ಐಕ್ಯೂ 9 SE ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆ!..ಆಫರ್ ಬೆಲೆ ಎಷ್ಟು?
ಐಕ್ಯೂ ಮೊಬೈಲ್ ಸಂಸ್ಥೆಯು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ಐಕ್ಯೂ 9 SE ಸ್ಮಾರ್ಟ್‌ಫೋನ್ ಈಗಾಗಲೇ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಭರ್ಜರಿ ಇಳಿಕೆ ಆಗಿದ್ದು, ಮತ್ತೊಮ್ಮೆ ಗ್ರಾಹಕರನ್ನು ತನ್ನತ್ತ ಸೆಳೆದಿದೆ.
ಹೌದು, ಐಕ್ಯೂ 9 SE ಸ್ಮಾರ್ಟ್‌ಫೋನ್ ಬೆಲೆಯಲ್ಲಿ 3,000ರೂ. ಇಳಿಕೆ ಆಗಿದೆ. ಅಂದಹಾಗೆಯೇ ಈ ಫೋನ್ 8 GB + 128 GB ಮತ್ತು 12 GB+ 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಆದರೆ 8 GB + 128 GB ವೇರಿಯಂಟ್ ಬೆಲೆಯಲ್ಲಿ ಮಾತ್ರ ದರ ಕಡಿತ ಆಗಿದೆ. ಇನ್ನು ಈ ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಆಗಿದ್ದು, 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬೆಲೆ ಇಳಿಕೆ ಬಳಿಕ 8 GB + 128 GB ವೇರಿಯಂಟ್ ಬೆಲೆ 30,990 ರೂ. ಆಗಿದೆ. ಇನ್ನು ಈ ಫೋನ್ ಕ್ವಾಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೂ ಸ್ಪೇಸ್ ಫ್ಯೂಸನ್ ಹಾಗೂ ಸನ್‌ಸೆಟ್ ಸಿರಿಯಾ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಅಂದಹಾಗೆ ಈ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ದೊರೆಯುತ್ತದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ 9 SE ಡಿಸ್‌ಪ್ಲೇ ಮತ್ತು ಪ್ರೊಸೆಸರ್ : ಐಕ್ಯೂ 9 SE ಸ್ಮಾರ್ಟ್‌ಫೋನ್ 6.62 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ.
ಇನ್ನು ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಹೊಂದಿದೆ. ಹಾಗೆಯೇ 8GB + 128 GB ಮತ್ತು 12 GB + 256 GB ಇಂಟರ್ ಸ್ಟೋರೇಜ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ಐಕ್ಯೂ 9 SE ಕ್ಯಾಮೆರಾ : ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX598 ಸೆನ್ಸಾರ್ ಅನ್ನು ಹೊಂದಿದೆ. ಇದು ಕೂಡ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸುಸಜ್ಜಿತ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಐಕ್ಯೂ 9 SE ಸ್ಮಾರ್ಟ್‌ಫೋನ್ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 66W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.
ಐಕ್ಯೂ 9 SE ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 8 GB + 128 GB ಮತ್ತು 12GB + 256GB ಆಗಿವೆ. ಹಾಗೆಯೇ ಈ ಫೋನ್ ಸ್ಪೇಸ್ ಫ್ಯೂಷನ್ ಮತ್ತು ಸನ್ಸೆಟ್ ಸಿಯೆರಾ ಬಣ್ಣಗಳ ಆಯ್ಕೆಯಲ್ಲಿ ಲಭ್ಯ.


Click it and Unblock the Notifications








