ದೈತ್ಯ ಫೀಚರ್ಸ್ ಇರುವ ಈ ಫೋನಿಗೆ ಈಗ ಬಿಗ್ ಡಿಸ್ಕೌಂಟ್!
ಐಕ್ಯೂ (iQOO) ಸಂಸ್ಥೆಯ ಮೊಬೈಲ್ ಫೋನ್‌ಗಳು ದೇಶಿಯ ಮಾರುಕಟ್ಟೆಯಲ್ಲಿ ಗಮನ ಸೆಳೆದಿವೆ. ಅವುಗಳಲ್ಲಿ ಐಕ್ಯೂ 9 SE 5G ಫೋನ್ ಸಹ ಆಕರ್ಷಕ ಎನಿಸಿದ್ದು, ಗ್ರಾಹಕರನ್ನು ಸೆಳೆದಿದೆ. ಆದ್ರೆ, ಈ ಫೋನ್ ಇದೀಗ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ಗಮನ ಸೆಳೆದಿದೆ.
ಹೌದು, ಐಕ್ಯೂ ಸಂಸ್ಥೆಯ ಐಕ್ಯೂ 9 SE 5G ಫೋನ್ ಅಮೆಜಾನ್ ಆನ್‌ಲೈನ್ ತಾಣದಲ್ಲಿ ಈಗ 23% ನಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 39,990ರೂ. ಪ್ರೈಸ್ ಟ್ಯಾಗ್ ಹೊಂದಿದ್ದು, ಆದರೆ ಈಗ ಗ್ರಾಹಕರು 30,990ರೂ. ಗಳ ಡಿಸ್ಕೌಂಟ್ ದರದಲ್ಲಿ ಖರೀದಿ ಮಾಡಬಹುದಾಗಿದೆ. ಜೊತೆಗೆ ಬ್ಯಾಂಕ್ ರಿಯಾಯಿತಿ ಸಹ ಲಭ್ಯವಾಗಲಿವೆ.

ಈ ಫೋನ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಹೊಂದಿದ್ದು, 8 GB + 128 GB ಮತ್ತು 12 GB + 256 GB ಸ್ಟೋರೇಜ್ ಆಯ್ಕೆ ಪಡೆದಿದೆ. ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಸಹ ಪಡೆದಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.
ಐಕ್ಯೂ 9 SE ಡಿಸ್‌ಪ್ಲೇ ಮತ್ತು ಪ್ರೊಸೆಸರ್ : ಐಕ್ಯೂ 9 SE ಸ್ಮಾರ್ಟ್‌ಫೋನ್ 6.62 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇನ್ನು ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಹೊಂದಿದೆ. ಹಾಗೆಯೇ 8 GB + 128 GB ಮತ್ತು 12 GB + 256 GB ಇಂಟರ್ ಸ್ಟೋರೇಜ್ ಹೊಂದಿದೆ.

ಐಕ್ಯೂ 9 SE ಕ್ಯಾಮೆರಾ ರಚನೆ : ಈ ಸ್ಮಾರ್ಟ್‌ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX598 ಸೆನ್ಸಾರ್ ಅನ್ನು ಹೊಂದಿದೆ. ಇದು ಕೂಡ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸುಸಜ್ಜಿತ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ವೈಡ್ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಐಕ್ಯೂ 9 SE ಬ್ಯಾಟರಿ ಬಲ ಮತ್ತು ಇತರೆ ಸೌಲಭ್ಯಗಳು : ಐಕ್ಯೂ 9 SE ಸ್ಮಾರ್ಟ್‌ಫೋನ್ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 66 W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆ ಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್ C ಪೋರ್ಟ್ ಸೇರಿವೆ.
ಐಕ್ಯೂ 9 SE ಮೆಮೊರಿ ಹಾಗೂ ಕಲರ್ ಆಯ್ಕೆ : ಐಕ್ಯೂ 9 SE ಸ್ಮಾರ್ಟ್‌ಫೋನ್ 8 GB + 128 GB ಮತ್ತು 12 GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಸ್ಪೆಸ್ ಫ್ಯೂಜನ್ ಕಲರ್ ಆಯ್ಕೆಗಳನ್ನು ಪಡೆದಿದೆ.


Click it and Unblock the Notifications








