ಇಂದು ಲಗ್ಗೆ ಇಡಲಿದೆ iQOO 9T 5G ಫೋನ್‌; ಬೆಲೆ ಎಷ್ಟು?..ನಿರೀಕ್ಷಿತ ಫೀಚರ್ಸ್ ಏನು?

|

ಐಕ್ಯೂ (iQOO) ಮೊಬೈಲ್‌ ಸಂಸ್ಥೆಯು ಈಗಾಗಲೇ ಹಲವು ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಆಕರ್ಷಿಸಿದೆ. ಇದೀಗ ಕಂಪನಿಯ ಬಹುನಿರೀಕ್ಷಿತ ಐಕ್ಯೂ 9T 5G ಸ್ಮಾರ್ಟ್‌ಫೋನ್ ಅಧಿಕೃತವಾಗಿ ಬಿಡುಗಡೆ ಮಾಡಲು ಸಕಲ ಸಜ್ಜು ಮಾಡಲಾಗಿದೆ. ಈ ಫೋನ್‌ ಭಾರತದಲ್ಲಿ ಇಂದು (2 ಆಗಸ್ಟ್ 2022) ಭಾರತೀಯ ಕಾಲಮಾನ ಮಧ್ಯಾಹ್ನ 12:30 ಕ್ಕೆ ಅಧಿಕೃತವಾಗಿ ಲಾಂಚ್ ಆಗಲಿದೆ.

ಐಕ್ಯೂ

ಹೌದು, ಐಕ್ಯೂ ತನ್ನ ನೂತನ ಐಕ್ಯೂ 9T 5G (iQOO 9T 5G) ಸ್ಮಾರ್ಟ್‌ಫೋನ್‌ ಅನ್ನು ಇಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಇನ್ನು ಕೆಲವು ಮಾಹಿತಿಗಳ ಪ್ರಕಾರ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಹಾಗೆಯೇ ಡಿಸ್‌ಪ್ಲೇಯು 120Hz ರಿಫ್ರೇಶ್ ರೇಟ್ ಅನ್ನು ಒಳಗೊಂಡಿರಲಿದೆ.

ಇಡಲಿದೆಯಾ

ಈ ಫೋನ್‌ ಫ್ಲ್ಯಾಗ್‌ಶಿಪ್‌ ಮಾದರಿಯಲ್ಲಿ ಅನಾವರಣ ಆಗಲಿದೆಯಾ ಅಥವಾ ಪ್ರೀಮಿಯಂ ಮಾದರಿಯಲ್ಲಿ ಲಗ್ಗೆ ಇಡಲಿದೆಯಾ ಎನ್ನುವುದು ಸ್ಪಷ್ಟ ಮಾಹಿತಿ ಇಲ್ಲ. ಆದರೆ ಕೆಲವು ಲೀಕ್ ಮಾಹಿತಿಗಳ ಪ್ರಕಾರ ಈ ಸ್ಮಾರ್ಟ್‌ಫೋನ್ ಸುಮಾರು 54,999 ರೂ. ಗಳ ಆಸುಪಾಸಿನಲ್ಲಿ ಬಿಡುಗಡೆ ಆಗಲಿದೆ ಎಂದು ತಿಳಿದುಬಂದಿದೆ. ಇ ಕಾಮರ್ಸ್‌ ತಾಣ ಅಮೆಜಾನ್‌ ಮೂಲಕ ಮಾರಾಟ ಪ್ರಾರಂಭಿಸಲಿದೆ ಎಂದು ತಿಳಿದುಬಂದಿದೆ. ಹಾಗಾದರೇ ಲೀಕ್ ಮಾಹಿತಿಯಂತೆ ಐಕ್ಯೂ 9T 5G ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ 9T 5G ಫೀಚರ್ಸ್‌

ಐಕ್ಯೂ 9T 5G ಫೀಚರ್ಸ್‌

ಐಕ್ಯೂ 9T 5G ಸ್ಮಾರ್ಟ್‌ಫೋನ್ 6.78 ಇಂಚಿನ AMOLED ಡಿಸ್‌ಪ್ಲೇಯೊಂದಿಗೆ ಬರಬಹುದು. ಇನ್ನು ಈ ಡಿಸ್‌ಪ್ಲೇಯು 120Hz ರಿಫ್ರೆಶ್ ದರ ಒಳಗೊಂಡಿರಲಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಎರಡು ವೇರಿಯಂಟ್‌ ಆಯ್ಕೆಗಳಲ್ಲಿ ಲಾಂಚ್‌ ಆಗುವ ಸಾಧ್ಯತೆಗಳಿದ್ದು, ಅವುಗಳು ಕ್ರಮಾವಗಿ 8GB RAM + 128GB ಮತ್ತು 12GB RAM + 256GB ಸ್ಟೋರೇಜ್‌ ಆಯ್ಕೆಗಳಾಗಿರಲಿವೆ.

ಸೆನ್ಸಾರ್‌

ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿರಲಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿರಲಿದೆ. ಸೆಕೆಂಡರಿ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿರಲಿದ್ದು, ತೃತೀಯ ಕ್ಯಾಮೆರಾವು 12 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ನೊಂದಿಗೆ ಒಳಗೊಂಡಿರಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿರಲಿದೆ.

ಆಸುಪಾಸಿನಲ್ಲಿ

ಹಾಗೆಯೇ ಐಕ್ಯೂ 9T 5G ಫೋನ್ 4,700mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರಲಿದೆ ಎನ್ನಲಾಗಿದ್ದು, ಜೊತೆಗೆ 120W ವೇಗದ ಚಾರ್ಜಿಂಗ್‌ಗೆ ಸಪೋರ್ಟ್‌ ಅನ್ನು ಪಡೆದಿರಲಿದೆ. ಟೀಸರ್‌ ಪ್ರಕಾರ ಈ ಫೋನ್ 20X ಜೂಮ್ ಸೌಲಭ್ಯವನ್ನು ಹೊಂದಿರಲಿದೆ. ಇದರ 12GB RAM + 256GB ಸ್ಟೋರೇಜ್‌ ಬೆಲೆಯು 54,999 ರೂ. ಗಳ ಆಸುಪಾಸಿನಲ್ಲಿ ಇರಲಿದೆ. ಇನ್ನು ಈ ಫೋನ್ ಎರಡು ಬಣ್ಣಗಳಲ್ಲಿ ಲಭ್ಯ ಆಗಲಿದ್ದು, ಅವು ಕ್ರಮವಾಗಿ ಆಲ್ಫಾ ಮತ್ತು ಲೆಜೆಂಡ್ ಬಣ್ಣಗಳ ಆಯ್ಕೆ ಆಗಿರಲಿವೆ.

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ 2K E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 3D ಕರ್ವ್ಡ್ ಪ್ರೊಟೆಕ್ಷನ್‌ ಅನ್ನು ಹೊಂದಿದ್ದು, ಕಡಿಮೆ-ತಾಪಮಾನದ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) 2.0 ತಂತ್ರಜ್ಞಾನವನ್ನು ಆಧರಿಸಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಸಕ್ರಿಯಗೊಳಿಸುತ್ತದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಫನ್‌ಟೌಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಹಾಗೆಯೇ ಈ ಫೋನ್‌ 4,700 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಫ್ಲ್ಯಾಶ್‌ಚಾರ್ಜ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಐಕ್ಯೂ 9 ಸ್ಮಾರ್ಟ್‌ಫೋನ್‌

ಐಕ್ಯೂ 9 ಸ್ಮಾರ್ಟ್‌ಫೋನ್‌

ಐಕ್ಯೂ 9 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ HD+ 10 ಬಿಟ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಫನ್‌ಟೌಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 4,350 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಐಕ್ಯೂ 9 SE ಸ್ಮಾರ್ಟ್‌ಫೋನ್‌

ಐಕ್ಯೂ 9 SE ಸ್ಮಾರ್ಟ್‌ಫೋನ್‌

ಐಕ್ಯೂ 9 SE ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12 GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಅನ್ನು ಹೊಂದಿದೆ..

Best Mobiles in India

English summary
IQOO 9T 5G India Launch Today: Expected Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X