Home
ಸುದ್ದಿಜಾಲ

ಎಂಟ್ರಿಯಲ್ಲೇ ಸಖತ್‌ ಸೌಂಡ್‌ ಮಾಡ್ತಿದೆ ಐಕ್ಯೂ 11S! ಅಂತಹದ್ದೇನಿದೆ ಇದರಲ್ಲಿ!

ಐಕ್ಯೂ ಕಂಪೆನಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಮೂಲಕ ಜಾಗತಿಕ ವಲಯದಲ್ಲಿ ಸೌಂಡ್‌ ಮಾಡ್ತಿದೆ. ತನ್ನ ಐಕ್ಯೂ 11S ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸು ಮೂಲಕ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್‌ ಕ್ರಿಯೆಟ್‌ ಮಾಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಐಕ್ಯೂ 11S ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 200W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಎಂಟ್ರಿಯಲ್ಲೇ ಸಖತ್‌ ಸೌಂಡ್‌ ಮಾಡ್ತಿದೆ ಐಕ್ಯೂ 11S! ಅಂತಹದ್ದೇನಿದೆ ಇದರಲ್ಲಿ!

ಐಕ್ಯೂ 11S ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ವಿವರ
ಐಕ್ಯೂ 11S ಸ್ಮಾರ್ಟ್‌ಫೋನ್‌ 6.78 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 144Hz ವರೆಗೆ ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಐಕ್ಯೂ 11S ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 92.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಐಕ್ಯೂ 11S ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?
ಐಕ್ಯೂ 11S ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 4nm ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ OriginOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಐಕ್ಯೂ 11S ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌
ಐಕ್ಯೂ 11S ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ Sony VCS IMX866 ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ನೊಂದಿಗೆ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಎಂಟ್ರಿಯಲ್ಲೇ ಸಖತ್‌ ಸೌಂಡ್‌ ಮಾಡ್ತಿದೆ ಐಕ್ಯೂ 11S! ಅಂತಹದ್ದೇನಿದೆ ಇದರಲ್ಲಿ!

ಐಕ್ಯೂ 11S ಸ್ಮಾರ್ಟ್‌ಫೋನ್‌ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಐಕ್ಯೂ 11S ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 200W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 7, ಬ್ಲೂಟೂತ್ v5.3, USB OTG, NFC, Beidou, GPS, GLONASS, GALILEO, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ, ಗೈರೊಸ್ಕೋಪ್, ಇನ್‌ಫ್ರಾರೆಡ್ ರಿಮೋಟ್ ಕಂಟ್ರೋಲ್, ಪ್ರೆಶರ್ ಸೆನ್ಸಾರ್, ಫ್ಲಿಕರ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಸೇರಿವೆ.

ಐಕ್ಯೂ 11S ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ
ಐಕ್ಯೂ 11S ಸ್ಮಾರ್ಟ್‌ಫೋನ್‌ 12GB + 256GB ರೂಪಾಂತರದ ಆಯ್ಕೆಗೆ CNY 3,799 (ಸುಮಾರು 43,000ರೂ)ಬೆಲೆ ಹೊಂದಿದೆ. ಇದರ 16GB + 256GB ರೂಪಾಂತರವು CNY 4,099 (ಸುಮಾರು 46,000ರೂ) ಬೆಲೆ ಪಡೆದಿದೆ. ಇದು ಲಿಸನಿಂಗ್ ಟು ದಿ ಟೈಡ್ ಇನ್ ಕ್ವಿಯಾಂಟಾಂಗ್ (ಬ್ಲೂ), ಲೆಜೆಂಡರಿ ಮತ್ತು ಟ್ರ್ಯಾಕ್ ಬಣ್ಣಗಳಲ್ಲಿ ಲಭ್ಯವಾಗಲಿದೆ. ಇದು ಭಾರತದಲ್ಲಿ ಲಭ್ಯವಾಗುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
iQoo 11S With Up to 1TB of Onboard Storage Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+