ಐಕ್ಯೂ 9 ಮತ್ತು ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಐಕ್ಯೂ ಕಂಪೆನಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಐಕ್ಯೂ ಕಂಪೆನಿ ಹೊಸ ಐಕ್ಯೂ 9 ಮತ್ತು ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಈ ಎರಡೂ ಹೊಸ ಸ್ಮಾರ್ಟ್‌ಫೋನ್‌ಗಳು ಇತ್ತೀಚೆಗೆ ಘೋಷಿಸಲಾದ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿವೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ ಎನ್ನಲಾಗಿದೆ.

ಐಕ್ಯೂ

ಹೌದು, ಐಕ್ಯೂ ಕಂಪೆನಿ ಹೊಸ ಐಕ್ಯೂ 9 ಮತ್ತು ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದರಲ್ಲಿ ಐಕ್ಯೂ 9 ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ+ ಸ್ಯಾಮ್‌ಸಂಗ್‌ E5 OLED ಡಿಸ್‌ಪ್ಲೇ ಹೊಂದಿದೆ. ಆದರೆ ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ 6.78-ಇಂಚಿನ ಕ್ವಾಡ್‌ ಹೆಚ್‌ಡಿ + E5 OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಹೊಂದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ 9 ಸ್ಮಾರ್ಟ್‌ಫೋನ್‌

ಐಕ್ಯೂ 9 ಸ್ಮಾರ್ಟ್‌ಫೋನ್‌

ಐಕ್ಯೂ 9 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರವನ್ನು ಹೊಂದಿದ್ದು, ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.ಜೊತೆಗೆ ಈ ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ 3,200x1,440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78-ಇಂಚಿನ ಕ್ವಾಡ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 360Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಐಕ್ಯೂ 9ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಕ್ಯೂ 9 ಸ್ಮಾರ್ಟ್‌ಫೋನ್‌ 8GB + 256GB ಸ್ಟೋರೇಜ್ ಮಾದರಿಗೆ RMB 3,999 (ಅಂದಾಜು 47,000ರೂ) ಬೆಲೆ ಹೊಂದಿದೆ. ಇದಲ್ಲದೆ 12GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ RMB 4,399 (ಅಂದಾಜು 51,600ರೂ) ಮತ್ತು 12GB + 512GB ಸ್ಟೋರೇಜ್ ಕಾನ್ಫಿಗರೇಶನ್ ಬೆಲೆ RMB 4,799 (ಅಂದಾಜು 56,240ರೂ) ಬೆಲೆ ಹೊಂದಿದೆ.
ಇನ್ನು ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಬೇಸ್‌ ಮಾಡೆಲ್‌ 8GB + 256GB ಸ್ಟೋರೇಜ್ ಆಯ್ಕೆಗೆ RMB 4,999 (ಅಂದಾಜು 58,600ರೂ) ಗೆ ನಿಗದಿಪಡಿಸಲಾಗಿದೆ.

Best Mobiles in India

English summary
iQoo 9 is equipped with a flat 6.78-inch full-HD+ Samsung E5 OLED display, while iQoo 9 Pro sports a curved 6.78-inch Quad-HD+ E5 OLED display.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X