ಇತ್ತೀಚಿಗೆ ಎಂಟ್ರಿ ನೀಡಿದ್ದ ಐಕ್ಯೂ 12 5G ಫೋನ್ ಇದೀಗ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯ!
ಐಕ್ಯೂ ಕಂಪೆನಿ ಕೆಲ ದಿನಗಳ ಹಿಂದೆಯಷ್ಟೇ ಭಾರತದಲ್ಲಿ ಬಿಡುಗಡೆ ಮಾಡಿದ್ದ ಐಕ್ಯೂ 12 ಸ್ಮಾರ್ಟ್‌ಫೋನ್ ಭಾರಿ ಸದ್ದು ಮಾಡ್ತಿದೆ. ಇದರ ಡಿಸೈನ್, ವಿಭಿನ್ನ ಫೀಚರ್ಸ್ ಮೊಬೈಲ್ ಪ್ರಿಯರ ಎದೆ ಬಡಿತವನ್ನು ಜೋರಾಗುವಂತೆ ಮಾಡಿದೆ. ಇದೀಗ ಈ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದುಕೊಂಡವರಿಗೆ ಅಮೆಜಾನ್ ಬಿಗ್ ಸಪ್ರೈಸ್ ನೀಡಿದೆ. ಸ್ಮಾರ್ಟ್‌ಫೋನ್ ಮೇಲೆ ಭಾರಿ ರಿಯಾಯಿತಿಯನ್ನು ನೀಡುತ್ತಿದೆ.
ಹೌದು, ಐಕ್ಯೂ 12 ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್ ತಾಣದಲ್ಲಿ ಬಿಗ್ ಡಿಸ್ಕೌಂಟ್ ಲಭ್ಯವಾಗುತ್ತಿದೆ. ಈ ಮೂಲಕ ಎಂಟ್ರಿ ಕೊಟ್ಟ ಕೆಲವೇ ದಿನಗಳಲ್ಲಿ ಆಫರ್‌ನಲ್ಲಿ ಖರೀದಿಸುವ ಭಾಗ್ಯ ನಿಮ್ಮದಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಹಾಗಾದ್ರೆ ಸ್ಮಾರ್ಟ್‌ಫೋನ್ ಮೇಲೆ ನೀಡಲಾಗ್ತಿರುವ ಡಿಸ್ಕೌಂಟ್ ಎಷ್ಟು? ಇದರ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ 12 ಮೇಲಿನ ಆಫರ್ ಏನು?
ಐಕ್ಯೂ 12 ಸ್ಮಾರ್ಟ್‌ಫೋನ್‌ನ 12GB RAM ಮತ್ತು 256GB ಸ್ಟೋರೇಜ್ ಆಯ್ಕೆಯು ಅಮೆಜಾನ್ ತಾಣದಲ್ಲಿ 59,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್ ಬರೋಬ್ಬರಿ 12% ಡಿಸ್ಕೌಂಟ್ ನೀಡುತ್ತಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆ 52,999ರೂ ಗಳಿಗೆ ಇಳಿಕೆಯಾಗಿದೆ. ಇದಲ್ಲದೆ ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಹೆಚ್ಚುವರಿ ರಿಯಾಯಿತಿ ಕೂಡ ಲಭ್ಯವಾಗುತ್ತಿದೆ.
ಐಕ್ಯೂ 12 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ ಹೇಗಿದೆ?
ಐಕ್ಯೂ 12 ಸ್ಮಾರ್ಟ್‌ಫೋನ್ 6.78 ಇಂಚಿನ 1.5K LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2800 x 1260 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಜೊತೆಗೆ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 2160Hz PWM ಡಿಮ್ಮಿಂಗ್ ಅನ್ನು ಬೆಂಬಲಿಸಲಿದ್ದು, ಕಣ್ಣಿಗೆ ಸುರಕ್ಷತೆಯನ್ನು ನೀಡಲಿದೆ.

ಐಕ್ಯೂ 12 ಸ್ಮಾರ್ಟ್‌ಫೋನ್ ಪ್ರೊಸೆಸರ್ ಕಾರ್ಯವೈಖರಿ ಏನು?
ಐಕ್ಯೂ 12 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ನಲ್ಲಿ ರನ್ ಆಗಲಿದೆ. ಇನ್ನು ಗೇಮಿಂಗ್ ಅನುಭವಗಳನ್ನು ಹೆಚ್ಚಿಸಲು ಮತ್ತು ಫ್ರೇಮ್ ದರಗಳನ್ನು ಆಪ್ಟಿಮೈಜ್ ಮಾಡಲು, ಮೀಸಲಾದ Q1 ಚಿಪ್‌ಸೆಟ್ ಅನ್ನು ಡಿವೈಸ್‌ನ ಆರ್ಕಿಟೆಕ್ಚರ್‌ಗೆ ಸಂಯೋಜಿಸಲಾಗಿದೆ. ಹಾಗೆಯೇ 16GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ.
ಐಕ್ಯೂ 12 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ
ಐಕ್ಯೂ 12 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಐಕ್ಯೂ 12 ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಐಕ್ಯೂ 12 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವರೆಗಿನ ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್, ತಲ್ಲೀನಗೊಳಿಸುವ ಆಡಿಯೊ ಅನುಭವಕ್ಕಾಗಿ ಸ್ಟೀರಿಯೋ ಸ್ಪೀಕರ್‌ಗಳು ಮತ್ತು ಹೈ-ರೆಸ್ ಆಡಿಯೊಗೆ ಬೆಂಬಲವನ್ನು ನೀಡಲಿದೆ.


Click it and Unblock the Notifications








