iQOO Neo 10 Pro ಬಿಡುಗಡೆಗೆ ಸಿದ್ಧ; 6000mAh ಬ್ಯಾಟರಿ.. 512GB ಸ್ಟೋರೇಜ್.. ಲಾಂಚ್ ಯಾವಾಗ?
ಐಕ್ಯೂ (iQOO) ಕಂಪನಿಯು ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಅವುಗಳೇ, ಐಕ್ಯೂ ನಿಯೋ 10 (iQOO Neo 10) ಮತ್ತು ಐಕ್ಯೂ ನಿಯೋ 10 ಪ್ರೊ (iQOO Neo 10 Pro) ಮೊಬೈಲ್‌ಗಳು. ಈ ತಿಂಗಳ (ನವೆಂಬರ್) ಅಂತ್ಯದಲ್ಲಿ ಅಥವಾ ಡಿಸೆಂಬರ್ ತಿಂಗಳಲ್ಲಿ ಐಕ್ಯೂ ನಿಯೋ 10 (iQOO Neo 10) ಸರಣಿಯನ್ನು ರಿಲೀಸ್ ಮಾಡಲಿದೆ. ಅದಕ್ಕೂ ಮುನ್ನವೇ, ಹೊಸ ಫೋನಿನ ವೈಶಿಷ್ಟ್ಯಗಳನ್ನು ಬಹಿರಂಗಪಡಿಸಲಾಗಿದೆ. ಕಂಪನಿ ಯಾವೆಲ್ಲಾ ವಿಶೇಷತೆಗಳೊಂದಿಗೆ ಹೊಸ ಫೋನ್‌ಗಳನ್ನು ತರುತ್ತಿದೆ ಎಂಬುದನ್ನು ತಿಳಿಯೋಣ ಬನ್ನಿ.
ಐಕ್ಯೂ ತನ್ನ ಹೊಸ ನಿಯೋ 10 ಸರಣಿಯನ್ನು ಬಜೆಟ್ ಬೆಲೆಯಲ್ಲಿ ಬಿಡುಗಡೆ ಮಾಡಲಿದೆ. ಈಗಾಗಲೇ, ಐಕ್ಯೂ ನಿಯೋ 10 ಫೋನಿನ ಪ್ರಮುಖ ವೈಶಿಷ್ಟ್ಯಗಳು ಸೋರಿಕೆಯಾಗಿವೆ. ಇದೀಗ, ಐಕ್ಯೂ ನಿಯೋ 10 ಪ್ರೊ ಮೊಬೈಲ್‌ನ ಫೀಚರ್ಸ್‌ಗಳನ್ನು ಬಹಿರಂಗಪಡಿಸಲಾಗಿದೆ. ಮುಂಬರುವ ಫೋನ್ ಮೀಡಿಯಾಟೆಕ್ ಡೈಮೆನ್ಶನ್ 9400 ಪ್ರೊಸೆಸರ್ ಹೊಂದಿರಲಿದೆ. ಇದರೊಂದಿಗೆ 6.78 ಇಂಚಿನ ಡಿಸ್ಪ್ಲೇ, ಡ್ಯುಯಲ್ ಕ್ಯಾಮೆರಾ ಸೆಟಪ್, 6000mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ.

ಐಕ್ಯೂ ನಿಯೋ 10 ಪ್ರೊ ವೈಶಿಷ್ಟ್ಯಗಳು (ನಿರೀಕ್ಷಿತ)
ಡಿಸ್ಪ್ಲೇ ವಿವರ
ಟಿಪ್‌ಸ್ಟರ್ ಡಿಜಿಟಲ್ ಚಾಟ್ ಸ್ಟೇಷನ್ ಐಕ್ಯೂ ನಿಯೋ 10 ಪ್ರೊ ಮೊಬೈಲ್‌ನ ಪ್ರಮುಖ ವೈಶಿಷ್ಟ್ಯಗಳನ್ನು ಮೈಕ್ರೋ ಬ್ಲಾಗಿಂಗ್ ಸೈಟ್ ವೈಬೋನಲ್ಲಿ ಹಂಚಿಕೊಂಡಿದೆ. ಐಕ್ಯೂ ನಿಯೋ 10 ಪ್ರೊ ಮೊಬೈಲ್ 6.78 ಇಂಚಿನ 8T ಓಎಲ್‌ಇಡಿ ಫ್ಲಾಟ್ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು 1.5K ರೆಸಲ್ಯೂಶನ್, 144Hz ರಿಫ್ರೆಶ್ ದರದ ಬೆಂಬಲ ಪಡೆದಿರಲಿದೆ.
ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ ನಿಯೋ 10 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್ ಹೊಂದಿರಲಿದೆ. ಐಕ್ಯೂ ನಿಯೋ 10 ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 16GB RAM ಮತ್ತು 512GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿರಲಿದೆ.
ಕ್ಯಾಮೆರಾ ಸೆಟಪ್
ಕಂಪನಿಯು ಐಕ್ಯೂ ನಿಯೋ 10 ಪ್ರೊ ಅನ್ನು ಡ್ಯುಯಲ್ ಕ್ಯಾಮೆರಾ ಸೆಟಪ್‌ನೊಂದಿಗೆ ಬಿಡುಗಡೆ ಮಾಡಲಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, ಮತ್ತೊಂದು 50 ಮೆಗಾಪಿಕ್ಸೆಲ್ ಲೆನ್ಸ್ ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆ ಮಾಡಲು, ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮುಂಬರುವ ಐಕ್ಯೂ ನಿಯೋ 10 ಪ್ರೊ ಸ್ಮಾರ್ಟ್‌ಫೋನ್ 6,000mAh ಅಥವಾ ಅದಕ್ಕಿಂತ ದೊಡ್ಡ ಬ್ಯಾಟರಿಯನ್ನು ಹೊಂದಿರುವ ಸಾಧ್ಯತೆಯಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು.
ಇತರೆ ವೈಶಿಷ್ಟ್ಯಗಳು
ಐಕ್ಯೂ ನಿಯೋ 10 ಪ್ರೊ ಮೊಬೈಲ್ ಭದ್ರತೆಗಾಗಿ ಅಲ್ಟ್ರಾಸಾನಿಕ್ ಇನ್ ಸ್ಕ್ರೀನ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿರಲಿದೆ.
ಐಕ್ಯೂ ನಿಯೋ 10 ಫೋನಿನ ವೈಶಿಷ್ಟ್ಯಗಳು
ಐಕ್ಯೂ ನಿಯೋ 10 ಫೋನ್ 144Hz ರಿಫ್ರೆಶ್ ದರದೊಂದಿಗೆ 6.78 ಇಂಚಿನ ಫ್ಲಾಟ್ ಓಎಲ್‌ಇಡಿ 8T LTPO ಡಿಸ್ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 16GB RAM ಮತ್ತು 512GB ಸ್ಟೋರೇಜ್ ಆಯ್ಕೆ ಇರಲಿದೆ.
ಹೊಸ ಐಕ್ಯೂ ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದು 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರಲಿದೆ. ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಇರಲಿದೆ. ಜೊತೆಗೆ ಡ್ಯುಯಲ್ ಸ್ಪೀಕರ್‌ಗಳು, ಆಪ್ಟಿಕಲ್ ಇನ್ ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಐಆರ್ ಬ್ಲಾಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ.


Click it and Unblock the Notifications








