Home
ಸುದ್ದಿಜಾಲ

ಶೀಘ್ರದಲ್ಲೇ ವಿವೊ ಐಕ್ಯೂಒ ನಿಯೋ 3 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ಇತ್ತೀಚಿನ ದಿನಗಳಲ್ಲಿ ಟೆಕ್‌ವಲಯಕ್ಕೆ ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ವಿವೋ ಕಂಪೆನಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಲು ಮುಂದಾಗಿದೆ. ಪ್ರತಿ ಭಾರಿಯು ಆಕರ್ಷಕ ಫೀಚರ್ಸ್‌ಗಳನ್ನ ಪರಿಚಯಿಸುವಲ್ಲಿ ಸೈ ಎನಿಸಿಕೊಂಡಿರುವ ವಿವೋ ಈ ಭಾರಿ ವಿವೋ ಐಕ್ಯೂಒ ನಿಯೋ 3 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್‌ 23 ರಂದು ಬಿಡುಗಡೆ ಆಗಲಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಹೌದು

ಹೌದು, ವಿವೋ ತನ್ನ ಐಕ್ಯೂಒ ನಿಯೋ ಬ್ರಾಂಡ್‌ನಲ್ಲಿ ವಿವೋ ಐಕ್ಯೂಒ ನಿಯೋ 3 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ವೇದಿಕೆ ಸಿದ್ದಪಡಿಸಿಕೊಳ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಕುರಿತು ವಿವೋ ಕಂಪೆನಿ ಟೀಸರ್‌ ಬಿಡುಗಡೆ ಮಾಡಿದೆ. ಇನ್ನು ಈ ಟೀಸರ್‌ನಲ್ಲಿ ಬಿಡುಗಡೆಯ ದಿನಾಂಕದ ಜೊತೆಗೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಬಹಿರಂಗ ಪಡಿಸಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 144Hz ಡಿಸ್‌ಪ್ಲೇಯನ್ನ ಹೊಂದಿರಲಿದೆ ಎಂದು ಹೇಳಿದೆ. ಅಷ್ಟಕ್ಕೂ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಐಕ್ಯೂಒ ನಿಯೋ 3 5G ಸ್ಮಾರ್ಟ್‌ಫೋನ್‌ ನುಬಿಯಾ ರೆಡ್ ಮ್ಯಾಜಿಕ್ 5G ಸ್ಮಾರ್ಟ್‌ಫೋನ್‌ ಮಾದರಿಯಲ್ಲಿ 144 Hz ಹೊಂದಿರುವ 6.6 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಹೆಚ್ಚಿನ ರಿಫ್ರೆಶ್‌ ರೇಟ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಹಾಗೇಯೆ ಪಂಚ್‌ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿರಲಿದೆ. ಅಲ್ಲದೆ ಈ ಡಿಸ್‌ಪ್ಲೆಯು ವೃತ್ತಾಕಾರದ ಕಟೌಟ್‌ ಮಾದರಿಯನ್ನ ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಗೇಮಿಂಗ್‌ ಮತ್ತು ವೀಡಿಯೊ ಕರೆಗಳು, ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿರಲಿದೆ ಎಂದು ಊಹಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾದ ಅವಕಾಶದ ಬಗ್ಗೆ ಯಾವುದೇ ಮಾಹಿತಿಯನ್ನ ಬಹಿರಂಗ ಪಡಿಸಿಲ್ಲ.

ಕ್ಯಾಮೆರಾ

ಕ್ಯಾಮೆರಾ

ಐಕ್ಯೂಒ ನಿಯೋ 3 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್‌ ಆಂಗಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಕ್ಯಾಮೆರಾವನ್ನ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನ ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ, ಇದು 44W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ 'Monster Touch Buttons' ಮತ್ತು '4D Game Vibration' ಫೀಚರ್ಸ್‌ಗಳನ್ನ ಸಹ ನಾವು ಫೋನ್‌ನಲ್ಲಿ ನಿರೀಕ್ಷಿಸಬಹುದು. ಮಾನ್ಸ್ಟರ್ ಟಚ್ ಬಟನ್‌ಗಳು ಫೋನ್‌ನ ಪಕ್ಕದ ಚೌಕಟ್ಟಿನಲ್ಲಿರುವ ಎರಡು ಪ್ರೆಸರ್ ಬಟನ್‌ಗಳನ್ನ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4D ಗೇಮಿಂಗ್ ಅನುಭವವನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 39,990ರೂ ಬೆಲೆಗೆ ಲಭ್ಯವಾಗುವ ಸಾಧ್ಯತೆ ಇದೆ.

Best Mobiles in India

English summary
The iQOO Neo 3 5G will feature a 144Hz display, similar to the Nubia Red Magic 5G smartphone. The company will launch its second 5G phone on April 23.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+