Home
ಸುದ್ದಿಜಾಲ

ಭಾರತದಲ್ಲಿ ಐಕ್ಯೂ 9 ಸರಣಿ ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಐಕ್ಯೂ ಕಂಪೆನಿ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಐಕ್ಯೂ 9 ಸರಣಿಯನ್ನು ಪರಿಚಯಿಸಿದೆ. ಈ ಸರಣಿಯಲ್ಲಿ ಐಕ್ಯೂ 9 ಪ್ರೊ, ಐಕ್ಯೂ 9 ಮತ್ತು ಐಕ್ಯೂ 9 SE ಸ್ಮಾರ್ಟ್‌ಫೋನ್‌ಗಳು ಸೇರಿವೆ. ಇದರಲ್ಲಿ ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ ಪ್ರೀಮಿಯಂ ಮಾದರಿಯಾಗಿದ್ದು, ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ.

ಐಕ್ಯೂ 9 ಸರಣಿ

ಹೌದು, ಐಕ್ಯೂ ಕಂಪೆನಿ ಭಾರತದಲ್ಲಿ ತನ್ನ ಹೊಸ ಐಕ್ಯೂ 9 ಸರಣಿಯನ್ನು ಲಾಂಚ್‌ ಮಾಡಿದೆ. ಈ ಸರಣಿಯಲ್ಲಿ ಐಕ್ಯೂ 9 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888+ ಪ್ರೊಸೆಸರ್‌ ಹೊಂದಿದೆ. ಆದರೆ ಐಕ್ಯೂ 9 SE ಸ್ಮಾರ್ಟ್‌ಫೋನ್‌ ಕ್ಲಾಲ್ಕಾಮ್‌ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಪಡೆದುಕೊಂಡಿದೆ. ಇನ್ನು ಈ ಸರಣಿಯ ಸ್ಮಾರ್ಟ್‌ಫೋನ್‌ಗಳು 120Hz ರಿಫ್ರೆಶ್‌ ರೇಟ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿವೆ. ಜೊತೆಗೆ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದಿವೆ. ಇನ್ನುಳಿದಂತೆ ಐಕ್ಯೂ 9 ಸರಣಿಯ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ 9 ಪ್ರೊ

ಐಕ್ಯೂ 9 ಪ್ರೊ

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ 2K E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 3D ಕರ್ವ್ಡ್ ಪ್ರೊಟೆಕ್ಷನ್‌ ಅನ್ನು ಹೊಂದಿದ್ದು, ಕಡಿಮೆ-ತಾಪಮಾನದ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) 2.0 ತಂತ್ರಜ್ಞಾನವನ್ನು ಆಧರಿಸಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಸಕ್ರಿಯಗೊಳಿಸುತ್ತದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಫನ್‌ಟೌಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL GN5 ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ 'ಗಿಂಬಾಲ್' ತಂತ್ರಜ್ಞಾನವನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಫೋನ್‌ 4,700mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಫ್ಲ್ಯಾಶ್‌ಚಾರ್ಜ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಈ ಫೋನ್ 3D ಅಲ್ಟ್ರಾಸಾನಿಕ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಸಹ ಒಳಗೊಂಡಿದೆ.

ಐಕ್ಯೂ 9 ಸ್ಮಾರ್ಟ್‌ಫೋನ್‌

ಐಕ್ಯೂ 9 ಸ್ಮಾರ್ಟ್‌ಫೋನ್‌

ಐಕ್ಯೂ 9 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ HD+ 10 ಬಿಟ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಫನ್‌ಟೌಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 'ಗಿಂಬಾಲ್' ಟೆಕ್ನಾಲಜಿಯೊಂದಿಗೆ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾಋ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,350mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಐಕ್ಯೂ 9 SE ಸ್ಮಾರ್ಟ್‌ಫೋನ್‌

ಐಕ್ಯೂ 9 SE ಸ್ಮಾರ್ಟ್‌ಫೋನ್‌

ಐಕ್ಯೂ 9 SE ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಅನ್ನು ಹೊಂದಿದೆ. ಇದು ಕೂಡ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸುಸಜ್ಜಿತ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 66W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB RAM + 256GB ಇಂಟರ್‌ ಸ್ಟೋರೇಜ್ ರೂಪಾಂತರದ ಆಯ್ಕೆಗೆ 64,990ರೂ.ಬೆಲೆ ಹೊಂದಿದೆ. ಇನ್ನು ಈ ಫೋನ್ 12GB + 256GB ಮಾದರಿಯ ಆಯ್ಕೆಗೆ 69,990ರೂ.ಬೆಲೆಯನ್ನು ಹೊಂದಿದೆ. ಇದು ಡಾರ್ಕ್ ಕ್ರೂಸ್ ಮತ್ತು ಲೆಜೆಂಡ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.
ಇನ್ನು ಐಕ್ಯೂ 9 ಸ್ಮಾರ್ಟ್‌ಫೋನ್‌ 8GB + 128GB ಆಯ್ಕೆಗೆ 42,990ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 12GB + 256GB ಮಾದರಿಗೆ 46,990ರೂ.ಬೆಲೆ ಪಡೆದುಕೊಂಡಿದೆ. ಈ ಫೋನ್‌ ಆಲ್ಫಾ ಮತ್ತು ಲೆಜೆಂಡ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.
ಐಕ್ಯೂ 9 SE ಸ್ಮಾರ್ಟ್‌ಫೋನ್‌ 8GB + 128GB ರೂಪಾಂತರದ ಬೆಲೆ 33,990ರೂ.ಆಗಿದೆ. ಇನ್ನು 12GB + 256GB ಆಯ್ಕೆಗೆ 37,990ರೂ.ಬೆಲೆ ಹೊಂದಿದೆ. ಈ ಫೋನ್‌ ಸ್ಪೇಸ್ ಫ್ಯೂಷನ್ ಮತ್ತು ಸನ್ಸೆಟ್ ಸಿಯೆರಾ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ.
ಇದರಲ್ಲಿ ಐಕ್ಯೂ 9 ಪ್ರೊ ಮತ್ತು ಐಕ್ಯೂ 9 ಸ್ಮಾರ್ಟ್‌ಫೋನ್‌ಗಳು ಫೆಬ್ರವರಿ 23ರಿಂದ ಫ್ರೀ-ಆರ್ಡರ್‌ಗಳಿಗೆ ಲಭ್ಯವಾಗಲಿದೆ. ಆದರೆ ಐಕ್ಯೂ 9 SE ಮಾರ್ಚ್ 2 ರಿಂದ ಪ್ರೀ-ಆರ್ಡರ್‌ಗಳಿಗೆ ಲಭ್ಯವಿರುತ್ತದೆ. ಈ ಎಲ್ಲಾ ಮೂರು ಫೋನ್‌ಗಳು ಅಮೆಜಾನ್ ಮೂಲಕ ಲಭ್ಯವಾಗಲಿವೆ.

ಆಫರ್‌

ಆಫರ್‌

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ಗಳು ಲಾಂಚ್‌ ಆಫರ್‌ನಲ್ಲಿ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಮುಂಗಡವಾಗಿ ಆರ್ಡರ್ ಮಾಡಿದರೆ 6,000ರೂ. ರಿಯಾಯಿತಿ ಪಡೆಯಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಎಕ್ಸ್‌ಚೇಂಜ್‌ ಆಫರ್‌ನಲ್ಲಿ 5,000ರೂ.ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇನ್ನು ಐಕ್ಯೂ 9 ಫೋನ್‌ ಅನ್ನು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಮೂಲಕ ಮುಂಗಡವಾಗಿ ಆರ್ಡರ್ ಮಾಡುವ ಗ್ರಾಹಕರು 4,000 ರಿಯಾಯಿತಿ ಮತ್ತು 3,000ರೂ. ಎಕ್ಸ್‌ಚೇಂಜ್‌ ಆಫರ್‌ ಪಡೆಯಬಹುದು. ಹಾಗೆಯೇ ಐಕ್ಯೂ 9 SE ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ 3,000ರೂ.ಗಳ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಹೆಚ್ಚುವರಿಯಾಗಿ 3,000ರೂ.ಎಕ್ಸ್‌ಚೇಂಜ್‌ ಆಫರ್‌ ಪಡೆದುಕೊಳ್ಳಬಹುದಾಗಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು 12 ತಿಂಗಳವರೆಗೆ ನೋ ಕಾಸ್ಟ್‌ EMI ಆಯ್ಕೆಗಳನ್ನು ಸಹ ಪಡೆದುಕೊಂಡಿವೆ.

Best Mobiles in India

English summary
iQoo 9 Pro, iQoo 9, iQoo 9 SE With 120Hz Displays Launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+