ಐಕ್ಯೂ ನಿಯೋ 3 5G ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಕ್ಯಾಮೆರಾ ಫೀಚರ್ಸ್!
ಚೀನಾ ಮೂಲದ ಐಕ್ಯೂ ಸ್ಮಾರ್ಟ್‌ಫೋನ್ ಕಂಪೆನಿ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾದ ಐಕ್ಯೂ ಮಾರುಕಟ್ಟೆಯಲ್ಲಿ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಸದ್ಯ ಇದೀಗ ತನ್ನ ಹೊಸ ಆಕರ್ಷಕ ಮಾದರಿಯ ಸ್ಮಾರ್ಟ್‌ಫೋನ್ ಐಕ್ಯೂ ನಿಯೋ 3 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 5G ಅನ್ನು ಬೆಂಬಲಿಸಲಿದ್ದು, ಹೊಸ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ.

ಹೌದು, ಚೀನಾ ಮೂಲದ ವಿವೋ ಕಂಪೆನಿಯ ಸಬ್‌ಬ್ರ್ಯಾಂಡ್ ಐಕ್ಯೂ ಕಂಪೆನಿ ತನ್ನ ಹೊಸ ಐಕ್ಯೂ ನಿಯೋ 3 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ವೇಗದ ಫೈಲ್ ನಿರ್ವಹಣೆಗಾಗಿ UFS 3.1 ಸಂಗ್ರಹಣೆಯನ್ನ ಹೊಂದಿದೆ. ಇದಲ್ಲದೆ ಇನ್ನು ಯಾವೆಲ್ಲಾ ಫೀಚರ್ಸ್‌ಗಳನ್ನ ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ
ಐಕ್ಯೂ ನಿಯೋ 3 5G ಸ್ಮಾರ್ಟ್‌ಫೋನ್ 1,080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇ 6.57 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್‌ಪ್ಲೇ ಇದಾಗಿದೆ. ಇನ್ನು ಈ ಡಿಸ್‌ಪ್ಲೇ 400pp ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನ ಹೊಂದಿದ್ದು, ಸ್ಕ್ರೀನ್ ಟು ಬಾಡಿ 90.4% ಅನುಪಾತವನ್ನ ಒಳಗೊಂಡಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರಸೆಸರ್ ವೇಗವನ್ನ ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 12GB RAM ಮತ್ತು 256GB, 6GB RAM+ 128GB, 8GB RAM + 128GB ಆಂತರಿಕ ಸಾಮರ್ಥ್ಯ ಹೊಂದಿರುವ ಮೂರು ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಆಯ್ಕೆಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ
ಐಕ್ಯೂ ನಿಯೋ 3 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ವ್ಯೂ, ಪೋರ್ಟ್ರೇಟ್, ಸ್ಲೋ ಮೋಷನ್, ಟೈಮ್-ಲ್ಯಾಪ್ಸ್ ಫೋಟೋಗ್ರಫಿ, ಪ್ರೊಫೆಷನಲ್ ಮೋಡ್, ಎಆರ್ ಕ್ಯೂಟ್ ಶಾಟ್, ಶಾರ್ಟ್ ವಿಡಿಯೋ, ಪಿಡಿಎಎಫ್ ಮತ್ತು ಸ್ಮಾರ್ಟ್ ಇಮೇಜ್ ರೆಕಗ್ನಿಷನ್ ಅನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 44W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈ-ಫೈ 6, ಎನ್‌ಎಫ್‌ಸಿ, 3.5 ಎಂಎಂ ಆಡಿಯೊ ಜ್ಯಾಕ್, ಹಾಗೂ ಜಿ ಎಸ್‌ಎ / ಎನ್‌ಎಸ್‌ಎಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್ ಪ್ರಿಂಟ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಐಕ್ಯೂ ನಿಯೋ 3 5G 6GB RAM + 128GB ಶೇಖರಣಾ ಸಾಮರ್ಥ್ಯದ ಸ್ಮಾರ್ಟ್‌ಫೋನ್ CNY 2,698 (ಸರಿಸುಮಾರು ರೂ. 28,900) ಬೆಲೆಯನ್ನ ಹೊಂದಿದ್ದರೆ, 8GB RAM + 128GB ಶೇಖರಣಾ ಆಯ್ಕೆಗಾಗಿ CNY 2,998 (ಸುಮಾರು ರೂ. 32,100), 12GB RAM + 128GB ಶೇಖರಣಾ ಆಯ್ಕೆಗಾಗಿ CNY 3,298 (ಸರಿಸುಮಾರು ರೂ .35,400), ಮತ್ತು 8GB RAM + 256GB ಶೇಖರಣಾ ಮಾದರಿಗಾಗಿ CNY 3,398 (ಸರಿಸುಮಾರು ರೂ. 36,400) ಬೆಲೆಯನ್ನ ನಿಗದಿಪಡಿಸಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 29 ರಿಂದ ಚೀನಾದಲ್ಲಿ ಮಾರಾಟವಾಗಲಿವೆ. ಪ್ರಾರಂಭವಾಗಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ನೈಟ್ ಬ್ಲ್ಯಾಕ್ ಮತ್ತು ಸ್ಕೈ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications





