ಐಕ್ಯೂ 7 ಸ್ಮಾರ್ಟ್‌ಫೋನ್‌ ಬಿಡುಗಡೆ!..120W ವೇಗದ ಚಾರ್ಜಿಂಗ್‌ ವಿಶೇಷತೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಐಕ್ಯೂ ಕಂಪೆನಿ ತನ್ನ ಹೊಸ ಐಕ್ಯೂ 7 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 888 SoC ನಿಂದ ಚಾಲಿತ ಸ್ಮಾರ್ಟ್‌ಫೋನ್‌ ಆಗಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 120Hz ಡಿಸ್‌ಪ್ಲೇ, ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಸಹ ಒಳಗೊಂಡಿದೆ. ಇನ್ನು ಐಕ್ಯೂ 7 ಮೂರು ವಿಭಿನ್ನ ಫಿನಿಶ್‌ಗಳಲ್ಲಿ ಬರುತ್ತದೆ, ಒಂದು ಬಿಎಂಡಬ್ಲ್ಯು ಎಂ ಮೋಟಾರ್ಸ್ಪೋರ್ಟ್‌ನ ಸಹಭಾಗಿತ್ವದಲ್ಲಿ ವಿನ್ಯಾಸಗೊಳಿಸಲಾಗಿದೆ. ವಿಶೇಷ ಆವೃತ್ತಿಯ ಮಾದರಿಯು ಹಿಂಭಾಗದಲ್ಲಿ ಮೂರು ಬಣ್ಣದ ಪಟ್ಟೆಗಳನ್ನು ಹೊಂದಿರುತ್ತದೆ.

 ಐಕ್ಯೂ 7 ಸ್ಮಾರ್ಟ್‌ಫೋನ್

ಹೌದು, ಐಕ್ಯೂ ಸಂಸ್ಥೆ ತನ್ನ ಹೊಸ ಐಕ್ಯೂ 7 ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು 6.62 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿದ್ದು, 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌, ಲಾಟೆಂಟ್‌ ಬ್ಲೂ ಮತ್ತು ಲೆಜೆಂಡರಿ ಎಡಿಷನ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ಜನವರಿ 15ರಿಂದ ಮಾರಾಟವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ಐಕ್ಯೂ 7 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 91.4 ಶೇಕಡಾ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ OriginOS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 8GB RAM+128GB ಹಾಗೂ 12GB RAM+ 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೆರಿಯೆಂಟ್‌ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಇಮೇಜ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಕ್ಯೂ 7 ಸ್ಮಾರ್ಟ್‌ಫೋನ್‌ 2,000mAh ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಎರಡು ಬ್ಯಾಟರಿಗಳು ಸೇರಿ ಒಟ್ಟು 4,000mAh ಸಾಮರ್ಥ್ಯವನ್ನು ನೀಡುತ್ತವೆ. ಸಿಂಗಲ್‌ ಚಾರ್ಜ್‌ನಲ್ಲಿ 15.6 ಗಂಟೆಗಳ 4G ಟಾಕ್‌ಟೈಮ್‌ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G Volte, ವೈ-ಫೈ 6, ಬ್ಲೂಟೂತ್ V5.2, NFC ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಕ್ಯೂ 7 ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ಸಂರಚನೆಗಾಗಿ ಐಕ್ಯೂ 7 ಬೆಲೆಯನ್ನು CNY 3,798 (ಸುಮಾರು ರೂ. 43,100) ನಿಗದಿಪಡಿಸಲಾಗಿದೆ. ಆದರೆ 12GB RAM+ 256GB ಶೇಖರಣಾ ರೂಪಾಂತರವು CNY 4,198 (ಸುಮಾರು 47,600 ರೂ.) ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌‌ ಕಪ್ಪು, ಸುಪ್ತ ನೀಲಿ ಮತ್ತು ಲೆಜೆಂಡರಿ ಎಡಿಷನ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇದು ಜನವರಿ 15 ರಿಂದ ಚೀನಾದಲ್ಲಿ ಮಾರಾಟವಾಗಲಿದೆ. ಆದಾಗ್ಯೂ, ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
iQoo 7 With Snapdragon 888 SoC Launched: Price.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X