Just In
- 18 hrs ago
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- 20 hrs ago
Tech News of this Week; ಈ ವಾರ ಟೆಕ್ ವಲಯದಲ್ಲಿ ಜರುಗಿದ ಘಟನೆಗಳೇನು?, ಇಲ್ಲಿದೆ ವಿವರ!
- 1 day ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 1 day ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
Don't Miss
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- News
Mangaluru cooker blast: ಸುಟ್ಟಗಾಯಗಳಿಂದ ಚೇತರಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Movies
ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತು
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದು 'ಐಕ್ಯೂ 11' ಫಸ್ಟ್ ಸೇಲ್; ಆಫರ್ ಇದೆ!..ಮಾರುಕಟ್ಟೆಯಲ್ಲಿ ಹೊಸ ಹವಾ ಪಕ್ಕಾ!
ಇತ್ತೀಚಿಗಷ್ಟೆ ಭಾರತದಲ್ಲಿ ಬಿಡುಗಡೆ ಆಗಿರುವ ನೂತನ ಐಕ್ಯೂ 11 (iQOO 11) ಸ್ಮಾರ್ಟ್‌ಫೋನ್ ಇಂದು (ಜ. 13) ಭಾರತದಲ್ಲಿ ಮೊದಲ ಮಾರಾಟ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್‌ಗಾಗಿ ಇ ಕಾಮರ್ಸ್ ದೈತ್ಯ ಅಮೆಜಾನ್‌ನಲ್ಲಿ ಪ್ಲಾಟ್‌ಫಾರ್ಮ್ ಸಿದ್ಧವಾಗಿದ್ದು, ಮಧ್ಯಾಹ್ನ 12ರಿಂದ ಖರೀದಿಗೆ ಲಭ್ಯವಿರಲಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಜೊತೆಗೆ 5000mAh ಸಾಮರ್ಥ್ಯದ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ.

ಹೌದು, ಅಮೆಜಾನ್ ತಾಣದಲ್ಲಿ ಇಂದು ಐಕ್ಯೂ 11 (iQOO 11) ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಶುರು ಮಾಡಲಿದೆ. ಹೈ ಎಂಡ್ ಮಾದರಿಯಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB + 256GB ಮತ್ತು 16GB + 256GB ಆಗಿವೆ. ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 59,999ರೂ.ಗಳು ಆಗಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಅನ್ನು HDFC ಮತ್ತು ICICI ಬ್ಯಾಂಕ್‌ಗಳು ನೀಡುವ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರು 5,000ರೂ. ರಿಯಾಯಿತಿ ಪಡೆಯಬಹುದು. ಜೊತೆಗೆ ಹೆಚ್ಚುವರಿಯಾಗಿ ಸುಮಾರು 4,000ರೂ. ವರೆಗಿನ ಎಕ್ಸ್‌ಚೇಂಜ್ ಬೋನಸ್ ಅನ್ನು ಸಹ ಪಡೆದುಕೊಳ್ಳಬಹುದಾಗಿದೆ.
ಡಿಸ್‌ಪ್ಲೇ ರಚನೆ ಏನು?
ಐಕ್ಯೂ 11 ಸ್ಮಾರ್ಟ್‌ಫೋನ್ 6.78 ಇಂಚಿನ ಪಂಚ್-ಹೋಲ್ ಸ್ಯಾಮ್‌ಸಂಗ್ E6 ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 3200 x 1440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 144Hz ರಿಫ್ರೆಶ್ ರೇಟ್, 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ 517 PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಪಡೆದಿದೆ.

ಪ್ರೊಸೆಸರ್ ಯಾವುದು?
ಐಕ್ಯೂ 11 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ Funtouch OS 13 ಬಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 8 RAM ಮತ್ತು 256GB ಹಾಗೂ 16GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಲ್ಲಿ ಮೆಮೊರಿ ಕಾರ್ಡ್ ಸ್ಲಾಟ್ ಅನ್ನು ನೀಡಲಾಗಿಲ್ಲ ಎಂದು ಐಕ್ಯೂ ಕಂಪೆನಿ ಹೇಳಿದೆ.
ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಐಕ್ಯೂ 11 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ GN5 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ 2x ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಎಲ್ಲಾ ಕ್ಯಾಮೆರಾಗಳು Vivo V2 ಇಮೇಜಿಂಗ್ ಚಿಪ್‌ನಿಂದ ರನ್ ಆಗಲಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಐಕ್ಯೂ 11 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 120W ವೇಗದ ವೈರ್ಡ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5 ಜಿ, ವೈಫೈ 6, ಬ್ಲೂಟೂತ್ 5.3, ಜಿಎನ್ಎಸ್ಎಸ್, ಎನ್ಎಫ್ಸಿ ಮತ್ತು ಯುಎಸ್‌ಬಿ ಟೈಪ್-ಸಿಗೆ ಬೆಂಬಲವನ್ನು ನೀಡಲಿದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಐಆರ್ ಸೆನ್ಸಾರ್ ಮತ್ತು ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಕೂಡ ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470