬಿಗ್ ಬ್ಯಾಟರಿ ಬ್ಯಾಕ್‌ಅಪ್
ಐಕ್ಯೂ 11 ಫೋನ್ 5,000mAh ಸಾಮರ್ಥ್ಯದ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದು 120W ವೇಗದ ವೈರ್ಡ್ ಚಾರ್ಜಿಂಗ್‌ಗೆ ಸಪೋರ್ಟ್ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, 5 ಜಿ, ವೈಫೈ 6, ಬ್ಲೂಟೂತ್ 5.3, ಜಿಎನ್ಎಸ್ಎಸ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್-ಸಿಗೆ ಸಪೋರ್ಟ್ ನೀಡಲಿದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಐಆರ್ ಸೆನ್ಸಾರ್ ಮತ್ತು ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಕೂಡ ಒಳಗೊಂಡಿದೆ.


Click it and Unblock the Notifications








