ಸದ್ಯದಲ್ಲೇ ಲಾಂಚ್‌ ಆಗಲಿದೆ ಐಕ್ಯೂ 11 ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೇಗಿರಲಿದೆ?

|

ಐಕ್ಯೂ ಕಂಪೆನಿ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿವೆ. ಆಕರ್ಷಕ ಲುಕ್‌ ಹಾಗೂ ವೈವಿಧ್ಯಮಯ ಫೀಚರ್ಸ್‌ಗಳಿಗೆ ಈ ಸ್ಮಾರ್ಟ್‌ಫೋನ್‌ಗಳು ಪ್ರಸಿದ್ಧಿಗಳಿಸಿವೆ. ಇದೇ ಕಾರಣಕ್ಕೆ ಐಕ್ಯೂ ಕಂಪನಿಯ ಫೋನ್‌ಗಳು ಮಾರುಕಟ್ಟೆಯಲ್ಲಿ ತಮ್ಮದೇ ಆದ ಪ್ರಭಾವವನ್ನು ಉಳಿಸಿಕೊಂಡಿವೆ. ಸದ್ಯ ಇದೀಗ ಐಕ್ಯೂ ಕಂಪೆನಿ ಹೊಸ ಐಕ್ಯೂ 11 ಮತ್ತು ಐಕ್ಯೂ 11 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ಗಳು ಇದೇ ವರ್ಷ ಡಿಸೆಂಬರ್‌ ತಿಂಗಳಿನಲ್ಲಿ ಭಾರತಕ್ಕೆ ಎಂಟ್ರಿ ನೀಡುವ ಸಾಧ್ಯತೆಯಿದೆ.

ಕಂಪೆನಿ

ಹೌದು, ಕಂಪೆನಿ ಶೀಘ್ರದಲ್ಲೇ ಹೊಸ ಐಕ್ಯೂ 11 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಪ್ಲ್ಯಾನ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 120W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ ಸಾದ್ಯತೆಯಿದೆ. ಆದರೆ ಐಕ್ಯೂ 11 ಪ್ರೊ ಸ್ಮಾರ್ಟ್‌ಫೋನ್‌ 200W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಐಕ್ಯೂ 11 ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 1440 x 3120 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 144Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 1500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿರಲಿದೆ. ಇನ್ನು ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಐಕ್ಯೂ 11 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ SM8550 ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲವನ್ನು ಹೊಂದಿರುವುದಿಲ್ಲ ಎಂದು ವರದಿಯಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ಐಕ್ಯೂ 11 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರುವ ಸಾಧ್ಯತೆಯಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಏನಿದೆ?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಏನಿದೆ?

ಐಕ್ಯೂ 11 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಲಭ್ಯತೆಯ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಕಲರ್ ಆಯ್ಕೆಗಳಲ್ಲಿ ಬರಲಿದೆ ಎಂಬುದರ ಬಗ್ಗೆ ಕೂಡ ಯಾವುದೇ ವಿವರಗಳು ಬಹಿರಂಗವಾಗಿಲ್ಲ. ಆದರೆ ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ನಿರೀಕ್ಷೆಯಿದೆ.

Best Mobiles in India

English summary
iQoo 11 are expected to launch in December this year

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X