ಇಂದು ಗ್ರ್ಯಾಂಡ್ ಎಂಟ್ರಿ ಕೊಡಲಿದೆ ಐಕ್ಯೂ 12 ಫೋನ್!..ಬೆಲೆ ಎಷ್ಟು ಅಂತೀರಾ?
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ಒಂದಾದ ಐಕ್ಯೂ ತನ್ನ ಕೆಲವು ಭಿನ್ನ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಸಂಸ್ಥೆಯು ಇತ್ತೀಚಿಗಷ್ಟೆ ಪರಿಚಯಿಸಿರುವ ಐಕ್ಯೂ 12 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳಿಂದಾಗಿ ಗ್ರಾಹಕರ ಗಮನ ಸೆಳೆದಿದೆ. ಇಂದು (ಡಿಸೆಂಬರ್ 12 ರಂದು) ಈ ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಗೆ ಎಂಟ್ರಿ ನೀಡಲು ಸಜ್ಜಾಗಿದೆ.
ಹೌದು, ಐಕ್ಯೂ 12 ಸ್ಮಾರ್ಟ್‌ಫೋನ್ ಇಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಆಗಲಿದೆ. ಫ್ಲ್ಯಾಗ್‌ಶಿಪ್ ಮಾದರಿಯ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ಪವರ್ ನಲ್ಲಿ ಕೆಲಸ ಮಾಡಲಿದ್ದು, ಇದರ ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ.

ಹಾಗೆಯೇ ಈ ಫೋನ್ 16GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಒಳಗೊಂಡಿದ್ದು, ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ. ಹಾಗಾದರೆ ಐಕ್ಯೂ 12 ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ? ಭಾರತೀಯ ಮಾರುಕಟ್ಟೆಯಲ್ಲಿ ಈ ಫೋನಿನ ನಿರೀಕ್ಷಿತ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಮತ್ತು ವಿನ್ಯಾಸದ ಮಾಹಿತಿ
ಐಕ್ಯೂ 12 ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1,260 x 2,800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಬೆಂಬಲವನ್ನು ಒಳಗೊಂಡಿದ್ದು, ಉತ್ತಮ ಚಿತ್ರ ಗುಣಮಟ್ಟಕ್ಕಾಗಿ HDR10+ ಅನ್ನು ಸಪೋರ್ಟ್ ಮಾಡುತ್ತದೆ.

ಪ್ರೊಸೆಸರ್ ಪವರ್ ಯಾವುದು
ಐಕ್ಯೂ 12 (iqoo 12) ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 3 SoC ಪ್ರೊಸೆಸರ್ ಪವರ್ ಒಳಗೊಂಡಿದ್ದು, ಇದು ಆಂಡ್ರಾಯ್ಡ್ 14 ಓಎಸ್ ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 12GB RAM + 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಕ್ಯಾಮೆರಾ ಸೆನ್ಸಾರ್ ರಚನೆ ಎಷ್ಟು
ಐಕ್ಯೂ 12 ಮೊಬೈಲ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು ತೃತೀಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿರಲಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ತಿಳಿದುಬಂದಿದೆ.
ಅಧಿಕ ಬ್ಯಾಟರಿ ಮತ್ತು ಇತರೆ ಆಯ್ಕೆಗಳು
ಐಕ್ಯೂ 12 ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದಿದ್ದು, ಇದು ಸೂಪರ್-ಫಾಸ್ಟ್ 120W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಗೈರೋಸ್ಕೋಪ್, ಜೊತೆಗೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುವ ನಿರೀಕ್ಷೆ ಇದೆ.
ನಿರೀಕ್ಷಿತ ಬೆಲೆ ಮತ್ತು ಲಭ್ಯತೆ
ಐಕ್ಯೂ 12 ಪ್ರೊ ಮೊಬೈಲ್ 16GB RAM ಮತ್ತು 256GB ಸ್ಟೋರೇಜ್‌ನ ಬೆಲೆ ಭಾರತದಲ್ಲಿ ಅಂದಾಜು 58,000ರೂ ಎಂದು ಅಂದಾಜಿಸಲಾಗಿದೆ. ಹಾಗೆಯೇ 512GB ಸ್ಟೋರೇಜ್ ಮಾಡೆಲ್ ಆಯ್ಕೆಯ ಬೆಲೆ 63,800ರೂ. ಇರಬಹುದು ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications








