ಐಕ್ಯೂ 12 ಸರಣಿ ಬಿಡುಗಡೆಗೆ ಮುಹೂರ್ತ ಫಿಕ್ಸ್! ಏನೆಲ್ಲಾ ನಿರೀಕ್ಷೆ?
ಹಬ್ಬ ಹರಿದಿನಗಳ ಬಂದ್ರೆ ಸಾಕು ಮೊಬೈಲ್ ಮಾರುಕಟ್ಟೆ ಸಾಕಷ್ಟು ರಂಗೇರಲಿದೆ. ಹೊಸ ಸ್ಮಾರ್ಟ್‌ಫೋನ್‌ಗಳ ಭರಾಟೆಯಲ್ಲಿ ಟೆಕ್ ವಲಯ ಭಾರಿ ಸಂಚಲನ ಮೂಡಿಸಲಿದೆ. ಅದಕ್ಕೆ ಇಂಬು ಕೊಡುವಂತೆ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ರಿಂಗಣಿಸುತ್ತಿವೆ. ಈ ಸಾಲಿಗೆ ಸೇರುವುದಕ್ಕೆ ಇದೀಗ ಐಕ್ಯೂ 12 ಸರಣಿ ತುದಿಗಾಲಿನಲ್ಲಿ ನಿಂತಿದೆ ಎನ್ನಲಾಗಿದೆ.
ಹೌದು, ಐಕ್ಯೂ 12 ಸರಣಿಯು ನವೆಂಬರ್ 7 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಈ ಸರಣಿಯಲ್ಲಿ ಐಕ್ಯೂ 12 ಮತ್ತು ಐಕ್ಯೂ 12 ಪ್ರೊ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಲಿವೆ ಎಂದು ವರದಿಯಾಗಿದೆ. ಇದರಲ್ಲಿ ಐಕ್ಯೂ 12 ಪ್ರೊ ಫೋನ್ 120W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಐಕ್ಯೂ 12 ಸರಣಿಯಲ್ಲಿ ಏನೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಲಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ 12 ಸರಣಿ ಫೀಚರ್ಸ್ ನಿರೀಕ್ಷೆ ಏನು?
ಐಕ್ಯೂ 12 ಸರಣಿಯಲ್ಲಿ ಐಕ್ಯೂ 12 ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2048 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 144 Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದ್ದು, 341 ppi ಪಿಕ್ಸೆಲ್ ಸಾಂದ್ರತೆಯನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ.
ಐಕ್ಯೂ 12 ಸರಣಿ ಪ್ರೊಸೆಸರ್ ಯಾವುದು?
ಐಕ್ಯೂ 12 ಸರಣಿ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 24GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಐಕ್ಯೂ 12 ಸರಣಿ ಕ್ಯಾಮೆರಾ ಸೆಟ್‌ಅಪ್ ಏನಿದೆ?
ಐಕ್ಯೂ 12 ಸರಣಿ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾವನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ OmniVision OV50H ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ Samsung ISOCELL JN1 ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 64 ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿರುವ ಸಾಧ್ಯತೆಯಿದೆ. ಇದಲ್ಲದೆ 24 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಐಕ್ಯೂ 12 ಸರಣಿ ಬ್ಯಾಟರಿ ಸಾಮರ್ಥ್ಯ
ಐಕ್ಯೂ 12 ಸ್ಮಾರ್ಟ್‌ಫೋನ್ 4,880mAh ಬ್ಯಾಟರಿಯನ್ನು ಹೊಂದಿರುತ್ತದೆ ಎನ್ನಲಾಗಿದೆ. ಇದರಲ್ಲಿ ಐಕ್ಯೂ 12 ಸ್ಮಾರ್ಟ್‌ಫೋನ್ 120W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಆದರೆ ಐಕ್ಯೂ 12 ಪ್ರೊ ಸ್ಮಾರ್ಟ್‌ಫೋನ್ 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲದೊಂದಿಗೆ 4,980mAh ಬ್ಯಾಟರಿಯನ್ನು ನೀಡಬಹುದು ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹಾಟ್‌ಸ್ಪಾಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್, ಕಂಪಾಸ್, ಜಿರೋಸ್ಕೋಪ್ ಅನ್ನು ಹೊಂದಿರಲಿದೆ.
ಐಕ್ಯೂ 12 ಸರಣಿ ಬೆಲೆ ಮತ್ತು ಲಭ್ಯತೆ
ಐಕ್ಯೂ 12 ಸರಣಿಯು ಮುಂದಿನ ತಿಂಗಳು ಅಂದರೆ ನವೆಂಬರ್ 7 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಆದರೆ ಇದರ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್ ಅನ್ನು ಕಪ್ಪು, ಕೆಂಪು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ನಿರೀಕ್ಷಿಸಬಹುದಾಗಿದೆ.


Click it and Unblock the Notifications








