Home
ಸುದ್ದಿಜಾಲ

ವೇಗದ ಪ್ರೊಸೆಸರ್‌ ಸೌಲಭ್ಯದ ಈ ಮೊಬೈಲ್‌ ಬೆಲೆಯಲ್ಲಿ ಭಾರೀ ಕಡಿತ!

ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್ ನಲ್ಲಿ ಮೊಬೈಲ್‌ ಫೋನ್‌ಗಳಿಗೆ ಏನಾದರೊಂದು ವಿಶೇಷ ರಿಯಾಯಿತಿ ಇದ್ದೆ ಇರುತ್ತದೆ. ಫ್ಲಿಪ್‌ಕಾರ್ಟ್ ತಾಣದಲ್ಲಿ ಎಲ್ಲ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೂ ಕೂಡಾ ಸಖತ್ ಡಿಸ್ಕೌಂಟ್‌ ಲಭ್ಯ ಇರುತ್ತದೆ. ಸದ್ಯ ಐಕ್ಯೂ 9 SE 5G ಮೊಬೈಲ್‌ ಆಕರ್ಷಕ ರಿಯಾಯಿತಿ ಪಡೆದಿದ್ದು, ಗ್ರಾಹಕರಿಗೆ ವಾವ್‌ ಎನಿಸುವಂತೆ ಮಾಡಿದೆ.

ಹೌದು, ಫ್ಲಿಪ್‌ಕಾರ್ಟ್ ಆನ್‌ಲೈನ್‌ ತಾಣದಲ್ಲಿ ಐಕ್ಯೂ 9 SE 5G ಫೋನ್‌ ಈಗ ಶೇ. 22% ನಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. 12 GB RAM + 256 GB ವೇರಿಯಂಟ್‌ನ ಈ ಮೊಬೈಲ್‌ 34,949ರೂ. ಆಫರ್‌ ಪ್ರೈಸ್‌ ಟ್ಯಾಗ್‌ ನಲ್ಲಿ ಖರೀದಿ ಮಾಡಬಹುದಾಗಿದೆ. ಇದರ ಜೊತೆಗೆ ಬ್ಯಾಂಕ್ ರಿಯಾಯಿತಿ ಸಹ ಲಭ್ಯವಾಗಲಿವೆ. ಆದರೆ ಸದ್ಯ ಫೋನ್‌ ಅಲಭ್ಯತೆ ಎನ್ನಲಾಗಿದೆ.

ವೇಗದ ಪ್ರೊಸೆಸರ್‌ ಸೌಲಭ್ಯದ ಈ ಮೊಬೈಲ್‌ ಬೆಲೆಯಲ್ಲಿ ಭಾರೀ ಕಡಿತ!

ಅಂದಹಾಗೆ ಇದು ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಪವರ್ ಹೊಂದಿದ್ದು, 8 GB + 128 GB ಮತ್ತು 12 GB + 256 GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಸಹ ಪಡೆದಿದೆ. ಇನ್ನುಳಿದಂತೆ ಐಕ್ಯೂ 9 SE 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಮತ್ತು ಪ್ರೊಸೆಸರ್‌ ವೇಗ
ಐಕ್ಯೂ 9 SE ಮೊಬೈಲ್‌ 6.62 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಹಾಗೆಯೇ 8 GB + 128 GB ಮತ್ತು 12 GB + 256 GB ಆಂತರೀಕ ಸ್ಟೋರೇಜ್‌ ಸೌಲಭ್ಯ ಪಡೆದಿದೆ.

ಕ್ಯಾಮೆರಾ ಸೆನ್ಸಾರ್ ಮಾಹಿತಿ
ಐಕ್ಯೂ ಸಂಸ್ಥೆಯ ಈ ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮೊದಲ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಲೆನ್ಸ್ ಪಡೆದಿದೆ. ದ್ವಿತೀಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ವೈಡ್ಆಂಗಲ್ ಲೆನ್ಸ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಹಾಗೆಯೇ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ ಆಯ್ಕೆಗಳು
ಐಕ್ಯೂ 9 SE ಮೊಬೈಲ್‌ ಫೋನ್‌ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 66 W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್ C ಪೋರ್ಟ್ ಆಯ್ಕೆಗಳು ಸೇರಿವೆ.

ಮೆಮೊರಿ ಆಯ್ಕೆ ಹಾಗೂ ಕಲರ್ ಮಾಹಿತಿ
ಐಕ್ಯೂ 9 SE ಸ್ಮಾರ್ಟ್‌ಫೋನ್‌ 8 GB + 128 GB ಮತ್ತು 12 GB + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್‌ ಸ್ಪೆಸ್‌ ಫ್ಯೂಜನ್ ಕಲರ್‌ ಆಯ್ಕೆಗಳನ್ನು ಪಡೆದಿದೆ.

Best Mobiles in India

English summary
IQOO 9 SE 5G price cut on flipkart. check offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+