Home
ಸುದ್ದಿಜಾಲ

ಐಕ್ಯೂ ನಿಯೋ 5 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ತನ್ನ ಸಬ್‌ಬ್ರ್ಯಾಂಡ್‌ ಐಕ್ಯೂ ಹೆಸರಿನಲ್ಲಿ ಹಲವು ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈಗಾಗಲೇ ಐಕ್ಯೂ ಬ್ರಾಂಡ್‌ ನಿಯೋ ಸರಣಿಯಲ್ಲಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಐಕ್ಯೂ ನಿಯೋ 5 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 16 ರಂದು ಬಿಡುಗಡೆಯಾಗಲಿದೆ ಎಂದು ವಿವೋ ಸಬ್ ಬ್ರಾಂಡ್ ಐಕ್ಯೂ ವೀಬೊದಲ್ಲಿ ಪೋಸ್ಟ್ ಮಾಡಿದ ಟೀಸರ್ ಮೂಲಕ ಬಹಿರಂಗಪಡಿಸಿದೆ.

ಐಕ್ಯೋ ನಿಯೋ 5

ಹೌದು, ವಿವೋ ಸಬ್‌ಬ್ರಾಂಡ್‌ ಐಕ್ಯೋ ನಿಯೋ 5 ಸ್ಮಾರ್ಟ್‌ಫೋನ್‌ ಅನ್ನು ಮಾರ್ಚ್‌ ತಿಂಗಳಲ್ಲಿ ಲಾಂಚ್‌ ಮಾಡಲು ವೇದಿಕೆ ಸಿದ್ಧಪಡಿಸಿಕೊಂಡಿದೆ. ಇನ್ನು ಕಳೆದ ವರ್ಷ ಏಪ್ರಿಲ್‌ನಲ್ಲಿ ಚೀನಾದಲ್ಲಿ ಅನಾವರಣಗೊಂಡ ಐಕ್ಯೂ ನಿಯೋ 3 5G ಯ ಹೊಸ ಸ್ಮಾರ್ಟ್‌ಫೋನ್ ಉತ್ತರಾಧಿಕಾರಿಯಾಗಲಿದೆ. ಐಕ್ಯೂ ನಿಯೋ 5 ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಐಕ್ಯೂ ನಿಯೋ 5 ಸ್ಮಾರ್ಟ್‌ಫೋನ್‌ 1080x2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.57 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಈ ಡಿಸ್‌ಪ್ಲೇ 402PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಐಕ್ಯೂ ನಿಯೋ 5 ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ.

ಕ್ಯಾಮೆರಾ

ಕ್ಯಾಮೆರಾ

ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌, ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 88W ವೇಗದ ವೈರ್ಡ್ ಮತ್ತು 66W ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 8GB RAM + 128GBಗೆ CNY 2,998 (ಸುಮಾರು ರೂ. 34,000) ಆರಂಭಿಕ ಬೆಲೆಯೊಂದಿಗೆ ಫೋನ್ ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 8GB RAM + 256GB ಶೇಖರಣಾ ರೂಪಾಂತರಕ್ಕೆ CNY 3,298 (ಸುಮಾರು ರೂ. 37,500) ಬೆಲೆ ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನು ಭಾರತದಲ್ಲಿ ಯಾವಾ ಲಭ್ಯವಾಗಲಿದೆ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

Best Mobiles in India

English summary
iQoo Neo 5 is set to launch on March 16, Vivo sub-brand iQoo has revealed through a teaser posted on Weibo.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+