Home
ಸುದ್ದಿಜಾಲ

ಈ ದೈತ್ಯ 5G ಸ್ಮಾರ್ಟ್‌ಫೋನಿಗೆ ಈಗ ಸಖತ್ ರಿಯಾಯಿತಿ!

ಐಕ್ಯೂ ಮೊಬೈಲ್‌ ಕಂಪನಿಯು ಈಗಾಗಲೇ ಕೆಲವು ಸ್ಮಾರ್ಟ್‌ಫೋನ್‌ ಮಾಡೆಲ್‌ಗಳಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆ ಪೈಕಿ ಐಕ್ಯೂ 11 5G ಸ್ಮಾರ್ಟ್‌ಫೋನ್‌ ಕೂಡಾ ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅಂದಾಹಾಗೆ ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ನಲ್ಲಿ ಐಕ್ಯೂ 11 5G ಮೊಬೈಲ್‌ ಇದೀಗ ಭರ್ಜರಿ ರಿಯಾಯಿತಿ ಪಡೆದಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ನಲ್ಲಿ ಐಕ್ಯೂ ಸಂಸ್ಥೆಯ ಐಕ್ಯೂ 11 5G ಮೊಬೈಲ್‌ ಶೇ. 16% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB RAM + 256 GB ವೇರಿಯಂಟ್‌ ಫೋನ್ 61,999 ರೂ. ದರ ಹೊಂದಿದ್ದು, ಆದ್ರೆ, ಕೊಡುಗೆಯಲ್ಲಿ ಈಗ 51,999 ರೂ. ಗಳಿಗೆ ಖರೀದಿಗೆ ಲಭ್ಯ ಇದೆ. ಅದಲ್ಲದೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್‌ ಸಹ ದೊರೆಯುತ್ತದೆ.

ಈ ದೈತ್ಯ 5G ಸ್ಮಾರ್ಟ್‌ಫೋನಿಗೆ ಈಗ ಸಖತ್ ರಿಯಾಯಿತಿ!

ಇನ್ನು ಐಕ್ಯೂ 11 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಅನ್ನು ಒಳಗೊಂಡಿದ್ದು, ಇದರೊಂದಿಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಪಡೆದಿದೆ. ಇನ್ನುಳಿಂದ ಐಕ್ಯೂ 11 5G ಮೊಬೈಲ್‌ನ ಇತರೆ ಫೀಚರ್ಸ್‌ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಐಕ್ಯೂ 11 ಮೊಬೈಲ್‌ 6.78 ಇಂಚಿನ ಪಂಚ್-ಹೋಲ್ ಸ್ಯಾಮ್‌ಸಂಗ್‌ E6 ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 3200 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಅನ್ನು ಪಡೆದುಕೊಂಡಿದೆ. ಇದು 144Hz ರಿಫ್ರೆಶ್ ರೇಟ್‌, 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒದಗಿಸಲಿದೆ. ಇನ್ನು ಡಿಸ್‌ಪ್ಲೇ 517 PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್‌ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಈ ದೈತ್ಯ 5G ಸ್ಮಾರ್ಟ್‌ಫೋನಿಗೆ ಈಗ ಸಖತ್ ರಿಯಾಯಿತಿ!

ಪ್ರೊಸೆಸರ್‌ ಯಾವುದು

ಐಕ್ಯೂ 11 ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಅನ್ನು ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ Funtouch OS 13 ಬಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಫೋನ್‌ 8 RAM ಮತ್ತು 256GB ಹಾಗೂ 16GB RAM ಮತ್ತು 256GB ಸ್ಟೋರೇಜ್‌ ಸಾಮರ್ಥ್ಯ ಆಯ್ಕೆ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್ ಹೀಗಿದೆ

ಐಕ್ಯೂ 11 ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಇದ್ದು, ಸೆಕೆಂಡರಿ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ 2x ಟೆಲಿಫೋಟೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಹೀಗಿದೆ

ಐಕ್ಯೂ 11 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 120W ವೇಗದ ವೈರ್ಡ್ ಚಾರ್ಜಿಂಗ್‌ಗೆ ಸಪೋರ್ಟ್‌ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳು ಡ್ಯುಯಲ್ ಸಿಮ್, 5 ಜಿ, ವೈಫೈ 6, ಬ್ಲೂಟೂತ್ 5.3, ಜಿಎನ್ಎಸ್ಎಸ್, ಎನ್ಎಫ್ಸಿ ಮತ್ತು ಯುಎಸ್‌ಬಿ ಟೈಪ್-ಸಿಗೆ ಬೆಂಬಲವನ್ನು ನೀಡಲಿದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಐಆರ್ ಸೆನ್ಸಾರ್‌ ಮತ್ತು ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಕೂಡ ಒಳಗೊಂಡಿದೆ.

Best Mobiles in India

English summary
iQOO 11 5G gets massive price drop on amazon website. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+