ಸ್ನ್ಯಾಪ್‌ಡ್ರಾಗನ್ 870 ಬೆಂಬಲಿತ ಐಕ್ಯೂ ನಿಯೋ 5 ಲೈಟ್‌ ಫೋನ್‌ ಲಾಂಚ್!

|

iQoo ಸಂಸ್ಥೆಯು ಈಗಾಗಲೆ ಕೆಲವು ವಿಶೇಷ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನದೆ ಛಾಪು ಮೂಡಿಸಿದೆ. ಐಕ್ಯೂ ಸಂಸ್ಥೆಯು ಇದೀಗ ನೂತನವಾಗಿ ಐಕ್ಯೂ ನಿಯೋ 5 ಲೈಟ್‌ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದರೊಂದಿಗೆ 44W ಫ್ಲ್ಯಾಶ್‌ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ.

ಟ್ರಿಪಲ್

ಹೌದು, ಐಕ್ಯೂ ಸಂಸ್ಥೆಯು ಹೊಸದಾಗಿ ಐಕ್ಯೂ ನಿಯೋ 5 ಲೈಟ್‌ ಚೀನಾದಲ್ಲಿ ಬಿಡುಗಡೆ ಮಾಡಿದೆ. ಆಕರ್ಷಕ ಲುಕ್‌ ಪಡೆದಿರುವ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಬ್ಯಾಟರಿ ಬ್ಯಾಕ್‌ಅಪ್‌ 4500mAh ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ಐಕ್ಯೂ ನಿಯೋ 5 ಲೈಟ್‌ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಐಕ್ಯೂ ನಿಯೋ 5 ಲೈಟ್‌ ಸ್ಮಾರ್ಟ್‌ಫೋನ್‌ 1080x2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.57 ಇಂಚಿನ ಫುಲ್‌ ಹೆಚ್‌ಡಿ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 144Hz ಸ್ಕ್ರೀನ್ ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಡಿಸ್‌ಪ್ಲೇ ಅನುಪಾತವು 20:9 ಆಗಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಐಕ್ಯೂ ನಿಯೋ 5 ಲೈಟ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಐಕ್ಯೂ ನಿಯೋ 5 ಲೈಟ್‌ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌, ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಕ್ಯೂ ನಿಯೋ 5 ಲೈಟ್‌ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದರೊಂದಿಗೆ 44W ಫ್ಲ್ಯಾಶ್‌ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಕ್ಯೂ ನಿಯೋ 5 ಲೈಟ್‌ ಸ್ಮಾರ್ಟ್‌ಫೋನ್‌ 8GB RAM + 128GBಗೆ ಚೀನಾದಲ್ಲಿ CNY 2,299 (ಭಾರತದಲ್ಲಿ ಅಂದಾಜು 26,000ರೂ.). ಹಾಗೆಯೇ 8GB RAM + 256GB ಶೇಖರಣಾ ಬೆಲೆಯು CNY 2,499 (ಭಾರತದಲ್ಲಿ ಅಂದಾಜು 28,300ರೂ) ಆಗಿದೆ. ಇನ್ನು ಹೈ ಎಂಡ್ ವೇರಿಯಂಟ್ ಬೆಲೆಯು CNY 2,699 (ಭಾರತದಲ್ಲಿ ಅಂದಾಜು 30,600ರೂ) ಎನ್ನಲಾಗಿದೆ.

Most Read Articles
Best Mobiles in India

English summary
The phone is powered by the Qualcomm Snapdragon 870 SoC and has a triple rear camera setup.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X