ಭಾರತದಲ್ಲಿ ಐಕ್ಯೂ Z3 5G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಟೆಕ್ ವಲಯದಲ್ಲಿ ಐಕ್ಯೂ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಐಕ್ಯೂ Z3 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಜೂನ್ 8 ರಂದು ಬಿಡುಗಡೆ ಆಗುವುದು ಇದೀಗ ಅಧಿಕೃತವಾಗಿದೆ. ಈ ಸ್ಮಾರ್ಟ್‌ಫೋನ್ ಜೂನ್ 8 ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಈವೆಂಟ್ ಮೂಲಕ ಅನಾವರಣಗೊಳ್ಳಲಿದೆ.

ಹೌದು, ಐಕ್ಯೂ ಸಂಸ್ಥೆ ಹೊಸ ಐಕ್ಯೂ Z3 5G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್ ಮಾಡಿದೆ. ಜೊತೆಗೆ ಐಕ್ಯೂ Z3 5G ಸ್ಮಾರ್ಟ್‌ಫೋನ್‌ನ ಕೆಲವು ವಿವರಗಳನ್ನು ಬಹಿರಂಗಪಡಿಸಿದೆ. ಅಮೆಜಾನ್ ಇಂಡಿಯಾದ ಪಟ್ಟಿಯ ಪ್ರಕಾರ, ಐಕ್ಯೂ Z3 5G ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G 5G ಪ್ರೊಸೆಸರ್ ಹೊಂದಿರಲಿದೆ ಎನ್ನಲಾಗಿದೆ. ಅಲ್ಲದೆ ಇತ್ತೀಚಿನ ಸ್ನಾಪ್‌ಡ್ರಾಗನ್ ಚಿಪ್‌ಸೆಟ್ ಹೊಂದಿರುವ Z3 5G ಭಾರತದ ಮೊದಲ ಫೋನ್ ಆಗಲಿದೆ ಎಂದು ಕಂಪನಿ ಹೇಳಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಈ ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿರಲಿದೆ. ಅಲ್ಲದೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿರಲಿದೆ ಎನ್ನಲಾಗಿದೆ. ಇದು 401 ಪಿಪಿಐ ಸಾಂದ್ರತೆ ಒಳಗೊಂಡಿರಲಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G 5G ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಹೊಂದಿರುವ ಸಾಧ್ಯತೆ ಇದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1 ಟಿಬಿ ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್‌ನ ಚೀನಾ ಆವೃತ್ತಿಯು 4,400mAh ಬ್ಯಾಟರಿಯೊಂದಿಗೆ 55W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದೇ ಮಾದರಿಯಲ್ಲಿ ಭಾರತದಲ್ಲಿಯೂ ಲಭ್ಯವಾಗುವ ಸಾಧ್ಯತೆ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.1, ಯುಎಸ್ಬಿ ಟೈಪ್-ಸಿ, 3.5 ಎಂಎಂ ಹೆಡ್ಫೋನ್ ಜ್ಯಾಕ್ ಬೆಂಬಲಿಸಲಿದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆ 25,000 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








