Home
ಸುದ್ದಿಜಾಲ

ಭಾರತದಲ್ಲಿ ಐಕ್ಯೂ ಮತ್ತು ಐಕ್ಯೂ 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಜನಪ್ರಿಯ ಐಕ್ಯೂ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ಐಕ್ಯೂ 7 ಮತ್ತು ಐಕ್ಯೂ 7 ಲೆಜೆಂಡ್ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಐಕ್ಯೂ 7 ಸ್ಮಾರ್ಟ್‌ಫೋನ್‌ ಈಗಾಗಲೇ ಚೀನಾದಲ್ಲಿ ಬಿಡುಗಡೆ ಆಗಿದ್ದ ಐಕ್ಯೂ ನಿಯೋ 5 ರಿಬ್ರಾಂಡೆಡ್ ಆಗಿದೆ.

ಐಕ್ಯೂ

ಹೌದು, ಐಕ್ಯೂ ಕಂಪೆನಿ ಐಕ್ಯೂ 7 ಮತ್ತು ಐಕ್ಯೂ 7 ಲೆಜೆಂಡ್ ಎಂಬ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ. ಜೊತೆಗೆ 120Hz ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ಗಳು 4,400mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 66W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಕ್ಯೂ 7 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಐಕ್ಯೂ 7 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಐಕ್ಯೂ 7 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20:9 ರಚನೆಯ ಅನುಪಾತ, 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿರುವ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ವತಂತ್ರವಾದ ಚಿಪ್ ಅನ್ನು ಹೊಂದಿದ್ದು, ಇದು ಫ್ರೇಮ್ ಅನ್ನು ಹೆಚ್ಚಿಸಲು ಮತ್ತು ಎಚ್ಡಿಆರ್ ವಿಷಯವನ್ನು ತರಲು ಸಹಾಯ ಮಾಡುತ್ತದೆ ಎಂದು ಕಂಪನಿ ತಿಳಿಸಿದೆ.

ಐಕ್ಯೂ 7 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಐಕ್ಯೂ 7 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಐಕ್ಯೂ 7 ಸ್ಮಾರ್ಟ್‌ಫೋನ್‌ ಆಕ್ಟ್ರಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ವರೆಗೆ ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದು ವರ್ಧಿತ ಬಹುಕಾರ್ಯಕ ಅನುಭವವನ್ನು ನೀಡಲು ROM ನ ಒಂದು ಭಾಗವನ್ನು RAM ಆಗಿ ಬಳಸುವುದಾಗಿ ಹೇಳಲಾಗಿದೆ.

ಐಕ್ಯೂ 7 ಸ್ಮಾರ್ಟ್‌ಫೋನ್‌ ಕ್ಯಾಮೆರಾ

ಐಕ್ಯೂ 7 ಸ್ಮಾರ್ಟ್‌ಫೋನ್‌ ಕ್ಯಾಮೆರಾ

ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು ಎಫ್ / 1.79 ಲೆನ್ಸ್ನೊಂದಿಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಎಫ್ / 2.2 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಕ್ಯೂ 7 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ಫ್ಲ್ಯಾಶ್‌ಚಾರ್ಜ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G VOLTE, ವೈ-ಫೈ, ಬ್ಲೂಟೂತ್ ವಿ 5.1 ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಕ್ಯಾಮೆರಾ

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಕ್ಯಾಮೆರಾ

ಐಕ್ಯೂ 7 ಲೆಜೆಂಡ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಬ್ಯಾಟರಿ

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಬ್ಯಾಟರಿ

ಐಕ್ಯೂ 7 ಲೆಜೆಂಡ್ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. 5G, 4G VOLTE, ವೈ-ಫೈ 6, ಬ್ಲೂಟೂತ್ ವಿ 5.2, GPS/A_GPS, NFC ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಐಕ್ಯೂ 7 ಸ್ಮಾರ್ಟ್‌ಫೋನ್‌ ಬೆಲೆ 8 GB RAM + 128GB ಶೇಖರಣಾ ರೂಪಾಂತರಕ್ಕೆ 31,990 ರೂ.ಬೆಲೆಯನ್ನು ಹೊಂದಿದೆ. ಇನ್ನು 8GB RAM + 256 GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯ ಬೆಲೆ 33,990 ರೂ ಮತ್ತು ಟಾಪ್-ಆಫ್-ಲೈನ್ 12GB RAM + 256GB ಶೇಖರಣಾ ಆಯ್ಕೆ 35,990 ರೂ. ಬೆಲೆ ಹೊಂದಿದೆ. ಇದು ಸ್ಟಾರ್ಮ್ ಬ್ಲ್ಯಾಕ್ ಮತ್ತು ಸಾಲಿಡ್ ಐಸ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.
ಐಕ್ಯೂ 7 ಲೆಜೆಂಡ್ 8GB RAM + 128GB ಶೇಖರಣಾ ರೂಪಾಂತರಕ್ಕೆ 39,990 ರೂ. ಹಾಗೂ 12GB RAM + 256GB ಶೇಖರಣಾ ಮಾದರಿಯ ಬೆಲೆ 43,990 ರೂ. ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಏಕ ಲೆಜೆಂಡರಿ ಬಣ್ಣ ಆಯ್ಕೆಯನ್ನು ಹೊಂದಿದೆ. ಇನ್ನು ಐಕ್ಯೂ 7 ಮತ್ತು ಐಕ್ಯೂ 7 ಲೆಜೆಂಡ್ ಎರಡೂ ಅಮೆಜಾನ್ ಮತ್ತು ಐಕ್ಯೂ.ಕಾಮ್ ಮೂಲಕ ಖರೀದಿಸಲು ಲಭ್ಯವಿರುತ್ತವೆ.ಇವುಗಳನ್ನು ಮೇ 1 ರಿಂದ ಫ್ರೀ ಬುಕ್ಕಿಂಗ್‌ ಮಾಡಬಹುದಾಗಿದೆ. ಇವುಗಳ ಮಾರಾಟ ದಿನಾಂಕದ ಬಗ್ಗೆ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ.

Best Mobiles in India

English summary
iQoo 7 price in India starts at Rs. 31,990, while iQoo 7 Legend carries a starting price of Rs. 39,990.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+