Home
ಸುದ್ದಿಜಾಲ

iQOO 13 ಫೀಚರ್ಸ್‌ ಬಹಿರಂಗ; ಮೂರು 50MP ಕ್ಯಾಮೆರಾಗಳು.. ದೊಡ್ಡ ಬ್ಯಾಟರಿ.. ಯಾವಾಗ ಲಾಂಚ್?

ಐಕ್ಯೂ (iQOO) ತನ್ನ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಲು ಸಜ್ಜಾಗಿದೆ. ಶೀಘ್ರದಲ್ಲೇ ಹೊಸ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಹೌದು, ಡಿಸೆಂಬರ್ 3 ರಂದು ಹೊಸ ಐಕ್ಯೂ 13 (iQOO 13) ಮೊಬೈಲ್‌ ಭಾರತದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಬಿಡುಗಡೆಯ ದಿನಾಂಕ ಸಮೀಪಿಸುತ್ತಿದ್ದಂತೆ, ಹೊಸ ಫೋನಿನ ವೈಶಿಷ್ಟ್ಯಗಳು ಒಂದೊಂದಾಗಿ ಬಹಿರಂಗಗೊಳ್ಳುತ್ತಿವೆ. ಕಂಪನಿಯು ಈ ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಿದೆ. ಬನ್ನಿ, ಈ ಹೊಸ ಮೊಬೈಲ್ ಯಾವೆಲ್ಲಾ ವಿಶೇಷತೆಗಳನ್ನು ಹೊಂದಿದೆ ಎನ್ನುವುದನ್ನು ತಿಳಿಯೋಣ.

ಹೌದು, ಕಂಪನಿಯು iQOO 12 ಫೋನಿನ ಉತ್ತರಾಧಿಕಾರಿಯಾಗಿ ಐಕ್ಯೂ 13 ಫೋನನ್ನು ಬಿಡುಗಡೆ ಮಾಡುತ್ತಿದೆ. ಈ ಫೋನ್ 144Hz ರಿಫ್ರೆಶ್ ದರದೊಂದಿಗೆ 2K ಅಮೋಲೆಡ್‌ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ಮತ್ತು IP69 ರೇಟಿಂಗ್‌ ಪಡೆದಿದೆ. ಫೋನಿನಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು 50 ಮೆಗಾಪಿಕ್ಸೆಲ್ ಕ್ಯಾಮೆರಾ ಇರಲಿದೆ. ಇದರೊಂದಿಗೆ 16GB RAM + 1TB ಸ್ಟೋರೇಜ್, 6150mAh ದೊಡ್ಡ ಬ್ಯಾಟರಿ ಮತ್ತು 120W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಿದ್ಧವಾಗಿದೆ.

iQOO: 32MP ಸೆಲ್ಫಿ ಕ್ಯಾಮೆರಾ.. 6000mAh ಬ್ಯಾಟರಿ.. ಬರ್ತಿದೆ ಹೊಸ ಫೋನ್

ಐಕ್ಯೂ 13 ಫೋನಿನ ಬೆಲೆ (ನಿರೀಕ್ಷಿತ)

ಐಕ್ಯೂ 13 ಫೋನನ್ನು ಚೀನಾದಲ್ಲಿ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಫೋನಿನ 12GB RAM + 256GB ಸ್ಟೋರೇಜ್ ಆಯ್ಕೆಯ ಬೆಲೆ 47,200 ರೂ. ಆಗಿದೆ. 16 GB RAM + 1 TB ಸ್ಟೋರೇಜ್ ರೂಪಾಂತರವನ್ನು 61,400 ರೂ.ಗೆ ಪರಿಚಯಿಸಲಾಗಿದೆ. ಕಂಪನಿಯು ಭಾರತದಲ್ಲಿ ಈ ಫೋನನ್ನು ಸ್ವಲ್ಪ ಕಡಿಮೆ ಬೆಲೆಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಈ ಐಕ್ಯೂ 13 ಮೊಬೈಲ್ ಐಕ್ಯೂ ಇ-ಸ್ಟೋರ್ ಮತ್ತು ಅಮೆಜಾನ್‌ ಮೂಲಕ ಮಾರಾಟವಾಗಲಿದೆ. ಕಂಪನಿಯು ನಾರ್ಡೊ ಗ್ರೇ ಮತ್ತು ಲೆಜೆಂಡ್ ಆವೃತ್ತಿಯ ಬಣ್ಣ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಿದೆ. ಲೆಜೆಂಡ್ ಆವೃತ್ತಿಯು BMWನ ಐಕಾನ್ ಕೆಂಪು, ಕಪ್ಪು ಮತ್ತು ನೀಲಿ ಪಟ್ಟಿಗಳನ್ನು ಮ್ಯಾಟ್ ವೈಟ್‌ ಹಿಂಬದಿಯ ಫಲಕದಲ್ಲಿ ಹೊಂದಿದೆ.

ಐಕ್ಯೂ 13 ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಐಕ್ಯೂ 13 ಮೊಬೈಲ್ 6.82 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು 3,168 X 1,440 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಪ್ಲೇಯು ಡಿಸ್ಪ್ಲೇಯು 144Hz ರಿಫ್ರೆಶ್ ದರ, 1,800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿರಲಿದೆ. ಜೊತೆಗೆ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಸಹ ಲಭ್ಯವಿರಲಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ಐಕ್ಯೂ 13 ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡುವುದು ಖಚಿತವಾಗಿದೆ. ಈ ಪ್ರೊಸೆಸರ್‌ ಅನ್ನು 4 ನ್ಯಾನೋಮೀಟರ್‌ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 15 ಆಧಾರಿತ OriginOS 5 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್

ಮುಂಬರುವ ಐಕ್ಯೂ 13 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಲಭ್ಯವಿರಲಿದೆ. ಜೊತೆಗೆ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಸೋನಿ ತೃತೀಯ ಕ್ಯಾಮೆರಾ ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿರಲಿದೆ. ನೀವು 60fps ನಲ್ಲಿ 4K ವಿಡಿಯೋಗಳನ್ನು ಚಿತ್ರೀಕರಿಸಬಹುದು. ಜೊತೆಗೆ, ಮಾನ್‌ಸ್ಟರ್ ಹ್ಯಾಲೊ ಲೈಟಿಂಗ್ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ಐಕ್ಯೂ 13 ಫೋನನ್ನು 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಚೀನಾದಲ್ಲಿ 6150mAh ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಲಾಗಿದೆ.

ಇತರೆ ವೈಶಿಷ್ಟ್ಯಗಳು

ಐಕ್ಯೂ 13 ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ಮತ್ತು IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, 4G LTE, ವೈ ಫೈ 7, ಬ್ಲೂಟೂತ್ 5.4, ಎನ್‌ಎಫ್‌ಸಿ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿರಲಿದೆ.

Best Mobiles in India

English summary
iQOO 13 Specifications Revealed Ahead of December 3 Launch in India: know details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+