iQoo 7 ಮತ್ತು iQoo 3 ಸ್ಮಾರ್ಟ್‌ಫೋನ್ ಭಿನ್ನತೆಗಳೆನು?..ಬೆಲೆ ಎಷ್ಟು?
ವಿವೋದ ಸಬ್‌ಬ್ರ್ಯಾಂಡ್ iQoo ಸಂಸ್ಥೆಯು ಈಗಾಗಲೇ ಭಿನ್ನ ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅದರ ಬೆನ್ನಲ್ಲೇ ಈಗ ವಿವೋ iQoo 7 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದ್ದು, ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಸಂಸ್ಥೆಯ ಈ ಹಿಂದಿನ iQoo 3 ಫೋನ್ ಮಾಡೆಲ್‌ನಂತೆಯೇ ಕಂಡು ಬಂದರೂ ಹಲವು ಭಿನ್ನತೆಗಳನ್ನು ಈ ಫೋನ್ ಹೊಂದಿದೆ.

ಹೌದು, iQoo-ಐಕ್ಯೂ ಸಂಸ್ಥೆಯು ಹೊಸದಾಗಿ ವಿವೋ iQoo 7 ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ iQoo 3 ಗಿಂತ ಭಿನ್ನ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಅನ್ನು ಪಡೆದಿದ್ದು, iQoo 3 ಸ್ನ್ಯಾಪ್‌ಡ್ರಾಗನ್ 865 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಪ್ರೊಸೆಸರನಂತೆ ಈ ಎರಡು ಫೋನ್‌ಗಳ ಕ್ಯಾಮೆರಾ, ಬ್ಯಾಟರಿ ಫೀಚರ್ಸ್‌ಗಳಲ್ಲಿಯೂ ಭಿನ್ನತೆಗಳು ಇವೆ. ಹಾಗಾದರೇ iQoo 7 ಮತ್ತು iQoo 3 ಫೋನ್‌ಗಳ ಭಿನ್ನತೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ಮತ್ತು ರಚನೆ ಹೇಗಿದೆ
ವಿವೋ iQoo 7 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.62 ಇಂಚಿನ ಪೂರ್ಣ ಹೆಚ್‌ಡಿ AMOLED ಡಿಸ್‌ಪ್ಲೇಯನ್ನು ಪಡೆದಿದೆ. ಅದೇ ರೀತಿ iQoo 3 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.4 ಇಂಚಿನ ಪೂರ್ಣ ಹೆಚ್‌ಡಿ AMOLED ಡಿಸ್‌ಪ್ಲೇಯನ್ನು ಪಡೆದಿದೆ. ಡಿಸ್‌ಪ್ಲೇಯು 1200 nits ಬ್ರೈಟ್ನೆಸ್ ಸಾಮರ್ಥ್ಯದಲ್ಲಿದ್ದು, HDR10+ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯವೇನು
ವಿವೋ iQoo 7 ಸ್ಮಾರ್ಟ್‌ಫೋನ್ 5G ಬೆಂಬಲಿತ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ iQoo UI ಹಾಗೂ ಇತ್ತೀಚಿನ ಆಂಡ್ರಾಯ್ಡ್ ಓಎಸ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು iQoo 3 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 ಪ್ರೊಸೆಸರ್ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ iQoo UI ಹಾಗೂ ಆಂಡ್ರಾಯ್ಡ್ 10 ಓಎಸ್ ಸಾಮರ್ಥ್ಯವನ್ನು ಒಳಗೊಂಡಿದೆ. ಎರಡು ಫೋನ್‌ಗಳು 8GB RAM + 128GB ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಯಲ್ಲಿವೆ.
ಸ್ಪೆಷಲ್ ಕ್ಯಾಮೆರಾ
ವಿವೋ iQoo 7 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ iQoo 3 ಸ್ಮಾರ್ಟ್‌ಫೋನ್ ನಾಲ್ಕು ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಹಾಗೆಯೇ ಎರಡರಲ್ಲಿಯೂ ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ.

ಬ್ಯಾಟರಿ ಲೈಫ್
ವಿವೋ iQoo 7 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಇದರೊಂದಿಗೆ 120W ಸಾಮರ್ಥ್ಯ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್‌ಲಾಕ್ ಸೌಲಭ್ಯ, ಕಾರ್ಬನ್ ಫೈಬರ್ VC ಲಿಕ್ವಡ್ ಕೂಲಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ವೈಫೈ, ಬ್ಲೂಟೂತ್, ಜಿಪಿಎಸ್ ಸೌಲಭ್ಯಗಳನ್ನು ಪಡೆದಿದೆ.
ಬೆಲೆ?
ವಿವೋ iQoo 7 ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್‌ನ ಬೆಲೆಯು ಚೀನಾದಲ್ಲಿ CNY 3,798 (ಭಾರತದಲ್ಲಿ ಅಂದಾಜು 43,100ರೂ ಎನ್ನಲಾಗಿದೆ). ಹಾಗೆಯೇ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆಯು CNY 4,198 (ಭಾರತದಲ್ಲಿ ಅಂದಾಜು 47,600ರೂ. ಆಗಿರಲಿದೆ).


Click it and Unblock the Notifications








