ಬಹುನಿರೀಕ್ಷಿತ ಐಕ್ಯೂ 11 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ! ಡಿಟೇಲ್ಸ್‌ ಇಲ್ಲಿದೆ!

|

ಐಕ್ಯೂ ಕಂಪೆನಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ವಿಶಿಷ್ಟ ಮಾದರಿಯ ಫೋನ್‌ಗಳಿಂದಲೇ ಮಾರುಕಟ್ಟೆಯಲ್ಲಿ ಹೆಸರುಗಳಿಸಿದೆ. ಇದೇ ಕಾರಣಕ್ಕೆ ಐಕ್ಯೂ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇರಲಿದೆ. ಸದ್ಯ ಇದೀಗ ಐಕ್ಯೂ 11 ಸರಣಿ ಬಿಡುಗಡೆಗೆ ತಯಾರಿ ನಡೆಸಿದ್ದು, ಈ ಸರಣಿಯ ಫೋನ್‌ಗಳ ಫೀಚರ್ಸ್‌ ಬಹಿರಂಗವಾಗಿದೆ. ಈ ಸರಣಿಯಲ್ಲಿ ಐಕ್ಯೂ 11, ಐಕ್ಯೂ 11 ಪ್ರೊ ಮತ್ತು ಐಕ್ಯೂ 11 ಲೆಜೆಂಡ್ ಸ್ಮಾರ್ಟ್‌ಫೋನ್‌ಗಳ ಬರಲಿದೆ.

ಐಕ್ಯೂ

ಹೌದು, ಐಕ್ಯೂ ಕಂಪೆನಿ ಶೀಘ್ರದಲ್ಲೇ ಐಕ್ಯೂ 11 ಸರಣಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ Vivo V2 ಇಮೇಜಿಂಗ್ ಚಿಪ್ ಅನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇದಲ್ಲದೆ ಐಲ್ ಆಫ್ ಮ್ಯಾನ್ ಆವೃತ್ತಿ ಮತ್ತು ಟ್ರ್ಯಾಕ್ ಆವೃತ್ತಿಯ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಕ್ಯೂ 11 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನಿರಲಿದೆ?

ಐಕ್ಯೂ 11 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನಿರಲಿದೆ?

ಐಕ್ಯೂ 11 ಸ್ಮಾರ್ಟ್‌ಫೋನ್‌ 6.78 ಇಂಚಿನ QHD+ ಡಿಸ್‌ಪ್ಲೆ ಹೊಂದಿರುವ ಸಾಧ್ಯತೆಯಿದೆ. ಇದು 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿರಲಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ. ಇದು 19.5:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 507 ppi ಸಾಂದ್ರತೆಯನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌ ನಿರೀಕ್ಷೆ ಏನಿದೆ?

ಪ್ರೊಸೆಸರ್‌ ನಿರೀಕ್ಷೆ ಏನಿದೆ?

ಈ ಸರಣಿಯ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 Gen2 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB , 8GB RAM ಮತ್ತು 256GB , 16GB RAM ಮತ್ತು 512GB ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಐಕ್ಯೂ 11 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಐಕ್ಯೂ 11 ಸ್ಮಾರ್ಟ್‌ಫೋನ್‌ 120W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್, Wi-Fi ಡೈರೆಕ್ಟ್, USB ಟೈಪ್-C 2.0, USB ಆನ್-ದಿ-ಗೋ ಬೆಂಬಲಿಸಲಿದೆ. ಇದಲ್ಲದೆ ಅಂಡರ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಕ್ಯೂ 11 ಸ್ಮಾರ್ಟ್‌ಫೋನ್‌ ಸರಣಿ ಬೆಲೆ ವಿವರ ಇನ್ನು ಕೂಡ ಬಹಿರಂಗವಾಗಿಲ್ಲ. ಇದು ಚೀನಾದಲ್ಲಿ ಮೊದಲಿಗೆ ಬಿಡುಗಡೆಯಾಗಲಿದ್ದು, ನಂತರದ ದಿನಗಳಲ್ಲಿ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡುವ ನಿರೀಕ್ಷೆ ಇಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮಿಡ್‌ ರೇಂಜ್‌ ಪ್ರೈಸ್‌ ಟ್ಯಾಗ್‌ನಲ್ಲಿ ನಿರೀಕ್ಷಿಸಬಹುದಾಗಿದೆ. ಇದಲ್ಲದೆ ಈ ಫೋನ್‌ ಐಲ್ ಆಫ್ ಮ್ಯಾನ್ ಆವೃತ್ತಿ ಮತ್ತು ಟ್ರ್ಯಾಕ್ ಆವೃತ್ತಿಯ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

Read more about:
English summary
iQoo 11 series is confirmed to launch soon with Specs Design Renders Leaked

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X