ಬಹಿರಂಗವಾಯ್ತು ಐಕ್ಯೂ 12 2023 ಡಿಸೈನ್! ಸ್ಟನ್ನಿಂಗ್ ಲುಕ್, ಸ್ಟೈಲಿಶ್ ಡಿಸೈನ್!
ಸ್ಮಾರ್ಟ್‌ಫೋನ್ ವಲಯದಲ್ಲಿ ಐಕ್ಯೂ ಕಂಪೆನಿಯ ಫೋನ್‌ಗಳಿಗೆ ಭಾರಿ ಡಿಮ್ಯಾಂಡ್ ಇದೆ. ಇದಕ್ಕೆ ತಕ್ಕಂತೆ ಐಕ್ಯೂ ಕಂಪೆನಿ ಹೊಸ ಮಾದರಿಯ ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಐಕ್ಯೂ 12 2023 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಐಕ್ಯೂ 12 2023 ಸ್ಮಾರ್ಟ್‌ಫೋನ್ ಈ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಐಕ್ಯೂ 12 ಸ್ಮಾರ್ಟ್‌ಫೋನ್ 16GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ 12 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ನಿರೀಕ್ಷಿತ
ಐಕ್ಯೂ 12 ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 388PPI ಪಿಕ್ಸೆಲ್ ಸಾಂದ್ರತೆಯನ್ನು ನೀಡಲಿದೆ ಎಂದು ಅಂದಾಜಿಸಲಾಗಿದೆ. 144Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.
ಐಕ್ಯೂ 12 ಪ್ರೊಸೆಸರ್ ಯಾವುದು?
ಐಕ್ಯೂ 12 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.
ಐಕ್ಯೂ 12 ಕ್ಯಾಮೆರಾ ಸೆಟ್‌ಅಪ್ ಯಾವುದು?
ಐಕ್ಯೂ 12 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 24 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎನ್ನಲಾಗಿದೆ.
ಐಕ್ಯೂ 12 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಐಕ್ಯೂ 12 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 100W ವೇಗದ ಚಾರ್ಜಿಂಗ್ ಅನ್ನು ಸಹ ನೀಡಲಿದೆ ಎಂದು ಹೇಳಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಹಾಗೂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.
ಇನ್ನು ಇತ್ತೀಚಿನ ಸುದ್ದಿಗಳನ್ನು ಗಮನಿಸುವುದಾದರೆ ಐಕ್ಯೂ ಕಂಪೆನಿ ಇತ್ತೀಚಿಗಷ್ಟೇ ಹೊಸ ಐಕ್ಯೂ ನಿಯೋ 7ಪ್ರೊ 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಪಡೆದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್-ಲೆನ್ಸ್ ಅನ್ನು ಹೊಂದಿದೆ. ಇದರ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








