Home
ಸುದ್ದಿಜಾಲ

ಈ ವೇಗದ ಮೊಬೈಲ್‌ಗೆ ಈಗ ಜಬರ್ದಸ್ತ್‌ ಡಿಸ್ಕೌಂಟ್‌!..ಆಫರ್‌ ಬೆಲೆ ಎಷ್ಟು?

ಮೊಬೈಲ್‌ ಮಾರುಕಟ್ಟೆಯಲ್ಲಿ ಐಕ್ಯೂ ಸಂಸ್ಥೆಯು ಕೆಲವು ಆಕರ್ಷಕ ಫೋನ್‌ಗಳ ಮೂಲಕ ಗಮನ ಸೆಳೆದಿದೆ. ಆ ಪೈಕಿ ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ನಲ್ಲಿ ಸಖತ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ನೀಡಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ 29% ರಷ್ಟು ಡಿಸ್ಕೌಂಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 34,999ರೂ. ಹೊಂದಿದ್ದು, 24,999ರೂ. ಗಳಿಗೆ ಖರೀದಿಗೆ ಈಗ ಲಭ್ಯ ಇದೆ. ಹಾಗೆಯೇ ಗ್ರಾಹಕರಿಗೆ ಆಯ್ದ ಬ್ಯಾಂಕ್‌ ಆಫರ್‌ ಕೊಡುಗೆಗಳು ಸಹ ಲಭ್ಯವಾಗಲಿವೆ.

ಈ ವೇಗದ ಮೊಬೈಲ್‌ಗೆ ಈಗ ಜಬರ್ದಸ್ತ್‌ ಡಿಸ್ಕೌಂಟ್‌!..ಆಫರ್‌ ಬೆಲೆ ಎಷ್ಟು?

ಅಂದಹಾಗೆ ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಕಾರ್ಯವೈಖರಿಯನ್ನು ಒಳಗೊಂಡಿದ್ದು, ಇತ್ತೀಚಿನ ಓಎಸ್‌ ಸಪೋರ್ಟ್‌ ಪಡೆದಿದೆ. ಜೊತೆಗೆ 64ಎಂಪಿ ಪ್ರಾಥಮಿಕ ಕ್ಯಾಮೆರಾ ಹೊಂದಿದ್ದು, 16ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಇನ್ನುಳಿದಂತೆಐಕ್ಯೂ ನಿಯೋ 6 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ ನಿಯೋ 6 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ : ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, 360Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಪಡೆದುಕೊಂಡಿದೆ.

ಐಕ್ಯೂ ನಿಯೋ 6 ಪ್ರೊಸೆಸರ್‌ ಯಾವುದು : ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್‌ OS 12 ನಲ್ಲಿ ರನ್ ಸಪೋರ್ಟ್‌ ಹೊಂದಿದೆ. ಅಲ್ಲದೇ 12 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಆಯ್ಕೆ ಅನ್ನು ಒಳಗೊಂಡಿದ್ದು, ಗೇಮಿಂಗ್ ಗಾಗಿ ಸುಧಾರಿತ ಥರ್ಮಲ್ ಮ್ಯಾನೇಜ್‌ಮೆಂಟ್‌ಗಾಗಿ ಲಿಕ್ವಿಡ್ ಕೂಲಿಂಗ್ ವೇಪರ್ ಚೇಂಬರ್ ಪಡೆದಿದೆ.

ಐಕ್ಯೂ ನಿಯೋ 6 ಟ್ರಿಪಲ್‌ ಕ್ಯಾಮೆರಾ ಸೆನ್ಸಾರ್ ಮಾಹಿತಿ : ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರ ಜೊತೆಗೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಪಡೆದುಕೊಂಡಿದೆ.

ಐಕ್ಯೂ ನಿಯೋ 6 ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 80W ಫ್ಲ್ಯಾಶ್‌ ಚಾರ್ಜ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5.2, GPS ಮತ್ತು USB ಟೈಪ್-C ಪೋರ್ಟ್ ಸೌಲಭ್ಯ ಲಭ್ಯ. ಇದರೊಂದಿಗೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಸೌಲಭ್ಯ ಇವೆ.

Best Mobiles in India

English summary
iQOO Neo 6 5G available at huge discount price on amazon website. know the offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+