iQoo 3 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಮತ್ತೆ ಭರ್ಜರಿ ಇಳಿಕೆ!

|

ವಿವೋ ಸಂಸ್ಥೆಯು ಸಬ್‌ಬ್ರ್ಯಾಂಡ್ iQoo ಸಂಸ್ಥೆಯ iQoo 3 ಸ್ಮಾರ್ಟ್‌ಫೋನ್ ವಿಶೇಷ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. iQoo ಸ್ಮಾರ್ಟ್‌ಫೋನ್‌ ಈಗಾಗಲೇ ಒಮ್ಮೆ ದರ ಕಡಿತ ಕಂಡಿದ್ದು, ಈಗ ಮತ್ತೆ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆ. ಈ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಆಕರ್ಷಿಸಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಸಹ ಪಡೆದಿದೆ.

ಪ್ರೈಸ್‌ಟ್ಯಾಗ್

ಹೌದು, iQoo-ಐಕ್ಯೂ ಸಂಸ್ಥೆಯು ತನ್ನ ಜನಪ್ರಿಯ iQoo 3 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 13,000ರೂ.ಗಳನ್ನು ಕಡಿತ ಮಾಡಿದೆ. iQoo 3 ಫೋನಿನ 8 RAM+128GB ಸ್ಟೋರೇಜ್‌ ವೇರಿಯಂಟ್ ಬೆಲೆಯು 34,990ರೂ ಆಗಿದ್ದು, ಈಗ ದರ ಇಳಿಕೆಯಿಂದ 24,990ರೂ.ಗಳಿಗೆ ಲಭ್ಯ. ಹಾಗೆಯೇ 40,990ರೂ.ಗಳ ಪ್ರೈಸ್‌ಟ್ಯಾಗ್ ಹೊಂದಿದ್ದ 8GB+256GB ವೇರಿಯಂಟ್ ಈಗ 27,990ರೂ. ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಕ್ವಾಂಟಮ್ ಸಿಲ್ವರ್ ಮತ್ತು ಬ್ಲ್ಯಾಕ್‌ ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಹಾಗಾದರೆ iQoo 3 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಮತ್ತು ರಚನೆ

ಡಿಸ್‌ಪ್ಲೇ ಮತ್ತು ರಚನೆ

iQoo 3 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.4 ಇಂಚಿನ ಪೂರ್ಣ ಹೆಚ್‌ಡಿ AMOLED ಡಿಸ್‌ಪ್ಲೇಯನ್ನು ಪಡೆದಿದೆ. ಡಿಸ್‌ಪ್ಲೇಯು 1200 nits ಬ್ರೈಟ್ನೆಸ್‌ ಸಾಮರ್ಥ್ಯದಲ್ಲಿದ್ದು, HDR10+ ಅನ್ನು ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇಯ ರೆಫ್ರೇಶ್ ರೇಟ್ 120Hz ಆಗಿದ್ದು, ಫಿಂಗರ್‌ಪ್ರಿಂಟ್ ಸೆನ್ಸಾರ್ ಪಡೆದಿದೆ. ಇಲ್ಲದೇ ಸ್ಕ್ರೀನ್ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ 6 ಅನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

iQoo 3 ಸ್ಮಾರ್ಟ್‌ಫೋನ್ 5G ಬೆಂಬಲಿತ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 ಪ್ರೊಸೆಸರ್‌ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ iQoo UI ಹಾಗೂ ಆಂಡ್ರಾಯ್ಡ್ 10 ಓಎಸ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಫೋನ್ ಮೂರು ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಅವು ಕ್ರಮವಾಗಿ 8GB RAM + 128GB, 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಯಲ್ಲಿವೆ.

ಸ್ಪೆಷಲ್ ಕ್ಯಾಮೆರಾ

ಸ್ಪೆಷಲ್ ಕ್ಯಾಮೆರಾ

iQoo 3 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ನಾಲ್ಕು ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ತೃತೀಯ ಕ್ಯಾಮೆರಾವು 13ಎಂಪಿಯ ವೈಲ್ಡ್ ಆಂಗಲ್ ಲೆನ್ಸ್‌ ಪಡೆದಿದೆ. ನಾಲ್ಕನೇ ಕ್ಯಾಮೆರಾವು ಡೆಪ್ತ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಕ್ಯಾಮೆರಾವು 1x, 5x ಮತ್ತು 20x ಜೂಮ್ ಸೌಲಭ್ಯ ಹೊಂದಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

iQoo 3 ಸ್ಮಾರ್ಟ್‌ಫೋನ್ 4,400mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಇದರೊಂದಿಗೆ 55W ಸಾಮರ್ಥ್ಯ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್‌ಲಾಕ್ ಸೌಲಭ್ಯ, ಕಾರ್ಬನ್ ಫೈಬರ್ VC ಲಿಕ್ವಡ್ ಕೂಲಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ವೈಫೈ, ಬ್ಲೂಟೂತ್, ಜಿಪಿಎಸ್‌ ಸೌಲಭ್ಯಗಳನ್ನು ಪಡೆದಿದೆ.

Most Read Articles
Best Mobiles in India

English summary
iQOO3 has recently received a price cut of Rs 13,000 and it is visible on the official product page of Flipkart.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X