ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಐಕ್ಯೂ 7 ಸ್ಮಾರ್ಟ್‌ಫೋನ್ !
ಐಕ್ಯೂ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಐಕ್ಯೂ ಕಂಪೆನಿ ತನ್ನ ಹೊಸ ಐಕ್ಯೂ 7 ಸರಣಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್ ಇಂಡಿಯಾದಲ್ಲಿ ಈ ತಿಂಗಳ ಕೊನೆಯಲ್ಲಿ ದೇಶದಲ್ಲಿ ಬಿಡುಗಡೆಯಾಗಲಿದೆ.

ಹೌದು, ವಿವೋ-ಸಬ್ ಬ್ರಾಂಡ್ ಐಕ್ಯೂ ಸಂಸ್ಥೆ ತನ್ನ ಹೊಸ ಐಕ್ಯೂ 7 ಮತ್ತು ಐಕ್ಯೂ 7 ಲೆಜೆಂಡ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವುದನ್ನು ದೃಡಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಎರಡು ಆವೃತ್ತಿಗಳಲ್ಲಿ ಬರುತ್ತದೆ ಮತ್ತು ಮೂರು ಬಣ್ಣ ಆಯ್ಕೆಗಳೊಂದಿಗೆ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಐಕ್ಯೂ 7 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಅಲ್ಲದೆ ಇದು 91.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20: 9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಸಾಮರ್ಥ್ಯದವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯಿನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಐಕ್ಯೂ 7 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ವೋಲ್ಟಿಇ, ವೈ-ಫೈ 6, ಬ್ಲೂಟೂತ್ ವಿ 5.2, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
iQoo 7 ಸ್ಮಾರ್ಟ್‌ಫೋನ್ 8GB RAM + 128GB ಇಂಟರ್ ಸ್ಟೋರೇಜ್ ಯ್ಕೆಯ ಬೆಲೆ ಅಂದಾಜು 43,100ರೂ. ಮತ್ತು 12GB RAM + 256GB ಶೇಖರಣಾ ರೂಪಾಂತರಕ್ಕೆ ಅಂದಾಜು 47,600 ರೂ. ಬೆಲೆಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಬ್ಲ್ಯಾಕ್ ಮತ್ತು ಲ್ಯಾಟೆಂಟ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications




