iQOO 13 ಮೊಬೈಲ್ ಲಾಂಚ್; 120W ಫಾಸ್ಟ್ ಚಾರ್ಜಿಂಗ್..ಪವರ್‌ಫುಲ್ ಪ್ರೊಸೆಸರ್ ಇದೆ!
ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಬಹುನಿರೀಕ್ಷಿತ ಐಕ್ಯೂ 13 (iQOO 13) ಸ್ಮಾರ್ಟ್‌ಫೋನ್ ಇದೀಗ ಚೀನಾದಲ್ಲಿ ಅಧಿಕೃತವಾಗಿ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ ಇತ್ತೀಚಿನ ನೂತನ ಸ್ನಾಪ್‌ಡ್ರಾಗನ್ 8 ಎಲೈಟ್ SoC ಪ್ರೊಸೆಸರ್ ಸಾಮರ್ಥ್ಯದ ಒಳಗೊಂಡಿರುವುದು ಪ್ರಮುಖ ಹೈಲೈಟ್ ಆಯ್ಕೆಗಳಲ್ಲಿ ಒಂದಾಗಿದೆ. ಹಾಗೆಯೇ ಈ ಫೋನ್ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಬಲದಲ್ಲಿ ಇದೆ.
ಹೌದು, ಐಕ್ಯೂ 13 (iQOO 13) ಮೊಬೈಲ್ ಚೀನಾ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ದೈತ್ಯ ಫೋನ್ 6,150mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಹಾಗಾದರೇ ಐಕ್ಯೂ 13 ಫೋನಿನ ಇತರೆ ಫೀಚರ್ಸ್ ಬಗ್ಗೆ ತಿಳಿಯಲು ಮುಂದೆ ಓದಿರಿ.

ಐಕ್ಯೂ 13 ಫೋನಿನ ಫೀಚರ್ಸ್
ಐಕ್ಯೂ 13 ಮೊಬೈಲ್ 6.82 ಇಂಚಿನ ಡಿಸ್‌ಪ್ಲೇ ಪಡೆದಿದ್ದು, ಡಿಸ್‌ಪ್ಲೇಯು 1,440 x 3,168 ಪಿಕ್ಸೆಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಸ್ಕ್ರೀನ್ 2K ಸಪೋರ್ಟ್, BOE Q10 8T LTPO 2.0 OLED ಡಿಸ್‌ಪ್ಲೇ ಹೊಂದಿದ್ದು, ಇದರ ಜೊತೆಗೆ 144Hz ರಿಫ್ರೆಶ್ ರೇಟ್ ಮತ್ತು HDR ಬೆಂಬಲವನ್ನು ಒಳಗೊಂಡಿದೆ.
ಐಕ್ಯೂ 13 ಮೊಬೈಲ್ ನೂತನ ಸ್ನಾಪ್‌ಡ್ರಾಗನ್ 8 ಎಲೈಟ್ SoC ಪ್ರೊಸೆಸರ್ ಸಾಮರ್ಥ್ಯದ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ Android 15 ಆಧಾರಿತ OriginOS 5 ಔಟ್-ಆಫ್-ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಅಲ್ಲದೇ ಈ ಫೋನ್ Q2 ಗೇಮಿಂಗ್ ಚಿಪ್‌ಸೆಟ್ ಅನ್ನು ಕೂಡಾ ಹೊಂದಿದೆ. ಅಲ್ಲದೇ 12GB + 256GB, 12GB + 512GB ಹಾಗೂ 16GB RAM + 256GB/ 512GB / 1TB ಆಯ್ಕೆಯಲ್ಲಿ ಖರೀದಿಗೆ ಲಭ್ಯ.
ಐಕ್ಯೂ 13 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ದ್ವಿತೀಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಐಕ್ಯೂ 13 ಮೊಬೈಲ್ 6,150mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಅನುಗುಣವಾಗಿ 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 7, ಬ್ಲೂಟೂತ್ 5.4, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಫೋನ್ ಇನ್-ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡಾ ಹೊಂದಿದೆ.
ಬೆಲೆ ಮತ್ತು ಲಭ್ಯತೆ
ಐಕ್ಯೂ 13 ಮೊಬೈಲ್ ನ ಆರಂಭಿಕ 12GB + 256GB ವೇರಿಯಂಟ್ ಚೀನಾದಲ್ಲಿ CNY 3,999 (ಭಾರತದಲ್ಲಿ ಅಂದಾಜು 47,200ರೂ) ಆಗಿದೆ. ಅಲ್ಲದೇ 12GB + 512GB ಹಾಗೂ 16GB RAM + 256GB/ 512GB / 1TB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಈ ಫೋನ್ ಐಲ್ ಆಫ್ ಮ್ಯಾನ್, ಲೆಜೆಂಡರಿ ಆವೃತ್ತಿ, ನಾರ್ಡೊ ಗ್ರೇ ಮತ್ತು ಟ್ರ್ಯಾಕ್ ಆವೃತ್ತಿಯಲ್ಲಿ ಲಭ್ಯ.


Click it and Unblock the Notifications







