Home
ಸುದ್ದಿಜಾಲ

ಐಕ್ಯೂ ನಿಯೋ 5 ಸ್ಮಾರ್ಟ್‌ಫೋನ್‌ ಬಿಡುಗಡೆ! 66W ಫಾಸ್ಟ್‌ ಚಾರ್ಜಿಂಗ್‌ ವಿಶೇಷ!

ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ವಿವೋ ಸಂಸ್ತೆಯ ಸಬ್‌ಬ್ರ್ಯಾಂಡ್‌ ಐಕ್ಯೂ ಕಂಪೆನಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಐಕ್ಯೂ ಸಂಸ್ಥೆ ಇದೀಗ ಹೊಸ ಐಕ್ಯೂ ನಿಯೋ 5 ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಮೂರು RAM ಮತ್ತು ಶೇಖರಣಾ ಸಂರಚನೆಗಳು ಹಾಗೂ ಮೂರು ಬಣ್ಣ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಫೋನ್‌ ಸ್ಲಿಮ್ ಬೆಜೆಲ್ ಮತ್ತು ಪಂಚ್-ಹೋಲ್‌ ಕಟೌಟ್ ಅನ್ನು ಹೊಂದಿದೆ.

ಐಕ್ಯೂ ಸಂಸ್ಥೆ

ಹೌದು, ಐಕ್ಯೂ ಸಂಸ್ಥೆ ಹೊಸ ಐಕ್ಯೂ ನಿಯೋ 5 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದ್ದು, ಇದು 66W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಐಕ್ಯೂ ನಿಯೋ 5 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62-ಇಂಚಿನ ಫುಲ್‌-ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 300Hz ಟಚ್‌ ಸ್ಯಾಂಪಲ್‌ ರೇಟ್‌ ಮತ್ತು 397ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ ಇದು HDR10 / HDR10 + ಅನ್ನು ಸಹ ಬೆಂಬಲಿಸುತ್ತದೆ. ಹಾಗೆಯೇ ಈ ಡಿಸ್‌ಪ್ಲೇ 91.45% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM+128GB , 8GB RAM +256GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಐಕ್ಯೂ ನಿಯೋ 5 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕಪ್ಪು ಮತ್ತು ವೈಟ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಐಕ್ಯೂ ನಿಯೋ 5 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ V 5.1, NFC, GPS ಮತ್ತು ಚಾರ್ಜಿಂಗ್‌ಗಾಗಿ USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಮಲ್ಟಿ-ಟರ್ಬೊ 5.0 ತಂತ್ರಜ್ಞಾನವಿದೆ, ಇದು ಶೇಖರಣೆಯನ್ನು ವಿಸ್ತರಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೊ ಐಕ್ಯೂ ನಿಯೋ 5 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB RAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ CNY 2,499 (ಸುಮಾರು ರೂ. 27,900) ಬೆಲೆಯನ್ನು ಹೊಂದಿದೆ. ಇನ್ನು 8GB RAM +256GB ಆಯ್ಕೆಗೆ CNY 2,699 (ಸುಮಾರು ರೂ. . 30,200) ಮತ್ತು 12GB RAM + 256GB ಶೇಖರಣಾ ರೂಪಾಂತರವು CNY 2,999 (ಸುಮಾರು ರೂ. 33,500) ಬೆಲೆಯನ್ನು ಹೊಂದಿದೆ. ಇದು ಕ್ಲೌಡ್ ಶ್ಯಾಡೋ ಬ್ಲೂ, ನೈಟ್ ಶ್ಯಾಡೋ ಬ್ಲ್ಯಾಕ್ ಮತ್ತು ಪಿಕ್ಸೆಲ್ ಆರೆಂಜ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇದೇ ಮಾರ್ಚ್ 22 ರಂದು ಚೀನಾದಲ್ಲಿ ಮಾರಾಟವಾಗಲಿದೆ.

Best Mobiles in India

English summary
iQoo Neo 5 was launched in China on Tuesday by the Vivo sub-brand and it comes with some impressive specifications.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+