Home
ಸುದ್ದಿಜಾಲ

iQOO 12: ಅಂತೂ ಇಂತೂ ಕೂಡಿ ಬಂತು ಬಿಡುಗಡೆಗೆ ಮುಹೂರ್ತ! ಪ್ರೊಸೆಸರ್‌ ಮೇಲಿದೆ ಬೆಟ್ಟದಷ್ಟು ನಿರೀಕ್ಷೆ?

ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಐಕ್ಯೂ 12 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ತನ್ನ ಫೀಚರ್ಸ್‌ ಸೋರಿಕೆಯ ಮೂಲಕ ಮಾರುಕಟ್ಟೆಯಲ್ಲಿ ಹಲ್‌ಚಲ್‌ ಸೃಷ್ಟಿಸಿರುವ ಈ ಫೋನ್‌ ಡಿಸೆಂಬರ್‌ 12 ರಂದು ಭಾರತದಲ್ಲಿ ಲಾಂಚ್‌ ಆಗೋದು ಕನ್ಫರ್ಮ್‌ ಆಗಿದೆ. ಇದು ಸ್ನಾಪ್‌ಡ್ರಾಗನ್‌ 8 Gen 3 ಪ್ರೊಸೆಸರ್‌ನಲ್ಲಿ ಬರುವ ಭಾರತದಲ್ಲಿನ ಮೊದಲ ಸ್ಮಾರ್ಟ್‌ಫೋನ್‌ ಎನಿಸಿಕೊಳ್ಳಲಿದೆ.

ಹೌದು, ಐಕ್ಯೂ 12 ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಗೆ ಡಿಸೆಂಬರ್ 12 ರಂದು ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಸೂಪರ್‌ ಫಾಸ್ಟ್‌ 120W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

iQOO 12: ಅಂತೂ ಇಂತೂ ಕೂಡಿ ಬಂತು ಬಿಡುಗಡೆಗೆ ಮುಹೂರ್ತ! ಬೆಟ್ಟದಷ್ಟು ನಿರೀಕ್ಷೆ?

ಐಕ್ಯೂ 12 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ರಚನೆ ಹೇಗಿದೆ?
ಐಕ್ಯೂ 12 ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇಯು 1,260x2,800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್‌ ರೇಟ್‌ ಬೆಂಬಲವನ್ನು ಹೊಂದಿದ್ದು, ಉತ್ತಮ ಚಿತ್ರ ಗುಣಮಟ್ಟಕ್ಕಾಗಿ HDR10+ ಅನ್ನು ಬೆಂಬಲಿಸುತ್ತದೆ.

ಐಕ್ಯೂ 12 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?
ಐಕ್ಯೂ 12 (iqoo 12)ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ಪ್ರೊಸೆಸರ್‌ನಲ್ಲಿ ಬರುವ ಭಾರತದಲ್ಲಿನ ಮೊದಲ ಸ್ಮಾರ್ಟ್‌ಫೋನ್‌ ಎನಿಸಿಕೊಳ್ಳಲಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

iQOO 12: ಅಂತೂ ಇಂತೂ ಕೂಡಿ ಬಂತು ಬಿಡುಗಡೆಗೆ ಮುಹೂರ್ತ! ಬೆಟ್ಟದಷ್ಟು ನಿರೀಕ್ಷೆ?

ಐಕ್ಯೂ 12 ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌
ಐಕ್ಯೂ 12 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ವರದಿಯಾಗಿದೆ.

ಐಕ್ಯೂ 12 ಸ್ಮಾರ್ಟ್‌ಫೋನ್‌ ಬ್ಯಾಟರಿ ಮತ್ತು ಇತರೆ
ಐಕ್ಯೂ 12 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸೂಪರ್-ಫಾಸ್ಟ್ 120W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಗೈರೋಸ್ಕೋಪ್‌, ಜೊತೆಗೆ ಇನ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ನೊಂದಿಗೆ ಬರುವ ನಿರೀಕ್ಷೆಯನ್ನು ಇಡಲಾಗಿದೆ.

iQOO 12: ಅಂತೂ ಇಂತೂ ಕೂಡಿ ಬಂತು ಬಿಡುಗಡೆಗೆ ಮುಹೂರ್ತ! ಬೆಟ್ಟದಷ್ಟು ನಿರೀಕ್ಷೆ?

ಐಕ್ಯೂ 12 ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ ನಿರೀಕ್ಷೆ?
ಐಕ್ಯೂ 12 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಡಿಸೆಂಬರ್ 12 ರಂದು ಪ್ರಾರಂಭವಾಗಲಿದೆ. ಇದರ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ, ಆದರೆ ಇದು ಭಾರತದಲ್ಲಿ ಸ್ನಾಪ್‌ಡ್ರಾಗನ್‌ 8 Gen 3 ಚಿಪ್‌ಸೆಟ್‌ನಲ್ಲಿ ಬರುವ ಮೊದಲ ಫೋನ್‌ ಆಗಿರುವುದರಿಂದ ಇದರ ಬೆಲೆ ಮಿಡ್‌ರೇಂಜ್‌ನಲ್ಲಿ ಬರುವ ಸಾಧ್ಯತೆಯಿದೆ.
ಇನ್ನು ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಈಗಾಗಲೇ ಬಿಡುಗಡೆ ಆಗಿದೆ. ಚೀನಾದಲ್ಲಿ ಇದು 12GB RAM + 256GB ಸ್ಟೋರೇಜ್ ಮಾದರಿಗೆ CNY 3,999 (ಸುಮಾರು ರೂ. 45,000)ಬೆಲೆಯನ್ನು ಪಡೆದುಕೊಂಡಿದೆ.

Best Mobiles in India

English summary
iQOO 12 is all set to be launched in India on December 12: Expected specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+